Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:15 - ಕನ್ನಡ ಸತ್ಯವೇದವು J.V. (BSI)

15 ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು; ಮತ್ತು ಜನರು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮತಮ್ಮ ಜಾಡ್ಯಗಳನ್ನು ವಾಸಿ ಮಾಡಿಸಿಕೊಳ್ಳುವದಕ್ಕೂ ಗುಂಪುಗುಂಪಾಗಿ ನೆರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೇಸು ಎಷ್ಟು ಎಚ್ಚರಿಸಿದರೋ ಅಷ್ಟೂ ಅಧಿಕವಾಗಿ ಅವರ ಸುದ್ದಿ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅನೇಕ ಜನರು ಆತನ ಬೋಧನೆಗಳನ್ನು ಕೇಳುವುದಕ್ಕೂ ತಮ್ಮ ಕಾಯಿಲೆಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೂ ಯೇಸುವಿನ ವಿಷಯವು, ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ಅವರಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ದೊಡ್ಡ ಸಮೂಹಗಳು ಕೂಡಿ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ, ಧುರ್ ಪತರ್ ಜೆಜುಚಿ ಖಬರ್ ಫರ್ಗಟ್ಲಿ, ಅನಿ ಲೊಕಾ ತಾಂಡ್ಯಾ-ತಾಂಡ್ಯಾನಿ ತೆಚಿ ಗೊಸ್ಟಿಯಾ ಆಯ್ಕುಕ್, ಅನಿ ಅಪ್ನಾಚಿ ದುಕ್ನಿ ಆರಾಮ್ ಕರುನ್ ಘೆವ್ಕ್, ತೆಚೆಕ್ಡೆ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:15
13 ತಿಳಿವುಗಳ ಹೋಲಿಕೆ  

ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.


ಆದರೆ ಅವನು ಹೊರಟುಹೋಗಿ ಆ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸಿದ್ದರಿಂದ ಯೇಸು ಬಹಿರಂಗವಾಗಿ ಇನ್ನು ಯಾವ ಊರೊಳಕ್ಕೂ ಹೋಗಲಾರದೆ ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು. ಮತ್ತು ಜನರು ನಾಲ್ಕು ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.


ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.


ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲಿ ಎಲ್ಲೆಲ್ಲಿಯೂ ಹಬ್ಬಿತು.


ಬಹು ಜನರ ಗುಂಪು ರೋಗಿಗಳಲ್ಲಿ ಆತನು ನಡಿಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಆತನ ಹಿಂದೆ ಹೋಗುತ್ತಿತ್ತು.


ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ -


ಯೇಸು ತನ್ನ ಶಿಷ್ಯರ ಕೂಡ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹುಜನರು ಆತನ ಹಿಂದೆ ಹೋದರು.


ಯೆಹೋವನ ಭಯವೇ ಜ್ಞಾನೋಪದೇಶ; ಗೌರವಕ್ಕೆ ಮೊದಲು ವಿನಯ.


ಹಾಗೆಯೇ ಕೆಲವರ ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವರ ಸತ್ಕ್ರಿಯೆಗಳು ಅಪ್ರಸಿದ್ಧವಾಗಿದ್ದರೂ ಮರೆಯಾಗಿರಲಾರವು.


ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು