ಲೂಕ 7:12 - ಕನ್ನಡ ಸತ್ಯವೇದವು J.V. (BSI)12 ಆತನು ಊರಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊರಗೆ ತರುತ್ತಿದ್ದರು. ಇವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ಗಂಡಸತ್ತವಳಾಗಿದ್ದಳು. ಆಕೆಯ ಸಂಗಡ ಗ್ರಾಮಸ್ಥರು ಅನೇಕರಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೇಸು ಊರಬಾಗಿಲಿನ ಬಳಿಗೆ ಬಂದಾಗ, ಸತ್ತುಹೋಗಿದ್ದ ಒಬ್ಬನನ್ನು ಸಮಾಧಿ ಮಾಡುವುದಕ್ಕಾಗಿ ಹೊತ್ತುಕೊಂಡು ಹೋಗುತ್ತಿದ್ದ ಜನರ ಗುಂಪನ್ನು ಕಂಡನು. ವಿಧವೆಯೊಬ್ಬಳ ಒಬ್ಬನೇ ಮಗನು ಸತ್ತುಹೋಗಿದ್ದನು. ಅವನ ಶವವನ್ನು ಹೊತ್ತುಕೊಂಡು ಹೋಗುತ್ತಿದ್ದಾಗ ಊರಿನ ಅನೇಕ ಜನರು ಆಕೆಯೊಡನೆ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೇಸು ಪಟ್ಟಣ ದ್ವಾರದ ಸಮೀಪಕ್ಕೆ ಬಂದಾಗ, ಸತ್ತು ಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೋಗುತ್ತಿದ್ದರು, ಅವನು ತನ್ನ ತಾಯಿಗೆ ಒಬ್ಬನೇ ಮಗನು, ಆಕೆಯು ವಿಧವೆಯಾಗಿದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಜೆಜು ತ್ಯಾ ಗಾಂವಾಂಚ್ಯಾ ಯೆಶಿತ್ ಪಾವಲ್ಲ್ಯಾ ತನ್ನಾ, ಲೊಕಾ ಎಕಾ ಮಾನ್ಸಾಕ್ ಮಾಟಿ ದಿವ್ಕ್ ಮನುನ್ ಗಾವಾತ್ನಾ ಭಾಯ್ರ್ ಯೆವ್‍ಲಾಗಲ್ಲಿ. ಮರಲ್ಲೊ ಮಾನುಸ್ ಎಕ್ ಘೊಮರಲ್ಲ್ಯಾ ಬಾಯ್ಕೊಮನ್ಸಿಚೊ ಎಕ್ಲೊಚ್ ಲೆಕ್, ಗಾವಾತ್ಲ್ಯಾ ಲೊಕಾಂಚೊ ಮೊಟೊ ತಾಂಡೊ ತಿಚ್ಯಾ ವಾಂಗ್ಡಾ ಹೊತ್ತೊ. ಅಧ್ಯಾಯವನ್ನು ನೋಡಿ |
ಆಕೆಯು ಅವನಿಗೆ - ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿಯಿರುವದಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಹೆಕ್ಕಿ ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ ಎಂದು ಉತ್ತರಕೊಟ್ಟಳು.
ಈಗ ನೋಡು, ಸಂಬಂಧಿಕರೆಲ್ಲಾ ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು - ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಣಿಂದ ಅಳಿಸಬೇಕೆಂದಿದ್ದಾರೆ ಎಂದು ಉತ್ತರಕೊಟ್ಟಳು.