Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:38 - ಕನ್ನಡ ಸತ್ಯವೇದವು J.V. (BSI)

38 ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ದ್ರಾಕ್ಷಾರಸದ ಚೀಲಗಳಲ್ಲಿ ತುಂಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದರೆ, ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ಹಾಕಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತಸೆ ಮನುನ್ ನ್ಹವೊ ವಾಯ್ನ್ ನ್ಹವ್ಯಾ ಚಮ್ಡ್ಯಾಚ್ಯಾ ಪಿಸ್ವಿತುಚ್ ವೊತುಚೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:38
16 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಇಗೋ, ಎಲ್ಲವನ್ನು ಹೊಸದುಮಾಡುತ್ತೇನೆ ಅಂದನು. ಮತ್ತು ಒಬ್ಬನು ನನಗೆ - ಇದನ್ನು ಬರೆ; ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ ಎಂದು ಹೇಳಿದನು.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.


ಸಭೆಗೆ ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋದರರು ಅಲ್ಲಿ ಇದ್ದದರಿಂದ ಬಲಾತ್ಕಾರ ನಡೆದೀತೆಂಬ ಭಯವಿತ್ತು. ಅವರು ನಮ್ಮನ್ನೂ ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.


ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವದು, ಬುದ್ದಲಿಗಳು ಕೆಟ್ಟುಹೋಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಉಳಿಯುತ್ತವೆ ಎಂದು ಹೇಳಿದನು.


ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವದಿಲ್ಲ; ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ತಾನೂ ಚೆಲ್ಲಿಹೋಗುವದಲ್ಲದೆ ಬುದ್ದಲಿಗಳೂ ಕೆಟ್ಟುಹೋಗುವವು.


ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವದಿಲ್ಲ; ಹಳೇದೇ ಉತ್ತಮ ಅನ್ನುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು