Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:21 - ಕನ್ನಡ ಸತ್ಯವೇದವು J.V. (BSI)

21 ಅದಕ್ಕೆ ಆ ಶಾಸ್ತ್ರಿಗಳೂ ಫರಿಸಾಯರೂ - ದೇವದೂಷಣೆಯ ಮಾತನ್ನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷವಿುಸಿಬಿಡುವದು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು ಎಂದು ಅಂದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, “ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮಲ್ಲೇ ಹೇಳಿಕೊಳ್ಳಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆಹೂದ್ಯ ಧರ್ಮೋಪದೇಶಕರು ಮತ್ತು ಫರಿಸಾಯರು, “ಈ ಮನುಷ್ಯನು (ಯೇಸು) ಯಾರು? ಈತನು ದೇವರಿಗೆ ವಿರುದ್ಧವಾದ ಸಂಗತಿಗಳನ್ನು ಹೇಳುತ್ತಾನಲ್ಲಾ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಬಲ್ಲನು” ಎಂದು ತಮ್ಮತಮ್ಮೊಳಗೆ ಯೋಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಫರಿಸಾಯರೂ ನಿಯಮ ಬೋಧಕರೂ, “ದೇವದೂಷಣೆಯನ್ನು ಮಾಡುವುದಕ್ಕೆ ಈತನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮಲ್ಲಿ ಮಾತನಾಡಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತನ್ನಾ ಫಾರಿಜೆವ್ ಅನಿ ಖಾಯ್ದೆ ಶಿಕ್ವುತಲಿ ಲೊಕಾ ಅಪ್ಲ್ಯಾ-ಅಪ್ಲ್ಯಾ ಮದ್ದಿ “ದೆವಾಚಿ ನಿಂದ್ಯಾ ಬೊಲ್ತಲೊ ಹ್ಯೊ ಮಾನುಸ್ ಕೊನ್? ದೆವಾನ್ ಎಕ್ಲ್ಯಾನುಚ್ ಪಾಪ್ ಮಾಪ್ ಕರುಕ್ ಹೊತಾ” ಮನುನ್ ಬೊಲುಕ್‍ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:21
23 ತಿಳಿವುಗಳ ಹೋಲಿಕೆ  

ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ, ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ಯೆಹೂದ್ಯರು - ನಾವು ನಿನ್ನ ಮೇಲೆ ಕಲ್ಲೆಸೆಯುವದು ಒಳ್ಳೇ ಕಾರ್ಯದ ದೆಸೆಯಿಂದಲ್ಲ, ದೇವದೂಷಣೆಯ ದೆಸೆಯಿಂದಲೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವದರ ದೆಸೆಯಿಂದಲೂ ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.


ಆತನ ಸಂಗಡ ಊಟಕ್ಕೆ ಒರಗಿಕೊಂಡವರು - ಪಾಪಗಳನ್ನು ಸಹ ಕ್ಷವಿುಸಿಬಿಡುವವನು ಇವನಾರು ಎಂದು ತಮ್ಮತಮ್ಮೊಳಗೆ ಅಂದುಕೊಂಡರು.


ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು - ಇದು ದೇವದೂಷಣೆಯ ಮಾತು; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;


[ಹೀಗಿರುವಲ್ಲಿ] ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಅಪರಾಧಪಾಪಗಳನ್ನು ಪರಿಹರಿಸಿಬಿಟ್ಟಿ. ಸೆಲಾ.


ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇಯಾಗಲಿ ಸ್ವದೇಶಸ್ಥನೇಯಾಗಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ದೇವರು ಆದುಕೊಂಡವರ ಮೇಲೆ ಯಾರು ತಪ್ಪುಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.


ಸ್ವಾಮೀ, ಕೇಳು! ಸ್ವಾಮೀ, ಕ್ಷವಿುಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!


ಕರ್ತನಾದ ನಮ್ಮ ದೇವರು ಕರುಣಿಸುವವನೂ ಕ್ಷವಿುಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ;


ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ನೀನು ಪಾಪವನ್ನು ಕ್ಷವಿುಸುವವನಾದ್ದರಿಂದ ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷವಿುಸುವವನೂ ಸಮಸ್ತರೋಗಗಳನ್ನು ವಾಸಿಮಾಡುವವನೂ


ಒಂದಾನೊಂದು ದಿನದಲ್ಲಿ ಆತನು ಉಪದೇಶ ಮಾಡುತ್ತಿರಲು ಗಲಿಲಾಯ ಯೂದಾಯಗಳ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇವಿುನಿಂದಲೂ ಬಂದಿದ್ದ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಆತನ ಹತ್ತಿರ ಕೂತುಕೊಂಡಿದ್ದರು. ಗುಣಮಾಡುವದಕ್ಕೆ ಕರ್ತನ ಶಕ್ತಿಯು ಆತನಲ್ಲಿತ್ತು.


ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು - ಇವನು ದೇವದೂಷಣೆ ಮಾಡುತ್ತಾನೆಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಆತನು ನಮ್ಮ ಕಡೆಗೆ ತಿರುಗಿಕೊಂಡು ನಮ್ಮನ್ನು ಕನಿಕರಿಸುವನು, ನಮ್ಮ ಅಪರಾಧಗಳನ್ನು ಅಣಗಿಸುವನು. [ದೇವರೇ,] ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬಿಸಾಟುಬಿಡುವಿ.


ಅವರು ಗಾಳಿ ಹಾರಿಸುವ ಹೊಟ್ಟಿನಂತಾಗಲಿ; ಯೆಹೋವನ ದೂತನು ಅವರನ್ನು ನೂಕಿಬಿಡಲಿ.


ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲಗಳಿಂದ ತೋರಿಸಿರಿ. ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂದು ನಿಮ್ಮೊಳಗೆ ಅಂದುಕೊಳ್ಳುವವರಾಗಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಆದರೆ ಅವರು ಹಾಗಂದುಕೊಳ್ಳುವದನ್ನು ಯೇಸು ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವದೇನು? ಯಾವದು ಸುಲಭ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು