ಲೂಕ 5:10 - ಕನ್ನಡ ಸತ್ಯವೇದವು J.V. (BSI)10 ಸೀಮೋನನ ಪಾಲುಗಾರರಾಗಿದ್ದಂಥ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯಪಟ್ಟರು. ಯೇಸು ಸೀಮೋನನಿಗೆ - ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವವನಾಗಿರುವಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, “ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು - ಯಕೋಬ ಮತ್ತು ಯೊವಾನ್ನರು - ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, “ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಆಶ್ಚರ್ಯಪಟ್ಟರು. (ಇವರಿಬ್ಬರೂ ಸೀಮೋನನ ಪಾಲುಗಾರರಾಗಿದ್ದರು.) ಯೇಸು ಸೀಮೋನನಿಗೆ, “ಭಯಪಡಬೇಡ. ಇಂದಿನಿಂದ ನೀನು ಮೀನನ್ನು ಹಿಡಿಯದೆ, ಮನುಷ್ಯರನ್ನು ಒಟ್ಟುಗೂಡಿಸಲು ದುಡಿಯುವೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ, ಯೋಹಾನರೂ ಹಾಗೆಯೇ ವಿಸ್ಮಯಗೊಂಡಿದ್ದರು. ಆಗ ಯೇಸು ಸೀಮೋನನಿಗೆ, “ಹೆದರಬೇಡ; ಇಂದಿನಿಂದ ನೀನು ದೇವರಿಗಾಗಿ ಮನುಷ್ಯರನ್ನೇ ಹಿಡಿಯುವವನಾಗಿರುವೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಖರೆ ಮಟ್ಲ್ಯಾರ್, ಜೆಬೆದೆವಾಚಿ ಪೊರಾ ಜಾಕೊಬ್ ಅನಿ ಜುವಾಂವುಚ್ ಸಿಮಾವಾಚೆ ವಾಂಗ್ಡಿ ಹೊವ್ನ್ ಹೊತ್ತೆ. ಜೆಜುನ್ ಸಿಮಾವಾಕ್ “ಭಿಂವ್ನಕೊ ಹಿತ್ನಾ ಫಿಡೆ ತಿಯಾ ಲೊಕಾಕ್ನಿ ದೆವಾಚ್ಯಾ ರಾಜಾಕ್ ಬಲ್ವುನ್ ಹಂತಲೊ ಮಾನುಸ್ ಹೊತೆ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |