Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:14 - ಕನ್ನಡ ಸತ್ಯವೇದವು J.V. (BSI)

14 ಅವರು ಯಾರಾರಂದರೆ - ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೀಗೆ ಆಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರಿಟ್ಟನು.) ಮತ್ತು ಪೇತ್ರನ ಸಹೋದರನಾದ ಅಂದ್ರೆಯ, ಯಾಕೋಬ ಮತ್ತು ಯೋಹಾನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಯಾರೆಂದರೆ: ಪೇತ್ರನೆಂದು ಹೆಸರು ಹೊಂದಿದ ಸೀಮೋನ, ಅವನ ಸಹೋದರ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆಂಚಿ ನಾವಾ - ಸಿಮಾವ್ ಹೆಕಾ ತೆನಿ ಪೆದ್ರು ಮನುನ್ ನಾವ್ ದಿಲ್ಯಾನ್ ಅನಿ ತೆಚೊ ಭಾವ್ ಅಂದ್ರು; ಜಾಕೊಬ್ ಅನಿ ಜುವಾಂವ್, ಫಿಲಿಪ್ ಅನಿ ಬಾರ್‍ತೊಲೊಮೆವ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:14
23 ತಿಳಿವುಗಳ ಹೋಲಿಕೆ  

ಅವರು ಅಲ್ಲಿಗೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿಗೆ ಹೋದರು; ಯಾರಾರಂದರೆ - ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, ಯಾಕೋಬನ ಯೂದ, ಇವರೇ.


ಯೇಸು ಅಲ್ಲಿಂದ ಮುಂದೆ ಹೋಗಿ ಇನ್ನಿಬ್ಬರು ಅಣ್ಣತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಇವರನ್ನೂ ಕರೆದನು.


ಹೀಗಿರುವಲ್ಲಿ, ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಅಣ್ಣತಮ್ಮಂದಿರಿಬ್ಬರು ಬಲೆಬೀಸುವದನ್ನು ಕಂಡನು; ಅವರು ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ತಮ್ಮನಾದ ಅಂದ್ರೆಯ. ಅವರು ಬೆಸ್ತರು, ಸಮುದ್ರದಲ್ಲಿ ಬಲೆಬೀಸುತ್ತಿದ್ದರು.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.


ಫಿಲಿಪ್ಪನು - ಸ್ವಾಮೀ, ನಮಗೆ ತಂದೆಯನ್ನು ತೋರಿಸು, ನಮಗೆ ಅಷ್ಟೇ ಸಾಕು ಅಂದನು.


ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್‍ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ -


ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಬಹು ಜನರ ಗುಂಪು ತನ್ನ ಬಳಿಗೆ ಬರುವದನ್ನು ಕಂಡು - ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡುತರೋಣ? ಎಂದು ಫಿಲಿಪ್ಪನನ್ನು ಕೇಳಿದನು.


ಫಿಲಿಪ್ಪನು ನತಾನಯೇಲನನ್ನು ಕಂಡುಕೊಂಡು ಅವನಿಗೆ - ಯಾವನ ವಿಷಯವಾಗಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನು ನಮಗೆ ಸಿಕ್ಕಿದನು; ಆತನು ಯಾರಂದರೆ ಯೋಸೇಫನ ಮಗನಾದ ನಜರೇತಿನ ಯೇಸು ಎಂದು ಹೇಳಿದನು.


ಸೀಮೋನನ ಪಾಲುಗಾರರಾಗಿದ್ದಂಥ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯಪಟ್ಟರು. ಯೇಸು ಸೀಮೋನನಿಗೆ - ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವವನಾಗಿರುವಿ ಎಂದು ಹೇಳಿದನು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು - ಸ್ವಾಮೀ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.


ಬೆಚ್ಚಿಬೆರಗಾಗಿ ಮನಗುಂದಿದವನಾದನು.


ಆರು ದಿವಸಗಳಾದ ಮೇಲೆ ಯೇಸು ಪೇತ್ರ ಯಾಕೋಬ ಯೋಹಾನರನ್ನು ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣ ಮುಂದೆ ಆತನ ರೂಪ ಬೇರೆಯಾಯಿತು.


ಮತ್ತು ಆತನು ಪೇತ್ರ, ಯಾಕೋಬ, ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರಗೊಡಲಿಲ್ಲ.


ಆಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಬಂದರು.


ಇನ್ನೂ ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು.


ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕದ ಮತ್ತಾಯ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ,


ಆತನು ಕಳುಹಿಸಿಕೊಟ್ಟ ಅಪೊಸ್ತಲರೆಂಬ ಹನ್ನೆರಡು ಮಂದಿಯ ಹೆಸರುಗಳು ಯಾವವಂದರೆ - ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನ, ಅವನ ತಮ್ಮನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ತಮ್ಮನಾದ ಯೋಹಾನ,


ಸೀಮೋನನೆಂಬವನಿಗೆ ಪೇತ್ರನೆಂದು ಹೆಸರನ್ನು ಇಟ್ಟನು.


ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂತ ಹೆಸರಿಟ್ಟನು.


ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು