Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:16 - ಕನ್ನಡ ಸತ್ಯವೇದವು J.V. (BSI)

16 ಎಲ್ಲರು ಭಯಹಿಡಿದವರಾಗಿ - ಮಹಾ ಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರಿಗೆ ದರ್ಶನವನ್ನು ಅನುಗ್ರಹಿಸಿದ್ದಾನೆ ಎಂದು ದೇವರನ್ನು ಕೊಂಡಾಡುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನರೆಲ್ಲರೂ ವಿಸ್ಮಯಪಟ್ಟರು. ಅವರು ದೇವರನ್ನು ಸ್ತುತಿಸುತ್ತಾ, “ಒಬ್ಬ ಮಹಾಪ್ರವಾದಿ ನಮ್ಮ ಬಳಿಗೆ ಬಂದಿದ್ದಾನೆ! ದೇವರು ತನ್ನ ಜನರಿಗೆ ಸಹಾಯ ಮಾಡಲು ಬಂದಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹೆ ಬಗುನ್ ಸಗ್ಳೆಜಾನ್ ಭಿಂವ್ನ್ ಗೆಲೆ ಅನಿ ತೆನಿ ದೆವಾಕ್ ಹೊಗ್ಳುನ್ಗೆತ್. “ಎಕ್ ಮೊಟೊ ಪ್ರವಾದಿ ಅಮ್ಚ್ಯಾ ಮದ್ದಿ ಯೆಲಾ! ದೆವ್ ಅಪ್ನಾಚ್ಯಾ ಲೊಕಾಕ್ನಿ ಹುರ್ವುನ್ ಘೆವ್ಕ್ ಮನುನ್ ಯೆಲಾ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:16
31 ತಿಳಿವುಗಳ ಹೋಲಿಕೆ  

ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - ಇವಳು ದುರಾಚಾರಿ; ಇವನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು.


ಜನರು ಇದನ್ನು ನೋಡಿ ಭಯಪಟ್ಟು ದೇವರು ಮನುಷ್ಯರಿಗೆ ಅಂಥ ಅಧಿಕಾರವನ್ನು ಕೊಟ್ಟದ್ದಕ್ಕೆ ಆತನನ್ನು ಕೊಂಡಾಡಿದರು.


ಇಸ್ರಾಯೇಲ್ ಜನರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ಆತನು ಪೂರ್ವದಲ್ಲಿದ್ದ ತನ್ನ ಶ್ರೀಪ್ರವಾದಿಗಳ ಬಾಯಿಂದ ತಾನು ಹೇಳಿದಂತೆಯೇ ತನ್ನ ಪ್ರಜೆಯನ್ನು ಪರಾಮರಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗೋಸ್ಕರ ಒಬ್ಬ ರಕ್ಷಣವೀರನನ್ನು ಎಬ್ಬಿಸಿದ್ದಾನೆ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.


ನೋಡಿದವರೆಲ್ಲರು ಬೆರಗಾಗಿ ದೇವರನ್ನು ಕೊಂಡಾಡಿದರು; ಮತ್ತು ಅವರು ಭಯದಿಂದ ತುಂಬಿದವರಾಗಿ - ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು ಅಂದರು.


ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗೋಸ್ಕರ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು.


ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು; ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತಾಡಿಕೊಳ್ಳುತ್ತಿದ್ದರು.


ಅದಕ್ಕೆ ಆ ಜನರ ಗುಂಪಿನವರು - ಈತನು ಆ ಪ್ರವಾದಿ, ಗಲಿಲಾಯದ ನಜರೇತಿನ ಯೇಸು ಅಂದರು.


ಮೂಕರಾಗಿದ್ದವರು ಮಾತಾಡಿದ್ದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ ಕುಂಟರಿಗೆ ಕಾಲುಬಂದದ್ದನ್ನೂ ಕುರುಡರಿಗೆ ಕಣ್ಣು ಬಂದದ್ದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ ಜನರ ದೇವರನ್ನು ಕೊಂಡಾಡಿದರು.


ನೀನು ನಮ್ಮ ದೇಶವನ್ನು ಕಟಾಕ್ಷಿಸಿ ಅದರ ಮೇಲೆ ಮಳೆಸುರಿಸಿ ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂವಿುಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ.


ಯೆಹೋವನು ತಮ್ಮನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತೆಗೆದುಕೊಂಡನೆಂಬದನ್ನು ಇಸ್ರಾಯೇಲ್ಯರು ಕೇಳಿದಾಗ ತಲೆಬಾಗಿ ನಮಸ್ಕರಿಸಿದರು.


ಸುದ್ದಿಯನ್ನು ಮಾತ್ರ ಅವರು ಕೇಳಿ ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.


ಈ ಮಾತುಗಳನ್ನು ಅನನೀಯನು ಕೇಳಿದ ಕೂಡಲೆ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಹಿಡಿಯಿತು.


ಹೀಗಿರಲಾಗಿ ಅವರು ತಿರಿಗಿ ಆ ಕುರುಡನನ್ನು - ಅವನು ನಿನಗೆ ಕಣ್ಣುಕೊಟ್ಟದ್ದರಿಂದ ನೀನು ಅವನ ವಿಷಯವಾಗಿ ಏನು ಹೇಳುತ್ತೀ ಎಂದು ಕೇಳಿದಾಗ ಅವನು - ಆತನು ಪ್ರವಾದಿ ಅನ್ನುತ್ತೇನೆ ಎಂದು ಹೇಳಿದನು.


ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ - ಲೋಕಕ್ಕೆ ಬರಬೇಕಾದ ಪ್ರವಾದಿ ಈತನೇ ನಿಜ ಎಂದು ಹೇಳಿಕೊಂಡರು.


ಆ ಹೆಂಗಸು ಆತನಿಗೆ - ಅಯ್ಯಾ, ನೀನು ಪ್ರವಾದಿಯೆಂದು ನನಗೆ ಕಾಣುತ್ತದೆ.


ನೀನು ಕ್ರಿಸ್ತನೂ ಎಲೀಯನೂ ಆ ಪ್ರವಾದಿಯೂ ಅಲ್ಲವಾದರೆ ಸ್ನಾನಮಾಡಿಸುವದೇನು? ಎಂದು ಅವನನ್ನು ಕೇಳಿದರು.


ಹಾಗಾದರೆ ನೀನು ಯಾರು? ಎಲೀಯನೋ? ಎಂದು ಅವರು ಕೇಳಲು ಅಲ್ಲವೆಂದನು. ನೀನು ಬರಬೇಕಾದ ಆ ಪ್ರವಾದಿಯೋ? ಅಂದದ್ದಕ್ಕೂ ಅಲ್ಲವೆಂದನು.


ಆತನು ಅವರನ್ನು - ಯಾವ ಸಂಗತಿಗಳು ಎಂದು ಕೇಳಿದನು. ಅದಕ್ಕೆ ಅವರು - ನಜರೇತಿನವನಾದ ಯೇಸುವಿನ ಸಂಗತಿಗಳೇ; ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಸಮರ್ಥನಾದ ಪ್ರವಾದಿಯಾಗಿದ್ದನು.


ಅವರು - ನಿನ್ನನ್ನು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾವನೋ ಒಬ್ಬನು ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.


ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯಹಿಡಿದದ್ದರಿಂದ ಅವರು ಯೇಸುವನ್ನು - ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು - ಸ್ವಾಮೀ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.


ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕೆ ಓಡಿಹೋದರು.


ಆ ಮೋಶೆಯೇ - ದೇವರು ನನ್ನನ್ನು ಏರ್ಪಡಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸಿಕೊಡುವನು ಎಂದು ಇಸ್ರಾಯೇಲ್ ಜನರಿಗೆ ಹೇಳಿದವನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು (ನಿಮಗೆ) ಏರ್ಪಡಿಸುವನು; ಅವನಿಗೇ ನೀವು ಕಿವಿಗೊಡಬೇಕು.


ಅನ್ನುತ್ತಲೇ ಸತ್ತಿದ್ದವನು ಎದ್ದು ಕೂತುಕೊಂಡು ಮಾತಾಡುವದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು