Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:27 - ಕನ್ನಡ ಸತ್ಯವೇದವು J.V. (BSI)

27 ಕೇಳುವವರಾದ ನಿಮಗೆ ನಾನು ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಕೇಳುವವರಾದ ನಿಮಗೆ ನಾನು ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ನನ್ನನ್ನು ಆಲಿಸುತ್ತಿರುವವರೇ, ನನ್ನ ಮಾತನ್ನು ಕೇಳಿರಿ: ‘ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಿಸುವವರನ್ನು ಸತ್ಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ನನ್ನ ಮಾತುಗಳನ್ನು ಆಲಿಸುತ್ತಿರುವ ನಿಮಗೆ ನಾನು ಹೇಳುವುದೇನೆಂದರೆ: ನಿಮ್ಮ ವೈರಿಗಳನ್ನು ಪ್ರೀತಿಸಿರಿ. ನಿಮ್ಮನ್ನು ದ್ವೇಷಿಸುವವರಿಗೆ ಒಳ್ಳೆಯದನ್ನು ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ನನ್ನನ್ನು ಆಲಿಸುತ್ತಿರುವವರೆ ನನ್ನ ಮಾತನ್ನು ಕೇಳಿರಿ: ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಮಾಡುವವರಿಗೆ ಒಳ್ಳೆಯದನ್ನು ಮಾಡಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 “ಮಿಯಾ ಸಾಂಗ್ತಲೆ ಆಯಿಕ್ತಲ್ಯಾನೊ ಮಿಯಾ ತುಮ್ಕಾ ಸಾಂಗ್ತಾ: ತುಮ್ಚ್ಯಾ ದುಸ್ಮಾನಾಚೊ ಪ್ರೆಮ್ ಕರಾ,ತುಮ್ಚೆ ವರ್‍ತಿ ರಾಗಾನ್ ರ್‍ಹಾತಲ್ಯಾಕ್ನಿ ಬರೆ ಕರಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:27
22 ತಿಳಿವುಗಳ ಹೋಲಿಕೆ  

ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ!


ಆದದರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ಒಂದೇ ಮನೆಯವರಂತಿರುವ ಕ್ರಿಸ್ತನಂಬಿಕೆಯುಳ್ಳವರಿಗೆ ಮಾಡೋಣ.


ಮತ್ತು ಆತನು ಅವರಿಗೆ - ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ಇನ್ನೂ ಕೂಡಿಸಿ ಕೊಡುವರು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.


ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು.


ಆದದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ; ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವದು ಅಂದನು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.


ಇನ್ನು ಕೆಲವು ಬೀಜ ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ನೂರರಷ್ಟು ಫಲವನ್ನು ಕೊಟ್ಟವು. ಈ ಮಾತುಗಳನ್ನು ಹೇಳಿ ಆತನು - ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಎಂದು ಕೂಗಿದನು.


ಮನುಷ್ಯಕುಮಾರನ ನಿವಿುತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು.


ಒಳ್ಳೇದನ್ನು ಮಾಡುವವನು ದೇವರಿಂದ ಹುಟ್ಟಿದವನಾಗಿದ್ದಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. ದೇಮೇತ್ರಿಯನು ಸಂಭಾವಿತನೆಂದು ಎಲ್ಲರಿಂದಲೂ ಸಾಕ್ಷಾತ್ ಸತ್ಯದಿಂದಲೂ ಸಾಕ್ಷಿಹೊಂದಿದ್ದಾನೆ.


ವಿಷಯವನ್ನು ರಹಸ್ಯಮಾಡುವದು ದೇವರ ಪ್ರಭಾವ; ವಿಷಯವನ್ನು ವಿಮರ್ಶೆಮಾಡುವದು ರಾಜರ ಪ್ರಭಾವ.


ವಿುತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ;


ಅರಸನು ಆ ಮನುಷ್ಯನಿಗೆ - ನಿನ್ನ ದೇವರಾದ ಯೆಹೋವನು ಪ್ರಸನ್ನನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂದೆಗೆಯುವದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು ಎಂದು ಹೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.


ಆದರೆ ಪೌಲನು ಮಹಾಶಬ್ದದಿಂದ ಕೂಗಿ ಅವನಿಗೆ - ನೀನೇನೂ ಕೇಡು ಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು