ಲೂಕ 6:8 - ಕನ್ನಡ ಸತ್ಯವೇದವು J.V. (BSI)8 ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ - ಎದ್ದು ನಡುವೆ ಬಂದು ನಿಂತುಕೋ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ, “ಎದ್ದು ನಡುವೆ ಬಂದು ನಿಂತುಕೋ” ಎಂದು ಹೇಳಿದನು. ಅವನು ಎದ್ದುಬಂದು ನಿಂತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈ ಉಳ್ಳವನಿಗೆ, “ಬಂದು ಇಲ್ಲಿ ನಿಲ್ಲು,” ಎಂದರು. ಅವನು ಎದ್ದುಬಂದು ನಿಂತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಅವರ ಆಲೋಚನೆಯು ಯೇಸುವಿಗೆ ತಿಳಿದಿತ್ತು. ಯೇಸುವು ಕೈಬತ್ತಿಹೋಗಿದ್ದ ಮನುಷ್ಯನಿಗೆ, “ಬಂದು ಇಲ್ಲಿ ನಿಂತುಕೊ” ಎಂದು ಹೇಳಿದನು. ಅವನು ಎದ್ದುಬಂದು ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈಬತ್ತಿದವನಿಗೆ, “ನೀನು ಎದ್ದು ಬಂದು ನಡುವೆ ನಿಂತುಕೋ,” ಎಂದಾಗ ಅವನು ಎದ್ದು ನಿಂತುಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಖರೆ ಜೆಜುಕ್ ತೆನಿ ಯವಜಲ್ಲೆ ಕಳ್ಳೆ, ಅನಿ ತೆನಿ ತ್ಯಾ ಮಾನ್ಸಾಕ್ “ಉಟ್, ಅನಿ ಹಿಕ್ಡಿ ಫಿಡೆ ಯೆ”, ಮಟ್ಲ್ಯಾನ್, ತೊ ಮಾನುಸ್ ಉಟ್ಲೊ, ಅನಿ ಫಿಡೆ ಯೆವ್ನ್ ಇಬೆ ರ್‍ಹಾಲೊ. ಅಧ್ಯಾಯವನ್ನು ನೋಡಿ |
ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.