Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:15 - ಕನ್ನಡ ಸತ್ಯವೇದವು J.V. (BSI)

15 ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮತ್ತಾಯ ಮತ್ತು ತೋಮ, ಅಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮತ್ತಾಯ, ತೋಮ, ಯಾಕೋಬ (ಅಲ್ಫಾಯನ ಮಗ) ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಎಂದು ಅನ್ನಿಸಿಕೊಂಡ ಸೀಮೋನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಮಾತೆವ್ ಅನಿ ಥೊಮಸ್, ಅಲ್ಫೆವಾಚೊ ಲೆಕ್ ಜಾಕೊಬ್,ಅನಿ ದೆಸ್‍ಭಕ್ತ್ ಮನುನ್ ಬಲ್ವುತಲೊ ಸಿಮಾವ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:15
14 ತಿಳಿವುಗಳ ಹೋಲಿಕೆ  

ಯೇಸು ಅಲ್ಲಿಂದ ಹೋಗುತ್ತಿರುವಾಗ ಸುಂಕಕ್ಕೆ ಕೂತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.


ಅವರು ಅಲ್ಲಿಗೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿಗೆ ಹೋದರು; ಯಾರಾರಂದರೆ - ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, ಯಾಕೋಬನ ಯೂದ, ಇವರೇ.


ಉಳಿದವರು ಯಾರಂದರೆ, ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ.


ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಕರ್ತನ ತಮ್ಮನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ಕಾಣಲಿಲ್ಲ.


ಅವರು ಮಾತಾಡುವದನ್ನು ಮುಗಿಸಿದ ಮೇಲೆ ಯಾಕೋಬನು ಆ ಪ್ರಸ್ತಾಪವನ್ನು ಹಿಡಿದು ಹೇಳಿದ್ದೇನಂದರೆ -


ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರೊಳಗೆ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಸಂಗಡ ಇರಲಿಲ್ಲ.


ಆಗ ದಿದುಮನೆಂಬ ತೋಮನು ಜೊತೇ ಶಿಷ್ಯರಿಗೆ - ನಾವು ಸಹ ಹೋಗಿ ಆತನೊಡನೆ ಸಾಯೋಣ ಎಂದು ಹೇಳಿದನು.


ಇದಾದ ಮೇಲೆ ಆತನು ಹೊರಟು ಸುಂಕಕ್ಕೆ ಕೂತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು


ಆತನು [ಅಲ್ಲಿಂದ] ಹೋಗುತ್ತಿರುವಾಗ ಸುಂಕಕ್ಕೆ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ - ನನ್ನನ್ನು ಹಿಂಬಾಲಿಸು ಎಂದು ಅವನನ್ನು ಕರೆಯಲು ಅವನು ಎದ್ದು ಆತನ ಹಿಂದೆ ಹೋದನು.


ಅವರು ಯಾರಾರಂದರೆ - ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ,


ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ, ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು