Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:3 - ಕನ್ನಡ ಸತ್ಯವೇದವು J.V. (BSI)

3 ಅವನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ - ನೀವು ಪಾಪ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ, ನೀವು ಪಾಪ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆತನು ಜೋರ್ಡನ್ ನದಿಯ ಪರಿಸರ ಪ್ರಾಂತದಲ್ಲೆಲ್ಲಾ ಸಂಚರಿಸುತ್ತಾ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ ಮತ್ತು ಸ್ನಾನದೀಕ್ಷೆ ಪಡೆದುಕೊಳ್ಳಿರಿ; ದೇವರು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವರು,” ಎಂದು ಸಾರಿ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋಹಾನನು ಜೋರ್ಡನ್ ನದಿಯ ಸುತ್ತಲಿರುವ ಪ್ರದೇಶದಲ್ಲೆಲ್ಲಾ ಸಂಚರಿಸಿ, ತಮ್ಮ ಪಾಪಪರಿಹಾರಕ್ಕಾಗಿ ಅವರು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಜನರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಯೊರ್ದನ್ ನದಿಯ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು, ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಪಡೆಯುವದರ ಕುರಿತು ಸಾರಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆಚೆಸಾಟ್ನಿ ಜುವಾಂವ್ ಜೊರ್ದಾನ್ ನ್ಹಯ್ಚ್ಯಾ ಭೊತ್ಯಾನ್ಲ್ಯಾ ಜಾಗ್ಯಾರ್, “ತುಮ್ಚೆ ಪಾಪಾಚೆ ಜಿವನ್ ಬದ್ಲಾ, ಅನಿ ಬಾಲ್ತಿಮ್ ಘೆವಾ, ಅನಿ ದೆವ್ ತುಮ್ಚಿ ಪಾಪಾ ಮಾಪ್ ಕರ್‍ತಾ” ಮನುನ್ ಸಾಂಗುನ್ಗೆತ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:3
12 ತಿಳಿವುಗಳ ಹೋಲಿಕೆ  

ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಪರಿಹಾರವೆಂಬ ರಕ್ಷಣೆಯ ತಿಳುವಳಿಕೆಯನ್ನು ಆತನ ಪ್ರಜೆಗೆ ಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ


ಈಗ ನೀನೇಕೆ ಸಾವಕಾಶಮಾಡುತ್ತೀ? ಎದ್ದು ಆತನ ಹೆಸರನ್ನು ಹೇಳಿಕೊಳ್ಳುವವನಾಗಿ ದೀಕ್ಷಾಸ್ನಾನಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ ಅಂದನು.


ಅದಕ್ಕೆ ಪೌಲನು - ಯೋಹಾನನು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರವಾತನಲ್ಲಿ ಅಂದರೆ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬದಾಗಿ ಜನರಿಗೆ ಹೇಳಿದನು ಎಂದು ಹೇಳಲು


ಆ ರಕ್ಷಕನೇ ಯೇಸು. ಆತನ ಆಗಮನಕ್ಕೆ ಮುಂಚೆ ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ - ನೀವು ದೇವರ ಕಡೆಗೆ ತಿರುಗಿಕೊಂಡು ಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿದನು.


ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ - ಗುರುವೇ, ಯೊರ್ದನ್‍ಹೊಳೆಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಅವನೂ ಸ್ನಾನ ಮಾಡಿಸುತ್ತಾನೆ, ಅವನ ಬಳಿಗೆ ಎಲ್ಲರು ಹೋಗುತ್ತಾರೆ ಎಂದು ಹೇಳಲು


ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ಇದೆಲ್ಲಾ ಯೊರ್ದನ್ ಹೊಳೆಯ ಆಚೇಕಡೆಯಲ್ಲಿರುವ ಬೇಥಾನ್ಯದಲ್ಲಿ ನಡೆಯಿತು. ಅಲ್ಲಿ ಯೋಹಾನನು ಸ್ನಾನ ಕೊಡುತ್ತಿದ್ದನು.


ಇಸ್ರಾಯೇಲ್ಯರಲ್ಲಿ ಅನೇಕರನ್ನು ಅವರ ದೇವರಾಗಿರುವ ಕರ್ತನ ಕಡೆಗೆ ತಿರುಗಿಸುವನು. ಅವನು ಆತನ ಮುಂದೆ ಹೋಗಿ ಎಲೀಯನ ಗುಣಶಕ್ತಿಗಳಿಂದ ಕೂಡಿದವನಾಗಿ


ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್‍ಹೊಳೆಯಿಂದ ಹಿಂತಿರುಗಿ ದೇವರಾತ್ಮನಿಂದ ನಾಲ್ವತ್ತು ದಿವಸ ಅಡವಿಯಲ್ಲಿ ನಡಿಸಲ್ಪಡುತ್ತಾ ಸೈತಾನನಿಂದ ಶೋಧಿಸಲ್ಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು