Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:18 - ಕನ್ನಡ ಸತ್ಯವೇದವು J.V. (BSI)

18 ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗದವನನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು; ಆದರೆ ಅವನನ್ನು ಒಳಗೆ ತೆಗೆದುಕೊಂಡುಹೋಗಿ ಆತನ ಮುಂದೆ ಇಡಬೇಕೆಂದು ಪ್ರಯತ್ನಿಸಿದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅಲ್ಲಿಗೆ ಬಂದರು. ರೋಗಿಯನ್ನು ಒಳಕ್ಕೆ ತೆಗೆದುಕೊಂಡು ಹೋಗಿ ಯೇಸುವಿನ ಮುಂದೆಯೇ ಇಡಬೇಕೆಂದು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಬ್ಬ ಪಾರ್ಶ್ವವಾಯು ರೋಗಿ ಅಲ್ಲಿದ್ದನು. ಒಂದು ಚಿಕ್ಕ ಹಾಸಿಗೆಯಲ್ಲಿ ಅವನನ್ನು ಕೆಲವು ಮಂದಿ ಗಂಡಸರು ಹೊತ್ತುಕೊಂಡು ಬಂದು ಯೇಸುವಿನ ಮುಂದೆ ಇಡಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯಲ್ಲಿ ಹೊತ್ತುಕೊಂಡು ಬಂದು, ಒಳಗೆ ಯೇಸುವಿನ ಎದುರಿಗೆ ತರುವುದಕ್ಕೆ ಪ್ರಯತ್ನಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಉಲ್ಲ್ಯಾ ಲೊಕಾನಿ ಎಕ್ ವಾರೆಮಾರಲ್ಲ್ಯಾ ಮಾನ್ಸಾಕ್ ತೆಚ್ಯಾ ಹಾತ್ರಾನಾ ಸಮೆತ್ ಘೆವ್ನ್ ಯೆಲ್ಯಾನಿ. ತೆನಿ ಜೆಜು ಹೊತ್ತ್ಯಾ ಘರಾತ್ ಗುಸುಕ್, ಅನಿ ತೆಕಾ ಜೆಜುಚ್ಯಾ ಇದ್ರಾಕ್ ನ್ಹೆವ್ನ್ ಥವ್ಕ್ ಬಗಟ್ಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:18
6 ತಿಳಿವುಗಳ ಹೋಲಿಕೆ  

ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಆದರೆ ಪಾಪಗಳನ್ನು ಕ್ಷವಿುಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ ಆ ಪಾರ್ಶ್ವವಾಯು ರೋಗದವನನ್ನು ನೋಡಿ - ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು