Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:1 - ಕನ್ನಡ ಸತ್ಯವೇದವು J.V. (BSI)

1 ಚಕ್ರವರ್ತಿಯಾದ ತಿಬೇರಿಯನು ಪಟ್ಟಕ್ಕೆ ಬಂದ ಹದಿನೈದನೆಯ ವರುಷದಲ್ಲಿ, ಪೊಂತ್ಯಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಉಪರಾಜನೂ ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅದು ತಿಬೇರಿಯಸ್ ಚಕ್ರವರ್ತಿಯ ಆಡಳಿತದ ಹದಿನೈದನೆಯ ವರ್ಷ. ಆ ಕಾಲದಲ್ಲಿ ಜುದೇಯ ಪ್ರಾಂತ್ಯಕ್ಕೆ ಪೊನ್ಸಿಯುಸ್ ಪಿಲಾತನು ರಾಜ್ಯಪಾಲನಾಗಿದ್ದನು. ಗಲಿಲೇಯ ಪ್ರಾಂತ್ಯಕ್ಕೆ ಹೆರೋದನೂ ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೆ ಇವನ ತಮ್ಮನಾದ ಫಿಲಿಪ್ಪನೂ ಮತ್ತು ಅಬಿಲೇನೆ ಪ್ರಾಂತ್ಯಕ್ಕೆ ಲುಸಾನಿಯನೂ ಸಾಮಂತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಚಕ್ರವರ್ತಿಯಾದ ತಿಬೇರಿಯಸ್ ಸೀಸರನ ಆಳ್ವಿಕೆಯ ಹದಿನೈದನೇ ವರ್ಷ ಅದಾಗಿತ್ತು. ಆಗ, ಪೊಂತ್ಯ ಪಿಲಾತನು ಜುದೇಯ ಪ್ರಾಂತ್ಯಕ್ಕೂ ಹೆರೋದನು ಗಲಿಲಾಯಕ್ಕೂ ಹೆರೋದನ ಸಹೋದರನಾದ ಫಿಲಿಪ್ಪನು ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೂ ಲೂಸನ್ಯನು ಅಬಿಲೇನೆ ಪ್ರಾಂತ್ಯಕ್ಕೂ ಅಧಿಪತಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕೈಸರ್ ತಿಬೇರಿಯನ ಆಳ್ವಿಕೆಯ ಕಾಲದ ಹದಿನೈದನೆಯ ವರ್ಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಚತುರಾಧಿಪತಿಯೂ ಅವನ ಸಹೋದರ ಫಿಲಿಪ್ಪನು ಇತುರಾಯ ಮತ್ತು ತ್ರಕೋನಿತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾಧಿಪತಿಯೂ ಆಗಿದ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತಿಬೆರಿಯಸ್ ಕೈಸಾರ್ಯಾಚ್ ಮನ್ತಲ್ಯಾ ಚಕ್ರವರ್ತಿಚ್ಯಾ ಪಂದ್ರಾವ್ಯಾ ವರ್ಸಾತ್, ಪೊನಿತುಸಿ ಪಿಲಾತ್ ಮನ್ತಲೊ ಜುದೆಯಾಚೊ ಮೊಟೊ ಅದಿಕಾರಿ ಹೊತ್ತೊ,ಹೆರೊದ್ ಮನ್ತಲೊ ಗಾಲಿಲಿಯಾಚೊ ಅದಿಕಾರ್ ಚಾಲ್ವುತಲೊ ಹೊತ್ತೊ,ಅನಿ ತೆಚೊ ಭಾವ್ ಫಿಲಿಪ್, ಇತುರೆ, ಅನಿ ತ್ರಿಕೊನಿತಿಸ್ ಮನ್ತಲ್ಯಾ ಜಾಗ್ಯಾಂಚೊ ಅದಿಕಾರಿ ಅನಿ ಅಬಿಲೆನೆ ಮನ್ತಲ್ಯಾ ಜಾಗ್ಯಾರ್ ಲುಸಾನಿ ಮನ್ತಲೊ ಅದಿಕಾರಿ ಹೊತ್ತೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:1
19 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ರಾಜ್ಯವೆಲ್ಲಾ ಖಾನೆಷುಮಾರಿ ಬರಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.


ಆತನನ್ನು ಕಟ್ಟಿಸಿ ತೆಗೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.


ಆಮೇಲೆ ರಾಜನೂ ದೇಶಾಧಿಪತಿಯೂ ಬೆರ್ನಿಕೆಯೂ ಅವರ ಸಂಗಡ ಕೂತಿದ್ದವರೂ ಎದ್ದು ಆಚೆಗೆ ಹೋಗಿ -


ಎರಡು ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂಬ ಕೋರಿಕೆಯಿಂದ ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟುಹೋದನು.


ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ ಪೊಂತ್ಯ ಪಿಲಾತನೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತವಾಗಿ ಕೂಡಿಕೊಂಡು


ಪಿಲಾತನು - ನೀವು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ


ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಪಡುವವನಾದನು. ಯಾಕಂದರೆ ಸತ್ತಿದ್ದ ಯೋಹಾನನು ತಿರಿಗಿ ಬದುಕಿಬಂದಿದ್ದಾನೆಂದು ಕೆಲವರೂ,


ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿವಿುತ್ತವಾಗಿಯೂ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿವಿುತ್ತವಾಗಿಯೂ


ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದ್ಯಳ ನಿವಿುತ್ತ ಯೋಹಾನನನ್ನು ಹಿಡಿತರಿಸಿ ಸೆರೆಯಲ್ಲಿ ಕಟ್ಟಿ ಹಾಕಿಸಿದ್ದನು. ಆ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ.


ಹೆರೋದನು ಹೆರೋದ್ಯಳ ನಿವಿುತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಯಲ್ಲಿ ಹಾಕಿಸಿದ್ದನು. ಆ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ.


ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದವರ ಮುಂದೆ ನಾಟ್ಯವಾಡಿ ಹೆರೋದನನ್ನು ಮೆಚ್ಚಿಸಿದ್ದರಿಂದ


ಹೀಗಿರಲಾಗಿ ಕೈಸರನಿಗೆ ತೆರಿಗೆ ಕೊಡುವದು ಸರಿಯೋ ಸರಿಯಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.


ಹೀಗಿರಲಾಗಿ ಅವಳಿಗೆ ಅನುಕೂಲವಾದ ದಿವಸ ಬಂತು; ಹೇಗಂದರೆ ಹೆರೋದನು ತಾನು ಹುಟ್ಟಿದ ದಿವಸದಲ್ಲಿ ಪ್ರಭುಗಳಿಗೂ ಸಹಸ್ರಾಧಿಪತಿಗಳಿಗೂ ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಮಾಡಿಸಿದಾಗ


ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಆತನಿಗೆ - ನೀನು ಇಲ್ಲಿಂದ ಹೊರಟುಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು