Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:22 - ಕನ್ನಡ ಸತ್ಯವೇದವು J.V. (BSI)

22 ಮತ್ತು ಪವಿತ್ರಾತ್ಮನು ದೇಹಾಕಾರವಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ - ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪವಿತ್ರಾತ್ಮನು ಆತನ ಮೇಲೆ ಪಾರಿವಾಳದ ರೂಪದಲ್ಲಿ ಇಳಿದು ಬಂದನು. ಆ ಕೂಡಲೇ, ಪರಲೋಕದಿಂದ ಧ್ವನಿಯೊಂದು ಹೊರಟು, “ನೀನು ನನ್ನ ಪ್ರಿಯ ಮಗನು, ನಾನು ನಿನನ್ನು ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಪವಿತ್ರಾತ್ಮರು ದೇಹಾಕಾರವಾಗಿ ಪಾರಿವಾಳದಂತೆ ಯೇಸುವಿನ ಮೇಲೆ ಇಳಿದರು. ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅನಿ ಪಾರಿವಾಳಾಚ್ಯಾ ರುಪಾರ್ ಪವಿತ್ರ್ ಆತ್ಮೊ ತೆಚ್ಯಾ ವರ್‍ತಿ ಉತ್ರುನ್ ಯೆಲೊ ಅನಿ “ತಿಯಾ ಮಾಜ್ಯಾ ಮನಾ ಸರ್ಕೊ ಮಾಜೊ ಅಪುರ್‍ಬಾಯೆಚೊ ಲೆಕ್” ಮನುನ್ ಸರ್‍ಗಾ ವೈನಾ ಎಕ್ ಧನ್ ಆಯ್ಕೊ ಯೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:22
21 ತಿಳಿವುಗಳ ಹೋಲಿಕೆ  

ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ - ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ.


ಇದಲ್ಲದೆ ಯೋಹಾನನು ಸಾಕ್ಷಿಕೊಟ್ಟು ಹೇಳಿದ್ದೇನಂದರೆ - ದೇವರಾತ್ಮವು ಪಾರಿವಾಳದಂತೆ ಆಕಾಶದಿಂದ ಇಳಿಯುವದನ್ನು ನೋಡಿದೆನು. ಅದು ಆತನ ಮೇಲೆ ನೆಲೆಗೊಂಡಿತು.


ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಆ ಕಲ್ಲನ್ನು ಮನುಷ್ಯರು ನಿರಾಕರಿಸಿದರೂ ದೇವರು ಅದನ್ನು ಆಯಲ್ಪಟ್ಟದ್ದೂ ಮಾನ್ಯವಾದದ್ದೂ ಎಂದು ಎಣಿಸಿದನು.


ಇಗೋ, ನನ್ನ ಸೇವಕನು; ಈತನನ್ನು ನಾನು ಆರಿಸಿಕೊಂಡೆನು; ಈತನು ನನಗೆ ಇಷ್ಟನು; ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು; ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.


ದೇವರು ನಮ್ಮನ್ನು ಅಂಧಕಾರದ ದೊರೆತನದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ರಾಜ್ಯದೊಳಗೆ ಸೇರಿಸಿದನು.


ಆತನು ಅವರಿಗೆ - ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ ಎಂದು ಹೇಳುತ್ತಿರುವಾಗ


ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರು ಅವನಲ್ಲಿ ಇಷ್ಟಪಟ್ಟರೆ ಈಗ ಅವನನ್ನು ಬಿಡಿಸಲಿ; ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ ಎಂದು ಹಾಸ್ಯದಿಂದ ಮಾತಾಡುತ್ತಿದ್ದರು.


ಆ ಕಾಲದಲ್ಲಿ ಯೇಸು ಯೋಹಾನನಿಂದ ಸ್ನಾನಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್‍ಹೊಳೆಗೆ ಬಂದನು.


ಯೇಸು ಸ್ನಾನಮಾಡಿಸಿಕೊಂಡ ಕೂಡಲೆ ನೀರಿನಿಂದ ಮೇಲಕ್ಕೆ ಬರಲು ಇಗೋ, ಆತನಿಗೆ ಆಕಾಶವು ತೆರೆಯಿತು; ಮತ್ತು ದೇವರ ಆತ್ಮ ಪಾರಿವಾಳದ ಹಾಗೆ ಇಳಿದು ತನ್ನ ಮೇಲೆ ಬರುವದನ್ನು ಕಂಡನು.


ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ಸ್ನಾನಮಾಡಿಸಿಕೊಂಡನು.


ಆಗ - ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಅಷ್ಟರಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಆಕಾಶವಾಣಿ ಆಯಿತು.


ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ ದೇವರು ಅವರಿಗೆ ಒಲಿಯುತ್ತಾನೆ ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.


ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಧ್ವನಿಯನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ,


ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಅದಕ್ಕೆ - ಮಹಿಮೆಪಡಿಸಿದ್ದೇನೆ, ತಿರಿಗಿ ಮಹಿಮೆಪಡಿಸುವೆನು ಎಂದು ಆಕಾಶವಾಣಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು