Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:22 - ಕನ್ನಡ ಸತ್ಯವೇದವು J.V. (BSI)

22 ಮನುಷ್ಯಕುಮಾರನ ನಿವಿುತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22-23 ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ನೀವು ಮನುಷ್ಯಕುಮಾರನಿಗೆ ಸೇರಿದವರಾಗಿರುವುದರಿಂದ ಜನರು ನಿಮ್ಮನ್ನು ದ್ವೇಷಿಸಿದರೆ, ತುಚ್ಛೀಕರಿಸಿದರೆ, ಅವಮಾನ ಮಾಡಿದರೆ, ನಿಮ್ಮನ್ನು ಕೆಟ್ಟವರೆಂದು ಹೇಳಿದರೆ ನೀವು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮನುಷ್ಯಪುತ್ರನಾದ ನನ್ನ ನಿಮಿತ್ತ ಜನರು ನಿಮ್ಮನ್ನು ದ್ವೇಷಮಾಡಿ, ನಿಮ್ಮನ್ನು ಬಹಿಷ್ಕರಿಸಿ, ನಿಂದಿಸಿ, ನಿಮ್ಮ ಹೆಸರನ್ನು ಕೆಟ್ಟದೆಂದು ತಿರಸ್ಕರಿಸಿದರೆ ನೀವು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 “ಮಾನ್ಸಾಚ್ಯಾ ಲೆಕಾಕ್ ಲಾಗುನ್ ಲೊಕಾನಿ ತುಮ್ಕಾ ದ್ವೆಸ್ ಕರ್ಲ್ಯಾರ್, ಮರ್ಯಾದ್ ದಿನಸ್ಲ್ಯಾರ್, ತುಮ್ಚಿ ಮರ್ಯಾದ್ ಕಾಡ್ಲ್ಯಾರ್, ಅನಿ ತುಮಿ ವಾಯ್ಟ್ ಮನುನ್ ಸಾಂಗ್ಲ್ಯಾರ್ ತುಮಿ ಕವ್ಡೆ ಸುಖಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:22
29 ತಿಳಿವುಗಳ ಹೋಲಿಕೆ  

ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ಒಂದು ವೇಳೆ ನೀತಿಯ ನಿವಿುತ್ತವೇ ಬಾಧೆಪಟ್ಟರೆ ನೀವು ಧನ್ಯರೇ.


ನಿಮಗೆ ಬಹಿಷ್ಕಾರ ಹಾಕುವರು; ಅದಲ್ಲದೆ ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಯಜ್ಞವನ್ನು ಮಾಡಿದ್ದೇನೆಂದು ನೆನಸುವ ಕಾಲ ಬರುತ್ತದೆ.


ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ಆದರೂ ಹಿರೀಸಭೆಯವರಲ್ಲಿಯೂ ಅನೇಕರು ಆತನನ್ನು ನಂಬಿದರು. ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು ಫರಿಸಾಯರಿಗೆ ಅಂಜಿಕೊಂಡು ಅದನ್ನು ಜನರ ಮುಂದೆ ಹೇಳಲಿಲ್ಲ.


ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ ಎನ್ನುತ್ತಾ ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.


ಈ ಮನುಷ್ಯನು ಪೀಡೆಯಂತಿದ್ದು ಲೋಕದಲ್ಲಿ ಎಲ್ಲೆಲ್ಲಿಯೂ ಇರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನೆಂತಲೂ ಕಂಡೆವು.


ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.


ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ; ನಾನು ಲೋಕದವನಲ್ಲದೆ ಇರುವ ಪ್ರಕಾರ ಇವರೂ ಲೋಕದವರಲ್ಲ; ಆದಕಾರಣ ಲೋಕವು ಇವರ ಮೇಲೆ ದ್ವೇಷ ಮಾಡಿ ಅದೆ.


ಇದಲ್ಲದೆ ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು.


ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳಕೊಳ್ಳುವನು; ನನ್ನ ನಿವಿುತ್ತವಾಗಿ ತನ್ನ ಪ್ರಾಣವನ್ನು ಕಳಕೊಂಡವನು ಅದನ್ನು ಕಂಡುಕೊಳ್ಳುವನು.


ಈ ಮಾತಿನ ತನಕ ಅವರು ಕೇಳುತ್ತಿದ್ದರು; ಆಮೇಲೆ - ಇಂಥವನನ್ನು ಭೂವಿುಯಿಂದ ತೆಗೆದುಹಾಕಿಬಿಡು; ಇವನು ಬದುಕುವದು ಯುಕ್ತವಲ್ಲವೆಂದು ಕೂಗಿಹೇಳಿದರು.


ಈ ಮಾತಿಗೆ ಅವರು - ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನಮಗೆ ಉಪದೇಶಮಾಡುತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಅವನನ್ನು ದ್ರಾಕ್ಷೆಯ ತೋಟದಿಂದ ಹೊರಕ್ಕೆ ದೊಬ್ಬಿ ಕೊಂದುಹಾಕಿದರು. ಹಾಗಾದರೆ ದ್ರಾಕ್ಷೆಯತೋಟದ ಧಣಿಯು ಅವರಿಗೆ ಏನು ಮಾಡುವನು?


ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದಕ್ಕೂ ಅರಸುಗಳ ಮುಂದಕ್ಕೂ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.


ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.


ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು