Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:6 - ಕನ್ನಡ ಸತ್ಯವೇದವು J.V. (BSI)

6 ಇವೆಲ್ಲವುಗಳ ಅಧಿಕಾರವನ್ನೂ ಇವುಗಳ ವೈಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಟ್ಟದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಇವೆಲ್ಲವುಗಳ ಅಧಿಕಾರವನ್ನೂ ಇವುಗಳ ವೈಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಡಲ್ಪಟ್ಟಿದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ಇವುಗಳ ಸರ್ವಾಧಿಕಾರವನ್ನೂ ವೈಭವವನ್ನೂ ನಿನಗೆ ಕೊಡುವೆನು. ಇವೆಲ್ಲಾ ನನ್ನ ಅಧೀನದಲ್ಲಿವೆ. ನನ್ನ ಇಷ್ಟಬಂದವರಿಗೆ ಇವನ್ನು ಕೊಡಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಈ ರಾಜ್ಯಗಳೆಲ್ಲವನ್ನೂ ಇವುಗಳ ಸರ್ವಾಧಿಕಾರವನ್ನೂ ವೈಭವವನ್ನೂ ನಿನಗೆ ಕೊಡುತ್ತೇನೆ. ಇವುಗಳೆಲ್ಲಾ ನನ್ನ ಅಧೀನದಲ್ಲಿವೆ. ನಾನು ಯಾರಿಗೆ ಬೇಕಾದರೂ ಇವುಗಳನ್ನು ಕೊಡಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅನಂತರ ಸೈತಾನನು ಯೇಸುವಿಗೆ, “ಈ ಎಲ್ಲಾ ರಾಜ್ಯಗಳ ಅಧಿಕಾರವನ್ನೂ ಇವುಗಳ ಮಹಿಮೆಯನ್ನೂ ನಾನು ನಿನಗೆ ಕೊಡುವೆನು. ಇವೆಲ್ಲಾ ನನಗೆ ಕೊಟ್ಟಿರುವುದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ “ಹಿ ಸಗ್ಳೊ ವೈಭವ್ ಅನಿ ಅದಿಕಾರ್ ಮಿಯಾ ತುಕಾ ದಿತಾ” ಹೆ ಸಗ್ಳೆ ಮಾಕಾ ಮನುನ್ ದಿಲ್ಲೆ ಹಾಯ್, ಹೆ ಮಾಜ್ಯಾ ಮನಾಕ್ ಯೆತಾ, ತೆಕಾ ಮಿಯಾ ದಿವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:6
15 ತಿಳಿವುಗಳ ಹೋಲಿಕೆ  

ನೀವು ಪೂರ್ವದಲ್ಲಿ ಅಪರಾಧಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರನಡಿಸುವ ಅಧಿಪತಿಗೆ, ಅಂದರೆ ನಂಬಲೊಲ್ಲದವರನ್ನು ಅವಿಧೇಯತೆಗೆ ಈಗ ಪ್ರೇರೇಪಿಸುವ ಆತ್ಮನಿಗೆ ಅನುಸಾರವಾಗಿ ನಡೆದುಕೊಂಡಿರಿ.


ಇನ್ನು ನಾನು ನಿಮ್ಮ ಸಂಗಡ ಬಹಳ ಮಾತುಗಳನ್ನಾಡುವದಿಲ್ಲ, ಯಾಕಂದರೆ ಇಹಲೋಕಾಧಿಪತಿಯು ಬರುತ್ತಾನೆ. ಅವನಿಗೆ ಸಂಬಂಧಪಟ್ಟದ್ದು ಯಾವದೊಂದೂ ನನ್ನಲ್ಲಿಲ್ಲ;


ಈಗ ಈ ಲೋಕಕ್ಕೆ ತೀರ್ಪು ಆಗುತ್ತದೆ; ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು.


ನಾವು ದೇವರಿಂದ ಹುಟ್ಟಿದವರೆಂದೂ ಲೋಕವೆಲ್ಲವು ಕೆಡುಕನ ವಶದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.


ಇದಲ್ಲದೆ ದೇವಜನರ ಮೇಲೆ ಯುದ್ಧಮಾಡಿ ಅವರನ್ನು ಜಯಿಸುವದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು. ಮತ್ತು ಸಕಲ ಕುಲ ಪ್ರಜೆ ಭಾಷೆ ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತದೆ. ಹುಲ್ಲು ಒಣಗಿಹೋಗುವದು, ಹೂವು ಉದುರಿಹೋಗುವದು;


ಇದೇನೂ ಆಶ್ಚರ್ಯವಲ್ಲ; ಸೈತಾನನು ತಾನೇ ಪ್ರಕಾಶರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ


ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.


ಗರ್ವದ ಸಕಲ ವೈಭವವನ್ನು ಹೊಲಸುಮಾಡಬೇಕೆಂತಲೂ ಲೋಕಮಾನ್ಯರೆಲ್ಲರನ್ನು ಅವಮಾನ ಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.


ಮತ್ತು ಪಾತಾಳವು ಹೆಚ್ಚು ಆತುರದಿಂದ ಅಪಾರವಾಗಿ ಬಾಯಿತೆರೆಯಲು ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲಾ [ಅದರೊಳಗೆ] ಬಿದ್ದುಹೋಗುವವು.


ಅವರ ಮುಂದೆ ತನ್ನ ಘನೈಶ್ವರ್ಯಗಳನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಸರದಾರರಲ್ಲಿಯೂ ರಾಜ ಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಅನುಗ್ರಹಿಸಿದ್ದನ್ನೂ ವರ್ಣಿಸಿದ ಮೇಲೆ -


ನೀನು ನನ್ನ ಮುಂದೆ ಅಡ್ಡಬಿದ್ದರೆ ಇದೆಲ್ಲಾ ನಿನ್ನದಾಗುವದು ಎಂದು ಆತನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು