Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:36 - ಕನ್ನಡ ಸತ್ಯವೇದವು J.V. (BSI)

36 ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು; ಇವನು ಮತೂಷಲನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಸಾಲನು ಕಯಿನಾನನ ಮಗನು; ಕಯಿನಾನನು ಅರ್ಫಕ್ಷಾದನ ಮಗನು; ಅರ್ಫಕ್ಷಾದನು ಶೇಮನ ಮಗನು; ಶೇಮನು ನೋಹನ ಮಗನು; ನೋಹನು ಲಾಮೆಕನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಸಾಲ ಕಯಿನನಿಗೆ, ಕಯಿನ್ ಅರ್ಫಕ್ಷಾದನಿಗೆ, ಅರ್ಪಕ್ಷಾದ್‍ ಶೇಮನಿಗೆ, ಶೇಮ್ ನೋವನಿಗೆ, ನೋವ ಲಾಮೆಕನಿಗೆ, ಲಾಮೆಕ್ ಮತೂಷಲನಿಗೆ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಸಾಲನು ಕಯಿನನ ಮಗನು. ಕಯಿನನು ಅರ್ಪಕ್ಷದನ ಮಗನು. ಅರ್ಪಕ್ಷದನು ಶೇಮನ ಮಗನು. ಶೇಮನು ನೋಹನ ಮಗನು. ನೋಹನು ಲಾಮೆಕನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಶೆಲಹ ಕಯಿನಾನನ ಮಗನು, ಕಯಿನಾನನು ಅರ್ಫಕ್ಷಾದನ ಮಗನು, ಅರ್ಫಕ್ಷಾದನು ಶೇಮನ ಮಗನು, ಶೇಮನು ನೋಹನ ಮಗನು, ನೋಹನು ಲಾಮೆಕನ ಮಗನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಶಿಲಾಹಾ ಕಾಯಿನಾಚೊ ಲೆಕ್, ಕಾಯಿನ್ ಅರ್ಪಾಕ್ಸಾದಾಚೊ ಲೆಕ್, ಅರ್ಫಾಕ್ಸಾದ್ ಶೆಮಾಚೊ ಲೆಕ್, ಶೆಮ್ ನೊಯೆಚೊ ಲೆಕ್, ನೊಯೆ ಲಾಮೆಖಾಚೊ ಲೆಕ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:36
22 ತಿಳಿವುಗಳ ಹೋಲಿಕೆ  

ಆತನು ಭಕ್ತಿಹೀನರಾದ ಪುರಾತನರ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಲಯವನ್ನು ಬರಮಾಡಿದನು; ಆದರೆ ಸುನೀತಿಯನ್ನು ಸಾರುವವನಾಗಿದ್ದ ನೋಹನನ್ನೂ ಅವನೊಂದಿಗೆ ಬೇರೆ ಏಳು ಮಂದಿಯನ್ನೂ ಉಳಿಸಿದನು.


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟಿಸುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಆತನಿಗೆ ಅವಿಧೇಯರಾಗಿದ್ದವರ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು. ಆ ನಾವೆಯೊಳಗೆ ಕೆಲವರು ಅಂದರೆ ಎಂಟೇ ಜನರು ಸೇರಿ ನೀರಿನ ಮೂಲಕ ರಕ್ಷಣೆಹೊಂದಿದರು.


ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಲಯವು ಬಂದು ಎಲ್ಲರನ್ನು ನಾಶಮಾಡಿತು.


ನೋಹ ದಾನಿಯೇಲ ಯೋಬ ಎಂಬೀ ಮೂವರು ಪುರುಷರು ಅದರಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಕರ್ತನಾದ ಯೆಹೋವನ ನುಡಿ.


ಶೇಮನ ಸಂತಾನದವರು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು. [ಅರಾಮ್ ಸಂತಾನದವರು] - ಊಚ್, ಹೂಲ್, ಗೆತೆರ್, ಮೆಷೆಕ್ ಎಂಬವರೇ.


ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಶೇಮ್ ಹಾಮ್ ಯೆಫೆತ್ ಎಂಬವರೇ (ಹಾಮನು ಕಾನಾನನ ತಂದೆಯು).


ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ - ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.


ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.


ಮನುಷ್ಯರು ಮೊದಲುಗೊಂಡು ಪಶುಪಕ್ಷಿಕ್ರಿವಿುಗಳವರೆಗೂ ಭೂವಿುಯ ಮೇಲಿದ್ದದ್ದೆಲ್ಲಾ ನಾಶವಾಯಿತು; ಅವು ಭೂವಿುಯ ಮೇಲಿನಿಂದ ಲಯವಾಗಿ ಹೋದವು. ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದರು.


ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳೂ ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.


ದೇವರು ಅಪ್ಪಣೆಕೊಟ್ಟ ಪ್ರಕಾರವೇ ನೋಹನು ಮಾಡಿದನು.


ಆದಾಮನು ನೂರಮೂವತ್ತು ವರುಷದವನಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.


ಆದಾಮನ ಸಂತಾನದವರು - ಶೇತ್, ಎನೋಷ್,


ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು;


ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಯಿನಾನನ ಮಗನು; ಇವನು ಎನೋಷನ ಮಗನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು