Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:15 - ಕನ್ನಡ ಸತ್ಯವೇದವು J.V. (BSI)

15 ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಾ ಬಂದನು; ಎಲ್ಲರೂ ಆತನನ್ನು ಹೊಗಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಅವರು ಬೋಧಿಸುತ್ತಾ ಬಂದರು. ಎಲ್ಲರೂ ಅವರನ್ನು ಹೊಗಳುವವರೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೇಸು ಸಭಾಮಂದಿರಗಳಲ್ಲಿ ಉಪದೇಶಿಸಲು ಪ್ರಾರಂಭಿಸಿದನು. ಜನರೆಲ್ಲರೂ ಆತನನ್ನು ಹೊಗಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸು ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸಿದ್ದರಿಂದ, ಎಲ್ಲರೂ ಅವರನ್ನು ಹೊಗಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆನಿ ಸಿನಾಗೊಗಾತ್ನಿ ಶಿಕ್ವುಲ್ಯಾನ್, ಅನಿ ಸಗ್ಳ್ಯಾನಿಕ್ನಾ ಶಬಾಸ್ಕಿ ಮನುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:15
10 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಜನರು ಇದನ್ನು ನೋಡಿ ಭಯಪಟ್ಟು ದೇವರು ಮನುಷ್ಯರಿಗೆ ಅಂಥ ಅಧಿಕಾರವನ್ನು ಕೊಟ್ಟದ್ದಕ್ಕೆ ಆತನನ್ನು ಕೊಂಡಾಡಿದರು.


ಒಂದಾನೊಂದು ಸಬ್ಬತ್‍ದಿನದಲ್ಲಿ ಆತನು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು.


ಆದರೆ ಅವನು ಹೊರಟುಹೋಗಿ ಆ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸಿದ್ದರಿಂದ ಯೇಸು ಬಹಿರಂಗವಾಗಿ ಇನ್ನು ಯಾವ ಊರೊಳಕ್ಕೂ ಹೋಗಲಾರದೆ ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು. ಮತ್ತು ಜನರು ನಾಲ್ಕು ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.


ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.


ಅದಕ್ಕೆ ಎಲ್ಲರು ಬೆರಗಾಗಿ - ಇದೇನಿರಬಹುದು? ಇದು ಹೊಸ ಉಪದೇಶ. ಈತನು ಅಧಿಕಾರದಿಂದ ದೆವ್ವಗಳಿಗೂ ಅಪ್ಪಣೆಕೊಡುತ್ತಾನೆ; ಅವು ಆತನ ಮಾತನ್ನು ಕೇಳುತ್ತವೆ ಎಂದು ತಮ್ಮ ತಮ್ಮೊಳಗೆ ವಿಚಾರಮಾಡಿಕೊಂಡರು.


ತರುವಾಯ ಆತನು ತನ್ನ ಊರಿಗೆ ಬಂದು ಅಲ್ಲಿರುವ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಕೇಳಿ ಅತ್ಯಾಶ್ಚರ್ಯಪಟ್ಟು - ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?


ಯೇಸು ಎಲ್ಲಾ ಊರುಗಳನ್ನೂ ಹಳ್ಳಿಪಳ್ಳಿಗಳನ್ನೂ ಸುತ್ತಿಕೊಂಡು ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಎಲೈ, [ಇಸ್ರಾಯೇಲೇ], [ಅವನಂತೆ ನೀನೂ] ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾವಿು ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವದು.


ಹೀಗಿರಲಾಗಿ ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ವಾಡಿಕೆಯ ಪ್ರಕಾರ ಸಬ್ಬತ್‍ದಿನದಲ್ಲಿ ಸಭಾಮಂದಿರಕ್ಕೆ ಹೋಗಿ ಓದುವದಕ್ಕಾಗಿ ಎದ್ದು ನಿಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು