ಲೂಕ 5:36 - ಕನ್ನಡ ಸತ್ಯವೇದವು J.V. (BSI)36 ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನಂದರೆ - ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ಹರಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವದಿಲ್ಲ; ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವದಲ್ಲದೆ ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೇದಕ್ಕೆ ಒಪ್ಪುವದೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು ಹೇಳಿದರು: “ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ. ಹಾಗೆ ಮಾಡಿದ್ದೇ ಆದರೆ ಹೊಸದೂ ಹರುಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಬಳಿಕ ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಹಳೆ ಅಂಗಿಗೆ ತೇಪೆ ಹಚ್ಚುವುದಕ್ಕಾಗಿ ಹೊಸ ಅಂಗಿಯಿಂದ ಬಟ್ಟೆಯನ್ನು ಯಾರೂ ಹರಿದುಕೊಳ್ಳುವುದಿಲ್ಲ. ಹಾಗೆ ಮಾಡಿದ್ದೇಯಾದರೆ, ಹೊಸ ಅಂಗಿಯನ್ನು ಕೆಡಿಸಿಕೊಂಡಂತಾಗುತ್ತದೆ. ಅಲ್ಲದೆ ಹೊಸ ಅಂಗಿಯ ಬಟ್ಟೆಯು ಹಳೆ ಅಂಗಿಗೆ ಹೋಲುವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಹರಿದು ತೇಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸದು ಹರಿದು ಹೋಗುವುದು. ಹೊಸದರಿಂದ ಕತ್ತರಿಸಿದ ತುಂಡು ಹಳೆಯದರೊಂದಿಗೆ ಹೊಂದಿಕೆಯಾಗುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಅನಿ ಜೆಜುನ್ ತೆಂಕಾ ಎಕ್ ಕಾನಿಬಿ ಸಾಂಗ್ಲ್ಯಾನ್ “ಎಕ್ ಜುನ್ನ್ಯಾ ಪಿಂಜಲ್ಲ್ಯಾ ಅಂಗಿಕ್ ಲಾವುನ್ ಶಿವುಕ್ ಮನುನ್, ನ್ಹವ್ಯಾ ಅಂಗಿಚೊ ತುಕ್ಡೊ ಕೊನ್ ಬಿ ಕಾತ್ರುನ್ ಕಾಡಿನಾ. ತೆನಿ ತಸೆ ಕರ್ಲ್ಯಾರ್, ತೊ ನ್ಹವಿ ಅಂಗಿ ಪಿಂಜ್ತಾ, ಅನಿ ತೊ ನ್ಹವೊ ತುಕ್ಡೊ ಜುನ್ನ್ಯಾ ಅಂಗಿಕ್ ಲಾವಲ್ಲೊ ಬರಬ್ಬರ್ ದಿಸಿನಾ. ಅಧ್ಯಾಯವನ್ನು ನೋಡಿ |