Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:41 - ಕನ್ನಡ ಸತ್ಯವೇದವು J.V. (BSI)

41 ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯೋಚಿಸುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 “ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 “ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ, ಸೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 “ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 “ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 “ತಿಯಾ ತುಜ್ಯಾ ಡೊಳ್ಯಾತ್ನಿ ಹೊತ್ತೊ ಮೊಟೊ ನಾಕ್ಡಾಚೊ ತುಕ್ಡೊ ಬಗಿನಸ್ತಾನಾ,ತುಜ್ಯಾ ಭಾವಾಚ್ಯಾ ಡೊಳ್ಯಾತ್ಲೊ ಬಾರಿಕ್ಲೊ ಕಚ್ರೊ ಕಶ್ಯಾಕ್ ಬಗುಕ್ ಜಾತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:41
18 ತಿಳಿವುಗಳ ಹೋಲಿಕೆ  

ಅವರು ಆತನನ್ನು ಬಿಡದೆ ಕೇಳುತ್ತಿರುವಾಗ ಆತನು ನೆಟ್ಟಗೆ ಕೂತುಕೊಂಡು ಅವರಿಗೆ - ನಿಮ್ಮಲ್ಲಿ ಪಾಪವಿಲ್ಲದವನು ಯಾರೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಹೇಳಿ


ಇವನು ತನ್ನನ್ನು ನೋಡಿಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು.


ಆದದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಯಾವನಾದರೂ ಸರಿಯೇ, ಉತ್ತರ ಹೇಳುವದಕ್ಕೆ ನಿನಗೆ ಮಾರ್ಗವಿಲ್ಲ. ಹೇಗಂದರೆ ಮತ್ತೊಬ್ಬರಲ್ಲಿ ದೋಷವೆಣಿಸುವದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ನಡಿಸುತ್ತೀಯಲ್ಲಾ.


ಹೃದಯವು ಎಲ್ಲಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ಯಾರು ತಿಳಿದಾರು?


ಅವನು ಯೋಚಿಸಿ ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದರಿಂದ ಸಾಯನು, ಬಾಳೇ ಬಾಳುವನು.


ಅದು ಅವನನ್ನು ವಂಚಿಸಿ - ನಿನ್ನ ತಪ್ಪು ಬೈಲಿಗೆ ಬರುವದಿಲ್ಲ. ಹೇಯವಾಗುವದಿಲ್ಲ ಎಂದು ಊದಿಬಿಡುತ್ತದೆ.


ಅರಸನ ಅಪ್ಪಣೆಯು ಯೋವಾಬನಿಗೆ ಅಸಹ್ಯವಾಗಿದ್ದದರಿಂದ ಅವನು ಇವರೊಡನೆ ಲೇವಿ ಬೆನ್ಯಾಮೀನ್ ಕುಲಗಳವರ ಖಾನೇಷುಮಾರಿಯನ್ನು ಮಾಡಲಿಲ್ಲ.


ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಅಂದರೆ ಇಸ್ರಾಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದಸೇನಾಪತಿಯೂ ಯೆತೆರೆನ ಮಗನೂ ಆದ ಅಮಾಸನನ್ನೂ ಕೊಂದನಲ್ಲಾ.


ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವದಿಲ್ಲ.


ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ತೀರಾ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.


ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನೇ ನೀನು ನೋಡದೆ ನಿನ್ನ ಸಹೋದರನಿಗೆ - ಅಣ್ಣಾ, ನಿನ್ನ ಕಣ್ಣಿನೊಳಗಿನ ರವೆಯನ್ನು ತೆಗೆಯುತ್ತೇನೆ ಬಾ ಎಂದು ಹೇಳುವದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿಂದ ತೊಲೆಯನ್ನು ತೆಗೆದುಹಾಕಿಕೋ, ಆಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ರವೆಯನ್ನು ತೆಗೆಯುವದಕ್ಕೆ ಚೆನ್ನಾಗಿ ಕಾಣಿಸುವದು.


ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಅವುಗಳನ್ನು ಆತನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ - ಇವುಗಳನ್ನೂ ಹಂಚಿಕೊಡಿರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು