Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:27 - ಕನ್ನಡ ಸತ್ಯವೇದವು J.V. (BSI)

27 ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಎಷ್ಟೋ ಮಂದಿ ಕುಷ್ಠರೋಗಿಗಳು ಇದ್ದಾಗ್ಯೂ ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸುರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನನ್ನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಪ್ರವಾದಿಯಾದ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರೇಲಿನಲ್ಲಿ ವಾಸಿಸುತ್ತಿದ್ದರು. ಆದರೆ ಅವರಲ್ಲಿ ಯಾರಿಗೂ ವಾಸಿಯಾಗದೆ ಸಿರಿಯ ದೇಶದ ನಾಮಾನನೊಬ್ಬನಿಗೇ ವಾಸಿಯಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹಾಗೆಯೇ, ಪ್ರವಾದಿ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿದ್ದರೂ ಸಿರಿಯದ ನಾಮಾನನ ಹೊರತು ಅವರಲ್ಲಿ ಬೇರೆ ಯಾರೂ ಶುದ್ಧರಾಗಲಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಇಸ್ರಾಯೆಲಾತ್ ಕುಸ್ಟ್ ರೊಗಾನಿ ಲೈ ಲೊಕಾ ತರಾಸ್ ಕರುನ್ ಘೆಯ್ತ್, ಖರೆ ಎಲಿಶಾ ಪ್ರವಾದ್ಯಾಚ್ಯಾ ಎಳಾರ್ ಸಿರಿಯಾಚೊ ನಾಮಾನ್ ಮನ್ತಲೊ ಎಕ್ಲೊಚ್ ಆರಾಮ್ ಹೊಲೊ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:27
10 ತಿಳಿವುಗಳ ಹೋಲಿಕೆ  

ನಾನು ಇವರ ಸಂಗಡ ಇದ್ದಾಗ ನೀನು ನನಗೆ ಕೊಟ್ಟಿರುವ ನಿನ್ನ ಹೆಸರಿನಲ್ಲಿ ಇವರನ್ನು ಕಾಯುತ್ತಾ ಬಂದೆನು, ಇವರನ್ನು ಕಾಪಾಡಿದೆನು; ಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕೆ ಗುರಿಯಾದ ಆ ಮನುಷ್ಯನೇ ಹೊರತು ಇವರಲ್ಲಿ ಮತ್ತಾರೂ ನಾಶವಾಗಲಿಲ್ಲ.


ಅವನು ದೇವರ ಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ತಾನಾಗಲಿ ತನ್ನ ಸಂಗಡ ಇದ್ದವರಾಗಲಿ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ತಿಂದನಲ್ಲವೇ.


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ಆತನ ಮಾರ್ಗವನ್ನು ಆತನಿಗೆ ಯಾರು ನೇವಿುಸಿದರು? ನೀನು ಅನ್ಯಾಯವನ್ನು ನಡಿಸಿದಿ ಎಂದು ಹೇಳಬಲ್ಲವರಾರು?


ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬದಾಗಿ ನೀನು ಆತನೊಂದಿಗೆ ವ್ಯಾಜ್ಯವಾಡುವದೇಕೆ?


ಮೇಲಣ ಲೋಕದವರಿಗೂ ನ್ಯಾಯತೀರಿಸುವ ದೇವರಿಗೆ ಜ್ಞಾನಬೋಧನೆಯನ್ನು ಮಾಡಬಹುದೇ?


ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧವಾಗು ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.


ಸಭಾಮಂದಿರದಲ್ಲಿರುವವರೆಲ್ಲರು ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು ಎದ್ದು ಆತನನ್ನು ಊರಹೊರಕ್ಕೆ ಅಟ್ಟಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು