Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:21 - ಕನ್ನಡ ಸತ್ಯವೇದವು J.V. (BSI)

21 ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕುನಲಿದಾಡುವಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹಸಿವೆಗೊಂಡಿರುವ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಅಳುತ್ತಿರುವ ನೀವು ಧನ್ಯರು; ಆನಂದದಿಂದ ನೀವು ನಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಈಗ ಹಸಿದವರಾದ ನೀವು ಧನ್ಯರು, ನೀವು ತೃಪ್ತಿಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು, ನೀವು ನಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅತ್ತಾ ಉಪ್ಪಾಸಿ ಹೊತ್ತ್ಯಾನೊ ತುಮಿ ಸುಖಿ; ತುಮ್ಕಾ ಭರ್‍ಪುರ್ ಗಾವ್ತಾ! ಅತ್ತಾ ರಡ್ತಲ್ಯಾನೊ ತುಮಿ ಕವ್ಡೆ ಸುಖಿ; ತುಮಿ ಹಾಸ್ತ್ಯಾಶಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:21
56 ತಿಳಿವುಗಳ ಹೋಲಿಕೆ  

ಅವರಿಗೆ - ಜೀವಕೊಡುವ ರೊಟ್ಟಿ ನಾನೇ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ, ನನ್ನನ್ನು ನಂಬುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು.


ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ ಸ್ಥಿತಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.


ದುಃಖಪಡುವವರು ಧನ್ಯರು; ಅವರು ಸಮಾಧಾನ ಹೊಂದುವರು.


ಇನ್ನು ಮೇಲೆ ಅವರಿಗೆ ಹಸಿವೆ ಇಲ್ಲ, ಬಾಯಾರಿಕೆ ಇಲ್ಲ; ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ;


ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ.


ಈ ಗಳಿಗೆಯವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ಮೈಗೆ ವಸ್ತ್ರವಿಲ್ಲದವರೂ ಗುದ್ದು ತಿನ್ನುವವರೂ


ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ಅವರು ಅಳುತ್ತಾ ನಡೆದು ಬರುವರು, ಅವರ ವಿಜ್ಞಾಪನೆಗಳಿಂದಲೇ ಅವರನ್ನು ಮುಂದರಿಸುವೆನು; ಎಡವದ ಸಮಮಾರ್ಗದಲ್ಲಿ ನಡಿಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು; ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಯೆರೂಸಲೇವಿುನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವದೇ ಇಲ್ಲ; ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.


ಆತನು ಬಾಯಾರಿದವರ ಆಶೆಯನ್ನು ಪೂರೈಸಿ ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.


ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು. ಎಚ್ಚತ್ತಾಗ ನಿನ್ನ ಸ್ವರೂಪದರ್ಶನದಿಂದ ತೃಪ್ತನಾಗಿರುವೆನು.


ಸಾರಳು - ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ; ಕೇಳುವವರೆಲ್ಲರೂ ನನ್ನೊಡನೆ ನಗುವರು.


ನೂರು ವರುಷದವನಿಗೆ ಮಗ ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆತ್ತಾಳೇ ಎಂದು ಮನಸ್ಸಿನಲ್ಲಿ ಅಂದುಕೊಂಡು ದೇವರಿಗೆ -


ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾ ಶಬ್ದವು ನನಗೆ ಕೇಳಿಸಿತು. ಅದು - ಇಗೋ, ದೇವರ ನಿವಾಸವು ಮನುಷ್ಯರಲ್ಲಿ ಅದೆ; ಆತನು ಅವರೊಡನೆ ವಾಸಮಾಡುವನು, ಅವರು ಆತನಿಗೆ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು,


ಆದದರಿಂದ ಕ್ರಿಸ್ತನ ನಿವಿುತ್ತ ನನಗೆ ನಿರ್ಬಲಾವಸ್ಥೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಸಂತುಷ್ಟನಾಗಿದ್ದೇನೆ. ನಾನು ಯಾವಾಗ ನಿರ್ಬಲನಾಗಿದ್ದೇನೋ ಆವಾಗಲೇ ಬಲವುಳ್ಳವನಾಗಿದ್ದೇನೆ.


ಪ್ರಯಾಸ ಪರಿಶ್ರಮಗಳಿಂದ ಕೆಲಸನಡಿಸಿ ಅನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನು ಪಟ್ಟು ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.


ದುಃಖಪಡುವವರಾಗಿದ್ದರೂ ಯಾವಾಗಲೂ ಸಂತೋಷಪಡುವವರೂ, ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯವನ್ನುಂಟುಮಾಡುವವರೂ, ಏನೂ ಇಲ್ಲದವರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.


ಯೇಸು ಕಣ್ಣೀರು ಬಿಟ್ಟನು.


ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು ಎಂದು ಅಪ್ಪಣೆಕೊಟ್ಟನು.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು ತಮ್ಮ ಅಧರ್ಮದಲ್ಲಿಯೇ ಇದ್ದು ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಮೊರೆಯಿಡುತ್ತಿರುವರು.


ನಾನು ಬಳಲಿದವರನ್ನು ತಂಪುಗೊಳಿಸಿ ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿವಿುತ್ತ ಗೋಳಾಡುವದು; ಯೆಹೋವನ ಮಂದೆಯು ಸೆರೆಯಾಗಿ ಹೋದದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವದು.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿವಿುತ್ತ ಹಗಲಿರುಳೂ ಅಳಬೇಕಲ್ಲಾ!


ಯೆರೂಸಲೇಮ್ ಪುರಿಯನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ!


ಇದಲ್ಲದೆ ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲಜನಾಂಗಗಳಿಗೂ ಸಾರವತ್ತಾದ ಮೃಷ್ಟಾನ್ನದಿಂದಲೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಅಣಿಮಾಡುವನು.


ಕೈಯೊಡ್ಡಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ.


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿವಿುತ್ತ ನನಗೆ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.


ನಿನ್ನ ಅಂಗಳದಲ್ಲಿ ವಾಸಿಸುವವರಾಗಿ ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೋಸ್ಕರ ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.


ಯೆಹೋವನು ನನಗೆ ಬಲವೂ ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.


ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನಂದರೆ -


ಮನುಷ್ಯಕುಮಾರನ ನಿವಿುತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು