Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:8 - ಕನ್ನಡ ಸತ್ಯವೇದವು J.V. (BSI)

8 ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ಯೇಸು, “‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು; ಅವರೊಬ್ಬರಿಗೇ ಸೇವೆ ಸಲ್ಲಿಸು,’ ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದಕ್ಕೆ ಯೇಸು, “‘ನಿನ್ನ ಪ್ರಭುವಾದ ದೇವರೊಬ್ಬನನ್ನೇ ಆರಾಧಿಸಬೇಕು, ಆತನೊಬ್ಬನಿಗೇ ಸೇವೆಮಾಡಬೇಕು’ ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿದೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೇಸು ಅವನಿಗೆ ಉತ್ತರವಾಗಿ, “ ‘ನಿನ್ನ ದೇವರಾದ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಜೆಜುನ್ ಖಾಯ್ದ್ಯಾಂಚ್ಯಾ ಪುಸ್ತಕಾತ್ “ಸರ್ವೆಸ್ವರಾ ತುಜ್ಯಾ ದೆವಾಚೆ ಎವ್ಡೆಚ್ ಪಾಯಾ ಪಡ್,ಅನಿ ತೆಚಿ ಎಕ್ಲ್ಯಾಚಿಚ್ ಸೆವಾ ಕರ್ ಮನುನ್ ಸಾಂಗ್ತಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:8
14 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು; ಆತನನ್ನೇ ಸೇವಿಸಬೇಕು; ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.


ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು ಆತನ ಹೆಸರಿನ ಮೇಲೆಯೇ ಪ್ರಮಾಣ ಮಾಡಬೇಕು.


ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.


ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ.


ಆಗ ಯೆಹೋವನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ಅವನು ನನಗೆ - ಮಾಡಬೇಡ ನೋಡು; ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವವರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಎಂದು ಹೇಳಿದನು.


ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.


ಯೇಸು ಅವನಿಗೆ - ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವದಿಲ್ಲ ಎಂದು ಬರೆದದೆ ಎಂತ ಉತ್ತರಕೊಟ್ಟನು.


ಆಗ ಸಮುವೇಲನು ಅವರಿಗೆ - ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರಿಗಿಕೊಂಡಿರುವದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ; ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು ಅಂದನು.


ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂದು ನಿಮಗೆ ತಿಳಿದದೆಯಲ್ಲಾ.


ಆತನು ತಿರುಗಿಕೊಂಡು ಪೇತ್ರನಿಗೆ - ಸೈತಾನನೇ, ನನ್ನ ಮುಂದೆ ನಿಲ್ಲಬೇಡ, ನಡೆ, ನನಗೆ ನೀನು ವಿಘ್ನವಾಗಿದ್ದೀ; ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ ಎಂದು ಹೇಳಿದನು.


ಸಾಮಾನ್ಯರ ಗರ್ವದೃಷ್ಟಿಯು ತಗ್ಗಿಹೋಗುವದು, ಮುಖಂಡರ ಅಹಂಕಾರವು ಕುಗ್ಗಿಹೋಗುವದು, ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್‍ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ.


ನೀನು ನನ್ನ ಮುಂದೆ ಅಡ್ಡಬಿದ್ದರೆ ಇದೆಲ್ಲಾ ನಿನ್ನದಾಗುವದು ಎಂದು ಆತನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು