Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:19 - ಕನ್ನಡ ಸತ್ಯವೇದವು J.V. (BSI)

19 ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನು ವಾಸಿಮಾಡುತ್ತಿದ್ದದರಿಂದ ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವದಕ್ಕೆ ಪ್ರಯತ್ನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯೇಸುವಿನಿಂದ ದಿವ್ಯಶಕ್ತಿ ಹರಿದು ಎಲ್ಲರನ್ನೂ ಗುಣಪಡಿಸುತ್ತಿತ್ತು. ಆದುದರಿಂದ ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಜನರೆಲ್ಲರೂ ಯೇಸುವನ್ನು ಮುಟ್ಟುವುದಕ್ಕೆ ಪ್ರಯತ್ನಿಸಿದರು, ಏಕೆಂದರೆ ಆತನಿಂದ ಶಕ್ತಿಯು ಹರಿದುಬಂದು ಎಲ್ಲರನ್ನೂ ಗುಣಪಡಿಸುತ್ತಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಸಮೂಹದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು, ಏಕೆಂದರೆ ಅವರಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥಮಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಸಗ್ಳಿ ಲೊಕಾ ತೆಕಾ ಆಪಡ್ತಲೊ ಅವ್ಕಾಸ್ ಹುಡ್ಕಿತ್, ಅನಿ ಜೆಜುಚಿ ತಾಕತ್ ಭಾಯ್ರ್ ಜಾಯ್, ಅನಿ ಅಪಡಲ್ಲ್ಯಾ ಸಗ್ಳ್ಯಾಕ್ನಿ ಗುನ್ ಕರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:19
15 ತಿಳಿವುಗಳ ಹೋಲಿಕೆ  

ಆತನನ್ನು - ನಿನ್ನ ಉಡುಪಿನ ಗೊಂಡೆಯನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು. ಮುಟ್ಟಿದವರೆಲ್ಲರು ಸ್ವಸ್ಥರಾದರು.


ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಆತನನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.


ಆತನು ಯಾವ ಗ್ರಾಮಗಳಿಗೂ ಯಾವ ಊರು ಹಳ್ಳಿಗಳಿಗೂ ಹೋದನೋ ಅಲ್ಲಿಯವರು ರೋಗಿಗಳನ್ನು ಪೇಟೆಗಳಲ್ಲಿ ಇಟ್ಟು - ನಿನ್ನ ಉಡುಪಿನ ಗೊಂಡೆಯನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು.


ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳುಕೊಂಡು ಗುಂಪಿನಲ್ಲಿ ಹಿಂತಿರುಗಿ - ನನ್ನ ಉಡುಪನ್ನು ಯಾರು ಮುಟ್ಟಿದರು? ಎಂದು ಕೇಳಲು


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರಕೊಂಡುಬಂದು - ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.


ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.


ಒಂದಾನೊಂದು ದಿನದಲ್ಲಿ ಆತನು ಉಪದೇಶ ಮಾಡುತ್ತಿರಲು ಗಲಿಲಾಯ ಯೂದಾಯಗಳ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇವಿುನಿಂದಲೂ ಬಂದಿದ್ದ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಆತನ ಹತ್ತಿರ ಕೂತುಕೊಂಡಿದ್ದರು. ಗುಣಮಾಡುವದಕ್ಕೆ ಕರ್ತನ ಶಕ್ತಿಯು ಆತನಲ್ಲಿತ್ತು.


ಒಂದು ದಿವಸ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವದಕ್ಕೆ ಹೋದಾಗ ಮೋವಾಬ್ಯರ ಗುಂಪು ಬರುತ್ತಿರುವದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿ ಹೋದರು. ಸತ್ತ ಮನುಷ್ಯನು ಎಲೀಷನ ಎಲುಬುಗಳಿಗೆ ತಗುಲಿದ ಕೂಡಲೆ ಉಜ್ಜೀವಿಸಿ ಎದ್ದು ನಿಂತನು.


ಅವರಲ್ಲಿ ದೆವ್ವಗಳ ಕಾಟವಿದ್ದವರು ಸ್ವಸ್ಥವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು