Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:11 - ಕನ್ನಡ ಸತ್ಯವೇದವು J.V. (BSI)

11 ಆದರೆ ಅವರಲ್ಲಿ ದುರ್ಬುದ್ಧಿ ತುಂಬಿದ್ದದರಿಂದ - ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಫರಿಸಾಯರು ಮತ್ತು ಧರ್ಮೋಪದೇಶಕರು ಬಹಳವಾಗಿ ಕೋಪಗೊಂಡರು. ಅವರು, “ನಾವು ಯೇಸುವಿಗೆ ಏನು ಮಾಡೋಣ?” ಎಂದು ತಮ್ಮತಮ್ಮೊಳಗೆ ಸಂಚುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಫರಿಸಾಯರೂ ನಿಯಮ ಬೋಧಕರೂ ತುಂಬಾ ಕೋಪಗೊಂಡು ಯೇಸುವಿಗೆ ಏನಾದರೂ ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಫಾರಿಜೆವಾಕ್ನಿ ಅನಿ ಖಾಯ್ದೆ ಸಿಕ್ವುತಲ್ಯಾಕ್ನಿ ರಾಗ್ ಯೆಲೊ, ಅನಿ ತೆನಿ ಅಪ್ನಾ-ಅಪ್ನಾ ಮದ್ದಿಚ್ ಜೆಜುಕ್ ಕಾಯ್ ಕರುಂವಾ? ಮನುನ್ ಬೊಲುನ್ ಘೆವ್ಕ್ ಲಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:11
16 ತಿಳಿವುಗಳ ಹೋಲಿಕೆ  

ಸಭಿಕರು ಈ ಮಾತನ್ನು ಕೇಳಿ ರೌದ್ರವಾಗಿ ಅವರನ್ನು ಕೊಲ್ಲಿಸಬೇಕೆಂದು ಯೋಚಿಸಿದರು;


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕವ್ಯವಹಾರದಲ್ಲೆಲ್ಲಾ ಸೇರಿಕೊಂಡಿದೆ; ಇದಲ್ಲದೆ ನರವಂಶದವರ ಎದೆಯಲ್ಲಿ ಕೆಟ್ಟತನವು ತುಂಬಿದೆ; ಅವರು ಬದುಕಿರುವ ತನಕ ಮರುಳುತನವು ಅವರ ಮನಸ್ಸನ್ನು ಹಿಡಿದಿರುವದು. ಆಮೇಲೆ ಪ್ರೇತಲೋಕವೇ ಗತಿ.


ಎಲ್ಲಾ ಸಭಾಮಂದಿರಗಳಲ್ಲಿಯೂ ನಾನು ಅನೇಕಾವರ್ತಿ ಅವರನ್ನು ದಂಡಿಸಿ ಅವರಿಂದ ದೂಷಣೆಯ ಮಾತುಗಳನ್ನಾಡಿಸುವದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಪರಪಟ್ಟಣಗಳ ತನಕ ಅವರನ್ನು ಹಿಂಸೆಪಡಿಸಿದೆನು.


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


ಅದಕ್ಕೆ ಪೇತ್ರ ಯೋಹಾನರು ಅವರಿಗೆ - ದೇವರ ಮಾತನ್ನು ಕೇಳುವದಕ್ಕಿಂತಲೂ ನಿಮ್ಮ ಮಾತನ್ನು ಕೇಳುವದು ದೇವರ ಮುಂದೆ ನ್ಯಾಯವೋ ಏನು? ನೀವೇ ತೀರ್ಪುಮಾಡಿಕೊಳ್ಳಿರಿ;


ಆಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆಕೊಟ್ಟು -


ಆಗ ಮಹಾಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ - ನಾವು ಮಾಡುವದು ಇದೇನು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;


ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರಮಾಡುತ್ತಿದ್ದನು; ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದ್ದದರಿಂದ ಆತನಿಗೆ ಯೂದಾಯದಲ್ಲಿ ಸಂಚಾರಮಾಡುವ ಮನಸ್ಸಿರಲಿಲ್ಲ.


ಸಭಾಮಂದಿರದಲ್ಲಿರುವವರೆಲ್ಲರು ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು ಎದ್ದು ಆತನನ್ನು ಊರಹೊರಕ್ಕೆ ಅಟ್ಟಿ


ಮಹಾಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮನ್ನೇ ಕುರಿತು ಮಾತಾಡುತ್ತಾನೆಂದು ತಿಳುಕೊಂಡು ಆತನನ್ನು ಹಿಡಿಯುವದಕ್ಕೆ ಸಂದರ್ಭನೋಡುತ್ತಿದ್ದರು;


ನಾವು ರೊಟ್ಟೀಬುತ್ತಿ ಕಟ್ಟಿಕೊಳ್ಳದೆ ಬಂದೆವಲ್ಲಾ ಎಂದು ತಮ್ಮತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.


ಸುತ್ತಲೂ ಅವರೆಲ್ಲರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು; ಕೈ ವಾಸಿಯಾಯಿತು.


ಆ ದಿವಸಗಳಲ್ಲಿ ಆತನು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೋಗಿ ರಾತ್ರಿಯನ್ನೆಲ್ಲಾ ಪ್ರಾರ್ಥನೆಯಲ್ಲೇ ಕಳೆದನು.


ಆದರೆ ಅವರ ಪ್ರಯತ್ನವು ಇನ್ನು ಸಾಗುವದಿಲ್ಲ; ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದುಬಂದ ಪ್ರಕಾರ ಇವರದೂ ತಿಳಿದುಬರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು