Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:35 - ಕನ್ನಡ ಸತ್ಯವೇದವು J.V. (BSI)

35 ಯೇಸು ಅದನ್ನು ಗದರಿಸಿ - ಸುಮ್ಮನಿರು, ಇವನನ್ನು ಬಿಟ್ಟುಹೋಗು ಎನ್ನಲಾಗಿ ಆ ದೆವ್ವವು ಅವನನ್ನು ನಡುವೆ ಕೆಡವಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆದರೆ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ದೆವ್ವಕ್ಕೆ ಆಜ್ಞಾಪಿಸಿದರು. ಆ ದೆವ್ವ ಎಲ್ಲರ ಎದುರಿಗೇ ಅವನನ್ನು ಕೆಡವಿ, ಯಾವ ಕೆಡುಕನ್ನೂ ಮಾಡದೆ ಅವನನ್ನು ಬಿಟ್ಟು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆದರೆ ಯೇಸು ಆ ದೆವ್ವಕ್ಕೆ, “ಸುಮ್ಮನಿರು! ಇವನನ್ನು ಬಿಟ್ಟು ಹೊರಗೆ ಬಾ!” ಎಂದು ಆಜ್ಞಾಪಿಸಿದನು. ದೆವ್ವವು ಅವನನ್ನು ಜನರೆಲ್ಲರ ಎದುರಿನಲ್ಲಿಯೇ ಕೆಡವಿ ಯಾವ ಕೇಡೂ ಮಾಡದೆ ಬಿಟ್ಟು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದರು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ, ಬಾಧಿಸದೆ ಅವನೊಳಗಿಂದ ಹೊರಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತನ್ನಾ ಜೆಜುನ್ “ಗಪ್-ರ್‍ಹಾಮ್ ಅನಿ‍ ತ್ಯಾ ಮಾನ್ಸಾತ್ನಾ ಭಾಯ್ರ್ ಯೆ” ಮನುನ್ ತಾಕಿತ್ ದಿಲ್ಯಾನ್. ತನ್ನಾ ಗಿರ್‍ಯಾನ್ ತ್ಯಾ ಮಾನ್ಸಾಕ್ ತೆಂಚ್ಯಾ ಇದ್ರಾಕ್ ಪಾಡ್ವುಲ್ಯಾನ್ ಅನಿ ತೆಕಾ ಕಾಯ್ಬಿ ವಾಯ್ಟ್ ಕರಿನಸ್ತಾನಾ ತೊ ತೆಚ್ಯಾ ಭುತ್ತುರ್‍ನಾ ಬಾಯ್ರ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:35
17 ತಿಳಿವುಗಳ ಹೋಲಿಕೆ  

ದೆವ್ವಗಳು ಸಹ - ನೀನು ದೇವರ ಕುಮಾರನು ಎಂದು ಅಬ್ಬರಿಸಿ ಅನೇಕರನ್ನು ಬಿಟ್ಟು ಹೋದವು. ತಾನು ಕ್ರಿಸ್ತನೆಂದು ಅವುಗಳಿಗೆ ತಿಳಿದದ್ದರಿಂದ ಆತನು ಅವುಗಳನ್ನು ಮಾತಾಡದಂತೆ ಗದರಿಸಿದನು.


ಆತನು ಆಕೆಯ ಬಳಿ ನಿಂತು ಬಾಗಿ ಆ ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.


ಆತನು ಅವರಿಗೆ - ಅಲ್ಪವಿಶ್ವಾಸಿಗಳೇ, ಯಾಕೆ ಧೈರ್ಯಗೆಡುತ್ತೀರಿ ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಎಲ್ಲಾ ಶಾಂತವಾಯಿತು.


ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂವಿುಯೇ, ಸಮುದ್ರವೇ, ನಿಮ್ಮ ದುರ್ಗತಿಯನ್ನು ಏನು ಹೇಳಲಿ; ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾ ರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದುಬಂದಿದ್ದಾನೆ ಎಂಬದಾಗಿ ಹೇಳಿತು.


ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಸೋಲಿಸಿದ ಮೇಲೆ ಆ ಮೊದಲಿನವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ತೆಗೆದುಕೊಂಡು ತಾನು ಸುಲಿಗೆಮಾಡಿದ್ದನ್ನು ಹಂಚಿಕೊಡುವನು.


ಆ ಹುಡುಗನು ಇನ್ನೂ ಬರುತ್ತಿರುವಾಗ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಯ ಕೈಗೆ ಕೊಟ್ಟನು.


ಬಾಯಲ್ಲಿ ನೊರೆ ಬರುವಷ್ಟು ಅವನನ್ನು ಒದ್ದಾಡಿಸುತ್ತದೆ; ಮತ್ತು ಬಹು ಕಷ್ಟಕೊಟ್ಟು ಜಜ್ಜಿದ ಹೊರತು ಬಿಡುವದಿಲ್ಲ.


ಹೀಗಿರಲಾಗಿ ಅವರು ಆತನ ಹತ್ತಿರ ಬಂದು - ಗುರುವೇ, ಗುರುವೇ, ಸಾಯುತ್ತೇವೆ ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಉಬ್ಬುವ ನೀರನ್ನೂ ಗದರಿಸಿದನು. ಗದರಿಸಲು ಅವು ನಿಂತವು, ಶಾಂತವಾಯಿತು.


ಆಗ ಅದು ಅಬ್ಬರಿಸಿ ಅವನನ್ನು ಒದ್ದಾಡಿಸಿ ಬಿಟ್ಟು ಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು - ಸತ್ತುಹೋದ ಅಂದರು.


ಆ ದೆವ್ವವು ಅವನನ್ನು ಒದ್ದಾಡಿಸಿ ಅಬ್ಬರಿಸಿಕೂಗಿ ಬಿಟ್ಟು ಹೋಯಿತು.


ಯೇಸು ಅವನನ್ನು ಗದರಿಸಲು ದೆವ್ವ ಅವನನ್ನು ಬಿಟ್ಟುಹೋಯಿತು; ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.


ಆಗ ಯೆಹೋವನ ದೂತನು ಸೈತಾನನಿಗೆ - ಸೈತಾನನೇ, ಯೆಹೋವನು ನಿನ್ನನ್ನು ಖಂಡಿಸಲಿ, ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ ಎಂದು ಹೇಳಿದನು.


ದುಷ್ಟರಿಗಾದರೋ ದೇವರು ಹೇಳುವದೇನಂದರೆ - ನನ್ನ ವಿಧಿಗಳನ್ನು ಪಠಿಸುವದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ನಿಬಂಧನೆಯನ್ನು ಉಚ್ಚರಿಸುವದು ನಿಮಗೇನು ಕೆಲಸ?


ಆತನು ಎದ್ದು ಗಾಳಿಯನ್ನು ಗದರಿಸಿ ಸಮುದ್ರಕ್ಕೆ - ಸುಮ್ಮನಿರು, ಮೊರೆಯಬೇಡ ಎಂದು ಅಪ್ಪಣೆಕೊಟ್ಟನು. ಕೊಡುತ್ತಲೆ ಗಾಳಿ ನಿಂತು ಹೋಗಿ ಎಲ್ಲಾ ಶಾಂತವಾಯಿತು.


ಆತನು ಅವರಿಗೆ - ನೀವಂತೂ ವೈದ್ಯನೇ, ನಿನ್ನನ್ನೇ ವಾಸಿಮಾಡಿಕೋ ಎಂಬ ಗಾದೆಯನ್ನು ನನಗೆ ಹೇಳಿ ಕಪೆರ್ನೌವಿುನಲ್ಲಿ ಎಂಥೆಂಥ ಕಾರ್ಯಗಳು ನಡೆದವೆಂದು ನಾವು ಕೇಳಿದೆವೋ ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿ ಮಾಡು ಅನ್ನುವಿರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು