Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:6 - ಕನ್ನಡ ಸತ್ಯವೇದವು J.V. (BSI)

6-7 ಆತನು ಇನ್ನೂ ಗಲಿಲಾಯದಲ್ಲಿದ್ದಾಗ - ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6-7 ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ. ಆತನು ಇನ್ನೂ ಗಲಿಲಾಯದಲ್ಲಿದ್ದಾಗ, ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು, ಶಿಲುಬೆಗೆ ಹಾಕಲ್ಪಟ್ಟು, ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವುದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗಲಿಲೇಯದಲ್ಲಿದ್ದಾಗಲೇ ಅವರು ನಿಮಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು ಇಲ್ಲಿಲ್ಲ. ಆತನು ಜೀವಂತವಾಗಿ ಎದ್ದಿದ್ದಾನೆ! ಆತನು ಗಲಿಲಾಯದಲ್ಲಿದ್ದಾಗ ಹೇಳಿದ ವಿಷಯ ಜ್ಞಾಪಕವಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಇಲ್ಲಿಲ್ಲ; ಜೀವಂತರಾಗಿ ಎದ್ದಿದ್ದಾರೆ! ಅವರು ಇನ್ನೂ ಗಲಿಲಾಯದಲ್ಲಿದ್ದಾಗಲೇ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೊ ಹಿತ್ತೆ ನಾ ತೆಕಾ ಝಿತ್ತೊ ಕರುನ್ ಉಟ್ವುನ್ ಹೊಲಾ. ಗಾಲಿಲಿಯಾತ್ ಹೊತ್ತ್ಯಾ ತನ್ನಾ ತೆನಿ ತುಮ್ಕಾ ಕಾಯ್ ಸಾಂಗಟಲ್ಲ್ಯಾನ್ ಮನುನ್ ಯಾದ್ ಕರುನ್ ಘೆವಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:6
19 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ ಎಂದು ಹೇಳಿದನು.


ಇದಲ್ಲದೆ ಆತನು - ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತವಾಗಿ ಕೊಲ್ಲಲ್ಪಟ್ಟು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವದಕ್ಕೆ ಪ್ರಾರಂಭಮಾಡಿದನು.


ತಾನು ಹೇಳಿದಂತೆ ಎದ್ದಿದ್ದಾನೆ; ಬನ್ನಿ, ಆತನು ಮಲಗಿದ್ದ ಸ್ಥಳವನ್ನು ನೋಡಿರಿ;


ಯೇಸು ಮಾಡಿದ ಎಲ್ಲಾ ಕಾರ್ಯಗಳಿಗೆ ಎಲ್ಲರು ಆಶ್ಚರ್ಯಪಡುತ್ತಿರಲಾಗಿ ಆತನು ತನ್ನ ಶಿಷ್ಯರಿಗೆ - ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ; ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.


ದೊರೆಯೇ, ಆ ಮೋಸಗಾರನು ಬದುಕಿದ್ದಾಗ ತಾನು ಮೂರು ದಿನದ ಮೇಲೆ ಏಳುತ್ತೇನೆ ಅಂತ ಹೇಳಿದ್ದು ನಮ್ಮ ನೆನಪಿಗೆ ಬಂತು;


ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು.


ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿಹಗಲು ಭೂಗರ್ಭದೊಳಗೆ ಇರುವನು.


ಅವನು ಅವರಿಗೆ - ಬೆರಗಾಗಬೇಡಿರಿ. ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತೀರಲ್ಲವೇ. ಆತನು ಜೀವಿತನಾಗಿ ಎದ್ದಿದ್ದಾನೆ; ಇಲ್ಲಿ ಇಲ್ಲ. ಆತನನ್ನು ಇಟ್ಟಿದ್ದ ಸ್ಥಳವು ಇದೇ, ನೋಡಿರಿ.


ಆ ಸ್ತ್ರೀಯರು ಭಯ ಹಿಡಿದವರಾಗಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿರುವಾಗ ಆ ಪುರುಷರು ಅವರಿಗೆ - ಸತ್ತವರೊಳಗೆ ಬದುಕಿರುವವನನ್ನು ಹುಡುಕುವದೇನು? ಆತನು ಇಲ್ಲಿ ಇಲ್ಲ, ಎದ್ದಿದ್ದಾನೆ.


ಸ್ವಾವಿು ಎದ್ದದ್ದು ನಿಜ, ಆತನು ಸೀಮೋನನಿಗೆ ಕಾಣಿಸಿಕೊಂಡನು ಎಂದು ಹೇಳುತ್ತಿದ್ದರು.


ಆತನನ್ನು ದೇವರು ಮರಣವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಯಾಕಂದರೆ ಮರಣವು ಆತನನ್ನು ಹಿಡುಕೊಂಡಿರುವದು ಅಸಾಧ್ಯವಾಗಿತ್ತು.


ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು