ಲೂಕ 6:49 - ಕನ್ನಡ ಸತ್ಯವೇದವು J.V. (BSI)49 ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ನೆಲದ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಬಡಿಯಿತು; ಬಡಿದ ಕೂಡಲೆ ಅದು ಕುಸಿದುಬಿದ್ದು ಪೂರಾ ಹಾಳಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದವನು ಅಸ್ತಿವಾರವೇ ಇಲ್ಲದೆ ಬರಿಯ ಮಣ್ಣಿನ ಮೇಲೆ ಮನೆ ಕಟ್ಟಿದವನಿಗೆ ಸಮಾನನು. ಆ ಮನೆಗೆ ಪ್ರವಾಹವು ಅಪ್ಪಳಿಸಿದಾಗ ಒಡನೆಯೇ ಅದು ಕುಸಿದು ಬಿತ್ತು. ಆ ಮನೆಗೆ ಒದಗಿದ ಪತನವೋ ವಿಪರೀತ!” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 “ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದುಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಆದರೆ ನನ್ನ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದೆ ಇರುವವರು, ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೆ ಕಟ್ಟಿದವರಿಗೆ ಹೋಲಿಕೆಯಾಗಿದ್ದಾರೆ. ಪ್ರವಾಹವು ಆ ಮನೆಗೆ ಅಪ್ಪಳಿಸಿದಾಗ, ಕೂಡಲೇ ಅದು ಕುಸಿದು ಬಿತ್ತು. ಹೀಗೆ ಆ ಮನೆಯು ಸರ್ವನಾಶವಾಯಿತು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ಖರೆ ಮಿಯಾ ಸಾಂಗಟಲ್ಲ್ಯಾ ಗೊಸ್ಟಿಯಾ ಆಯ್ಕುನ್ ತೆಚೆ ಸಾರ್ಕೆ ಚಲಿನಸಲ್ಲೊ ಪಾಯಾ ಭರಿನಸ್ತಾನಾ ಮಾಟಿ ವರ್‍ತಿ ಘರ್ ಭಾಂದ್ತಲ್ಯಾ ಮಾನ್ಸಾ ಬಾಸೆನ್,ನ್ಹಯ್ ಭರುನ್ ಪಾನಿ ಯೆತಾ ಅನಿ ತ್ಯಾ ಘರಾಕ್ ಮಾರ್‍ತಾ ಅನಿ ತೆ ಘರ್ ಕೊಸ್ಳುನ್ ಪಡುನ್ ಜಾತಾ ಅನಿ ಸಗ್ಳೆಚ್ ನಾಸ್ ಹೊವ್ನ್ ಜಾತಾ”. ಅಧ್ಯಾಯವನ್ನು ನೋಡಿ |