Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:39 - ಕನ್ನಡ ಸತ್ಯವೇದವು J.V. (BSI)

39 ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ - ಕುರುಡನು ಕುರುಡನಿಗೆ ದಾರೀ ತೋರಿಸುವದಕ್ಕಾದೀತೇ? ಅವರಿಬ್ಬರೂ ಕುಣಿಯಲ್ಲಿ ಬೀಳುವರಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಯೇಸುಸ್ವಾಮಿ ಅವರಿಗೆ ಈ ಸಾಮತಿಯನ್ನೂ ಹೇಳಿದರು: “ಕುರುಡನು ಕುರುಡನಿಗೆ ದಾರಿ ತೋರಿಸಲಾದೀತೆ? ಇಬ್ಬರೂ ಹಳ್ಳದಲ್ಲಿ ಬೀಳುವುದಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಯೇಸು ಅವರಿಗೆ ಈ ಸಾಮ್ಯವನ್ನೂ ಹೇಳಿದನು: “ಒಬ್ಬ ಕುರುಡನು ಇನ್ನೊಬ್ಬ ಕುರುಡನನ್ನು ನಡಿಸುವುದಕ್ಕಾದೀತೇ? ಇಲ್ಲ! ಅವರಿಬ್ಬರೂ ಗುಂಡಿಯಲ್ಲಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದು: “ಕುರುಡನು ಕುರುಡನಿಗೆ ದಾರಿತೋರಿಸಬಲ್ಲನೋ? ಅವರಿಬ್ಬರೂ ಹಳ್ಳಕ್ಕೆ ಬೀಳುವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಮಾನಾ ಜೆಜುನ್ ತೆಂಕಾ ಹಿ ಕಾನಿ ಸಾಂಗಟ್ಲ್ಯಾನ್; ಎಕ್ ಕುಡ್ಡ್ಯಾನ್ ಅನಿಎಕ್ ಕುಡ್ಡ್ಯಾಕ್ ವಾಟ್ ದಾಕ್ವುಕ್ ಹೊಯ್ನಾ; ತೆನಿ ತಸೆ ಕರ್ಲ್ಯಾರ್, ದೊಗೆ ಜಾನಾಬಿ ಖಡ್ಡ್ಯಾತ್ ಪಡ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:39
14 ತಿಳಿವುಗಳ ಹೋಲಿಕೆ  

ಅವರ ಮಾತನ್ನು ಬಿಡಿರಿ; ತಾವೇ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸುವದಕ್ಕೆ ಹೋಗುತ್ತಾರೆ; ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಕುಣಿಯಲ್ಲಿ ಬೀಳುವರು ಅಂದನು.


ಆದರೆ ದುಷ್ಟರೂ ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳುವಳಿಕೆಯಿಲ್ಲ; ಇವರೆಲ್ಲರೂ ಬೊಗಳಲಾರದ ಮೂಗನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು.


ಈ ಜನರನ್ನು ನಡಿಸುವವರು ದಾರಿತಪ್ಪಿಸುವವರಾಗಿದ್ದಾರಷ್ಟೆ; ನಡಿಸಲ್ಪಟ್ಟವರೂ ನಾಶವಾಗುತ್ತಾರೆ.


ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಗೆ ಹೇಗೆ ತಪ್ಪಿಸಿಕೊಂಡೀರಿ?


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಧರ್ಮಶಾಸ್ತ್ರದಲ್ಲಿ ಜ್ಞಾನ ಸತ್ಯಗಳ ಸ್ವರೂಪವೇ ನನಗೆ ಇರುವದರಿಂದ ಕುರುಡರಿಗೆ ದಾರಿತೋರಿಸುವವನೂ


ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. ಹೇಗಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು