Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:34 - ಕನ್ನಡ ಸತ್ಯವೇದವು J.V. (BSI)

34 ಆ ದೆವ್ವವು - ಹಾ! ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು. ನೀನು ದೇವರು ಪ್ರತಿಷ್ಠಿಸಿದವನೇ ಎಂದು ಅಬ್ಬರಿಸಿ ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು; ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಗಟ್ಟಿಯಾಗಿ ಕಿರುಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ನಜರೇತಿನ ಯೇಸುವೇ! ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡಲು ಇಲ್ಲಿಗೆ ಬಂದಿರುವೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಕಳುಹಿಸಲ್ಪಟ್ಟ ಪರಿಶುದ್ಧನು!” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ನಜರೇತಿನ ಯೇಸುವೇ, ನಮ್ಮ ಗೊಡವೆ ನಿಮಗೆ ಏಕೆ? ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರಾ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರ ಪರಿಶುದ್ಧರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 “ನಜರೆತಾಚ್ಯಾ ಜೆಜು ಅಮ್ಚ್ಯಾಕ್ನಾ ತುಕಾ ಕಾಯ್ ಪಾಜೆ? ಅಮ್ಕಾ ನಾಸ್ ಕರುಕ್ ಮನುನ್ ಎಲೆ ಕಾಯ್? ತಿಯಾ ಕೊನ್ ಮನುನ್ ಮಾಕಾ ಗೊತ್ತ್ ಹಾಯ್, ತಿಯಾ ದೆವಾನ್ ಧಾಡಲ್ಲೊ ಪವಿತ್ರ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:34
22 ತಿಳಿವುಗಳ ಹೋಲಿಕೆ  

ದೇವರು ಒಬ್ಬನೇ ಎಂದು ನೀನು ನಂಬುವವನು. ಹಾಗೆ ನಂಬುವದು ಒಳ್ಳೇದು. ದೆವ್ವಗಳು ಕೂಡ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.


ಆ ದೆವ್ವವು - ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ಕೂಗಿ ಹೇಳಿತು.


ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು.


ನೀವು ಪರಿಶುದ್ಧನೂ ನೀತಿವಂತನೂ ಆಗಿರುವ ಪುರುಷನನ್ನು ಬೇಡವೆಂದು ಹೇಳಿ ಕೊಲೆಗಾರನಾದ ಮನುಷ್ಯನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವನಾಯಕನನ್ನು ಕೊಲ್ಲಿಸಿದಿರಿ.


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ದೆವ್ವಗಳು ಸಹ - ನೀನು ದೇವರ ಕುಮಾರನು ಎಂದು ಅಬ್ಬರಿಸಿ ಅನೇಕರನ್ನು ಬಿಟ್ಟು ಹೋದವು. ತಾನು ಕ್ರಿಸ್ತನೆಂದು ಅವುಗಳಿಗೆ ತಿಳಿದದ್ದರಿಂದ ಆತನು ಅವುಗಳನ್ನು ಮಾತಾಡದಂತೆ ಗದರಿಸಿದನು.


ನಿನ್ನ ಮೇಲೆ ಪವಿತ್ರಾತ್ಮ ಬರುವದು; ಪರಾತ್ಪರನ ಶಕ್ತಿಯ ನೆರಳು ನಿನ್ನ ಮೇಲೆ ಬೀಳುವದು; ಆದದರಿಂದ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವದು.


ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧನದಲ್ಲಿಟ್ಟನು.


ಪಾಪಮಾಡುವವನು ಸೈತಾನನಿಂದ ಹುಟ್ಟಿದವನಾಗಿದ್ದಾನೆ; ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನಲ್ಲಾ. ಸೈತಾನನ ಕೆಲಸಗಳನ್ನು ಲಯ ಮಾಡುವದಕ್ಕೋಸ್ಕರವೇ ದೇವಕುಮಾರನು ಪ್ರತ್ಯಕ್ಷನಾದನು.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳಾಗಿರುವದರಿಂದ ಆತನೂ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ಅಡಗಿಸಿಬಿಡುವದಕ್ಕೂ,


ಮತ್ತು ಅವರ ಬಳಿಗೆ ಹೋಗಿ ವಿನಯವಾಗಿ ಮಾತಾಡಿ ಹೊರಕ್ಕೆ ಕರೆದುಕೊಂಡು ಬಂದು - ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ ಪೊಂತ್ಯ ಪಿಲಾತನೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತವಾಗಿ ಕೂಡಿಕೊಂಡು


ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ, ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲ.


ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯಹಿಡಿದದ್ದರಿಂದ ಅವರು ಯೇಸುವನ್ನು - ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಬಿದ್ದು ಮಹಾಶಬ್ದದಿಂದ - ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂತ ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.


ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ, ನನ್ನನ್ನು ಕಾಡಬೇಡ ಎಂದು ಹೇಳಿದನು.


ಆಗ ಆತನು ತರತರವಾದ ರೋಗಗಳಿಂದ ಮೈಯಲ್ಲಿ ನೆಟ್ಟಗಿಲ್ಲದ ಬಹು ಜನರನ್ನು ವಾಸಿಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಮತ್ತು ತಾನು ಇಂಥವನೆಂದು ಅವುಗಳಿಗೆ ತಿಳಿದದ್ದರಿಂದ ಆತನು ಅವುಗಳನ್ನು ಮಾತಾಡಗೊಡಿಸಲಿಲ್ಲ.


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ.


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ಆಗ ಆ ಸ್ತ್ರೀಯು ಎಲೀಯನಿಗೆ - ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು [ದೇವರ] ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವದಕ್ಕೆ ಬಂದಿಯೋ ಎನ್ನಲು ಅವನು ಆಕೆಗೆ -


ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು