Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:47 - ಕನ್ನಡ ಸತ್ಯವೇದವು J.V. (BSI)

47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಯಾರಿಗೆ ಸಮಾನನೆಂಬದನ್ನು ನಿಮಗೆ ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ, ಅದರಂತೆ ನಡೆಯುವ ಪ್ರತಿಯೊಬ್ಬನೂ ಎಂಥವನಿಗೆ ಸಮಾನನೆಂದು ನಿಮಗೆ ಹೇಳುತ್ತೇನೆ ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ, ಅವುಗಳಿಗೆ ವಿಧೇಯನಾಗುವ ಪ್ರತಿಯೊಬ್ಬನು ಮನೆಯನ್ನು ಕಟ್ಟುವ ವ್ಯಕ್ತಿಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಯಾರು ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ ಅದರಂತೆ ನಡೆಯುತ್ತಾರೋ, ಅಂಥವರು ಯಾರಿಗೆ ಸಮಾನರಾಗಿದ್ದಾರೆಂದು ನಾನು ನಿಮಗೆ ತೋರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಕೊನ್ಬಿ ಎಕ್ಲೊ ಮಾಜ್ಯಾ ವಾಂಗ್ಡಾ ಯೆತಾ ಅನಿ ಮಿಯಾ ಸಾಂಗಟಲ್ಲೆ ಆಯಿಕ್ತಾ ಅನಿ ಮಾಜ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊತಾ ತೊ ಕೊನ್ ಮನುನ್ ಮಿಯಾ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:47
30 ತಿಳಿವುಗಳ ಹೋಲಿಕೆ  

ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಕೂಗಿದಳು. ಆತನು - ಹಾಗನ್ನಬೇಡ, ದೇವರ ವಾಕ್ಯವನ್ನು ಕೇಳಿ ಅದಕ್ಕೆ ಸರಿಯಾಗಿ ನಡಕೊಳ್ಳುವವರೇ ಧನ್ಯರು ಅಂದನು.


ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.


ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನು ಪಾಪಕ್ಕೊಳಗಾಗಿದ್ದಾನೆ.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ನೀವು ಇದನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ಆ ಕಲ್ಲನ್ನು ಮನುಷ್ಯರು ನಿರಾಕರಿಸಿದರೂ ದೇವರು ಅದನ್ನು ಆಯಲ್ಪಟ್ಟದ್ದೂ ಮಾನ್ಯವಾದದ್ದೂ ಎಂದು ಎಣಿಸಿದನು.


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ತಮ್ಮ ನಿಲುವಂಗಿಗಳನ್ನು ತೊಳಕೊಂಡವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಬಾಗಿಲುಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.


ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ತಾಯಿ ಹೆಂಡತಿ ಮಕ್ಕಳು ಅಣ್ಣತಮ್ಮಂದಿರು ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.


ಪ್ರಿಯರಾದ ಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವದಕ್ಕೆ ಯಾರಿಗೂ ಅವಕಾಶ ಕೊಡಬೇಡಿರಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.


ಆತನು ನೀತಿವಂತನಾಗಿದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ; ನಾನು ಅವುಗಳನ್ನು ಬಲ್ಲೆನು; ಅವು ನನ್ನ ಹಿಂದೆ ಬರುತ್ತವೆ.


ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ.


ತಂದೆಯು ನನಗೆ ಕೊಡುವಂಥವರೆಲ್ಲರು ನನ್ನ ಬಳಿಗೆ ಬರುವರು; ಮತ್ತು ನನ್ನ ಬಳಿಗೆ ಬರುವವನನ್ನು ನಾನು ತಳ್ಳಿಬಿಡುವದೇ ಇಲ್ಲ.


ಅವರಿಗೆ - ಜೀವಕೊಡುವ ರೊಟ್ಟಿ ನಾನೇ; ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವದಿಲ್ಲ, ನನ್ನನ್ನು ನಂಬುವವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ.


ಆದರೂ ಜೀವ ಹೊಂದುವದಕ್ಕಾಗಿ ನನ್ನ ಬಳಿಗೆ ಬರುವದಕ್ಕೆ ನಿಮಗೆ ಮನಸ್ಸಿಲ್ಲ.


ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದುಹೋಗುತ್ತಾರೆ; ಇವರೇ ಬಂಡೆಯ ನೆಲವಾಗಿರುವವರು.


ಇನ್ನು ಕೆಲವು ಬೀಜ ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ನೂರರಷ್ಟು ಫಲವನ್ನು ಕೊಟ್ಟವು. ಈ ಮಾತುಗಳನ್ನು ಹೇಳಿ ಆತನು - ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಎಂದು ಕೂಗಿದನು.


ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಅದಕ್ಕೆ ಯೆಹೂದ್ಯರು - ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು; ಅಬ್ರಹಾಮನು ಸತ್ತನು. ಪ್ರವಾದಿಗಳೂ ಸತ್ತರು; ಆದರೆ ನೀನು - ನನ್ನ ವಾಕ್ಯವನ್ನು ಕೈಕೊಂಡು ನಡೆಯುವವನು ಎಂದಿಗೂ ಸಾವನ್ನು ಅನುಭವಿಸುವದಿಲ್ಲವೆಂದು ಹೇಳುತ್ತೀ.


ಅವನು ಆಳವಾಗಿ ಅಗೆದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು; ಹೊಳೆಬಂದು ಪ್ರವಾಹವು ಆ ಮನೆಗೆ ಬಡಿದಾಗ್ಯೂ ಅದು ಚೆನ್ನಾಗಿ ಕಟ್ಟಿದ್ದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು