Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:13 - ಕನ್ನಡ ಸತ್ಯವೇದವು J.V. (BSI)

13 ನೇವಿುಸಿದ ಹಾಸಲಿಗಿಂತ ಹೆಚ್ಚಾಗಿ ಏನೂ ಎಳಕೊಳ್ಳಬೇಡಿರಿ ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು, “ನೇಮಿಸಲ್ಪಟ್ಟಿದ್ದಕ್ಕಿಂತ ಹೆಚ್ಚಾಗಿ ಏನೂ ತೆಗೆದುಕೊಳ್ಳಬೇಡಿರಿ” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಗೊತ್ತು ಮಾಡಿರುವುದಕ್ಕಿಂತ ಹೆಚ್ಚಾಗಿ ಕಿತ್ತುಕೊಳ್ಳಬೇಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೋಹಾನನು ಅವರಿಗೆ, “ನೇಮಕವಾದ ತೆರಿಗೆಗಿಂತ ಹೆಚ್ಚಾಗಿ ಜನರಿಂದ ತೆಗೆದುಕೊಳ್ಳಬೇಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಯೋಹಾನನು ಅವರಿಗೆ, “ನಿಮಗೆ ಆಜ್ಞಾಪಿಸಿದ್ದಕ್ಕಿಂತ ಹೆಚ್ಚೇನೂ ವಸೂಲಿ ಮಾಡಬೇಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆಂಕಾ ಜುವಾಂವಾಕ್ “ಕವ್ಡೆ ವಸುಲ್ ಕರ್‍ತಲೆ ಹಾಯ್,ತೆಚೆನ್ ಜಾಸ್ತಿಚೆ ವಸುಲ್ ಕರುನಕಾಶಿ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:13
15 ತಿಳಿವುಗಳ ಹೋಲಿಕೆ  

ಕಳ್ಳರು ಲೋಭಿಗಳು ಕುಡಿಕರು ಬೈಯುವವರು ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.


ಆದರೆ ಜಕ್ಕಾಯನು ನಿಂತುಕೊಂಡು ಸ್ವಾವಿುಗೆ - ಸ್ವಾಮೀ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಎಳಕೊಂಡದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು.


ಕಳವು ಮಾಡುವವನು ಇನ್ನು ಮೇಲೆ ಕಳವುಮಾಡದೆ ಕೈಯಿಂದ ಯಾವದೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕಷ್ಟದಲ್ಲಿರುವವರಿಗೆ ಕೊಡುವದಕ್ಕೆ ಅವನಿಂದಾಗುವದು.


ಮನುಷ್ಯನೇ, ಒಳ್ಳೆಯದು ಇಂಥದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಷ್ಟೆ; ನ್ಯಾಯವನ್ನು ಆಚರಿಸುವದು, ಕರುಣೆಯಲ್ಲಿ ಆಸಕ್ತನಾಗಿರುವದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವದು, ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಇದೇ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ.


ಆದಕಾರಣ ಇಷ್ಟುಮಂದಿ ಸಾಕ್ಷಿಯವರು ಮೇಘದೋಪಾದಿಯಲ್ಲಿ ನಮ್ಮ ಸುತ್ತಲು ಇರುವದರಿಂದ ನಮಗೆ ಅಭ್ಯಂತರ ಮಾಡುವ ಎಲ್ಲಾ ಭಾರವನ್ನೂ ಹತ್ತಿಕೊಳ್ಳುವ ಪಾಪವನ್ನೂ ನಾವು ಸಹ ತೆಗೆದಿಟ್ಟು


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವದು.


ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು; ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.


ಸುಂಕದವರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು - ಗುರುವೇ, ನಾವೇನು ಮಾಡಬೇಕು ಎಂದು ಅವನನ್ನು ಕೇಳಲು ಅವನು -


ಸಿಪಾಯಿಗಳು ಸಹ ಬಂದು - ನಾವು ಏನು ಮಾಡಬೇಕು ಎಂದು ಅವನನ್ನು ಕೇಳಿದಾಗ ಅವನು ಅವರಿಗೆ - ಯಾರನ್ನಾದರೂ ಬೆದರಿಸಬೇಡಿರಿ; ಯಾರ ಮೇಲಾದರೂ ಸುಳ್ಳುದೂರು ತಂದು ದುಡ್ಡು ಕಸಕೊಳ್ಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು