Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:2 - ಕನ್ನಡ ಸತ್ಯವೇದವು J.V. (BSI)

2 ಆ ದಿವಸಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಕಳೆದ ಮೇಲೆ ಆತನಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾಲ್ವತ್ತು ದಿನ ಅಲ್ಲಿದ್ದಾಗ ಅವರನ್ನು ಪರೀಕ್ಷಿಸಲು ಪಿಶಾಚಿ ಪ್ರಯತ್ನಿಸಿತು. ಅಷ್ಟು ದಿನಗಳೂ ಏನನ್ನೂ ತಿನ್ನದೆ ಉಪವಾಸವಿದ್ದ ಯೇಸುವಿಗೆ ಆಗ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಲ್ಲಿ ಸೈತಾನನು ಆತನನ್ನು ನಲವತ್ತು ದಿನಗಳವರೆಗೆ ಶೋಧಿಸಿದನು. ಆ ದಿನಗಳಲ್ಲಿ ಯೇಸು ಏನನ್ನೂ ತಿನ್ನಲಿಲ್ಲ. ತರುವಾಯ, ಯೇಸುವಿಗೆ ಬಹಳ ಹಸಿವೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಲವತ್ತು ದಿನಗಳು ಸೈತಾನನಿಂದ ಶೋಧನೆಯನ್ನು ಎದುರಿಸಿದರು. ಆ ದಿನಗಳಲ್ಲಿ ಯೇಸು ಏನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಯೇಸುವಿಗೆ ಹಸಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಚಾಳಿಸ್ ದಿಸಾ ಗಿರೊ ಜೆಜುಕ್ ಪಾಪ್ ಕರಿ ಸರ್ಕೆ ಕರುಕ್‍ ಬಗಟ್ಲ್ಯಾನ್.ತ್ಯಾ ಚಾಳಿಸ್ ದಿಸಾತ್ನಿ ಜೆಜುನ್ ಪೊಟಾಕ್ ಕಾಯ್ಬಿ ಖಯ್‍ನಸಲ್ಲ್ಯಾನ್ ಚಾಳಿಸ್ ದಿಸಾ ಸರಲ್ಲ್ಯಾ ತನ್ನಾ ತೆಕಾ ಲೈ ಭುಕ್‍ಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:2
16 ತಿಳಿವುಗಳ ಹೋಲಿಕೆ  

ಅವನು ಎದ್ದು ತಿಂದು ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣಮಾಡಿ ದೇವಗಿರಿಯಾದ ಹೋರೇಬಿಗೆ ಮುಟ್ಟಿ


ಮೋಶೆ ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರಳು ನಾಲ್ವತ್ತು ದಿನ ಇದ್ದನು. ಅವನು ಏನೂ ಊಟಮಾಡಲಿಲ್ಲ, ಏನೂ ಕುಡಿಯಲಿಲ್ಲ. ಆತನು ನಿಬಂಧನದ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಿಗೆಗಳ ಮೇಲೆ ಬರೆದನು.


ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.


ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಾಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.


ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ದಾರಿನಡೆದು ದಣಿದು ಆ ಬಾವಿಯ ಬಳಿಯಲ್ಲಿ ಹಾಗೆ ಕೂತುಕೊಂಡನು; ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.


ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಾಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.


ಬೆಳಿಗ್ಗೆ ಆತನು ಪಟ್ಟಣಕ್ಕೆ ತಿರಿಗಿ ಹೋಗುತ್ತಿರುವಾಗ ಹಸಿದನು.


ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.


ಇದಲ್ಲದೆ ಅವನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನಾಗಿ - ಜನ ಪಶು ಮಂದೆ ಹಿಂಡು ಇವುಗಳು ಏನೂ ರುಚಿನೋಡದಿರಲಿ; ತಿನ್ನದಿರಲಿ, ಕುಡಿಯದಿರಲಿ;


ಆ ಫಿಲಿಷ್ಟಿಯನು ನಾಲ್ವತ್ತು ದಿವಸ ಹೊತ್ತಾರೆಯಲ್ಲಿಯೂ ಸಾಯಂಕಾಲದಲ್ಲಿಯೂ ಬಂದು ಬಂದು ಅದೇ ಪ್ರಕಾರ ಕೂಗುತ್ತಾ ನಿಲ್ಲುತ್ತಿದ್ದನು.


ಯೆಹೋವನು ನಿಮ್ಮನ್ನು ನಾಶ ಮಾಡಬೇಕೆಂದಿದ್ದದರಿಂದ ನಾನು ಆ ನಾಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.


ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ಹಗಲಿರುಳು ನಾಲ್ವತ್ತು ದಿವಸ ಇದ್ದನು.


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ಆಗ ಸೈತಾನನು ಆತನಿಗೆ - ನೀನು ದೇವರ ಮಗನಾಗಿದ್ದರೆ ಈ ಕಲ್ಲು ರೊಟ್ಟಿಯಾಗುವಂತೆ ಇದಕ್ಕೆ ಅಪ್ಪಣೆಕೊಡು ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು