Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:17 - ಕನ್ನಡ ಸತ್ಯವೇದವು J.V. (BSI)

17 ಈ ವಾರ್ತೆಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಈ ಸುದ್ದಿಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೇಸುವಿನ ಕುರಿತಾದ ಈ ಸುದ್ದಿಯು ಜುದೇಯದಲ್ಲಿಯೂ ಅದರ ಸುತ್ತಮುತ್ತಲಿನ ಎಲ್ಲಾ ಸ್ಥಳಗಳಲ್ಲಿಯೂ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸುವಿನ ವಿಷಯವಾದ ಈ ಸುದ್ದಿಯು ಯೂದಾಯದ ಎಲ್ಲಾ ಪ್ರಾಂತಕ್ಕೂ, ಸುತ್ತಲಿನ ಎಲ್ಲಾ ಪ್ರಾಂತಕ್ಕೂ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹಿ ಜೆಜುಚಿ ಖಬರ್, ಅನಿ ಜುದೆಯಾ ಪ್ರಾಂತ್ಯಾತ್ ಅನಿ ಸಗ್ಳ್ಯಾ ದೆಸಾತ್ ಜಾವ್ನ್ ಪಾವ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:17
8 ತಿಳಿವುಗಳ ಹೋಲಿಕೆ  

ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ ಅಂದನು.


ಮತ್ತು ಅರಸನಾದ ಹೆರೋದನು [ಯೇಸುವಿನ ಸುದ್ದಿಯನ್ನು] ಕೇಳಿದನು. ಯಾಕಂದರೆ ಆತನ ಹೆಸರು ಪ್ರಸಿದ್ಧವಾಯಿತು, ಮತ್ತು ಜನರು ಆತನ ವಿಷಯದಲ್ಲಿ - ಸ್ನಾನಿಕನಾದ ಯೋಹಾನನೇ ತಿರಿಗಿ ಬದುಕಿಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಅವೆ ಎಂದು ಹೇಳುತ್ತಿದ್ದರು.


ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲಿ ಎಲ್ಲೆಲ್ಲಿಯೂ ಹಬ್ಬಿತು.


ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.


ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು -


ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ತಿರಿಗಿ ಗಲಿಲಾಯಕ್ಕೆ ಹೋದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹಬ್ಬಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು