ಲೂಕ 7:21 - ಕನ್ನಡ ಸತ್ಯವೇದವು J.V. (BSI)21 ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ ಉಪದ್ರವ ದೆವ್ವ ಇಂಥವುಗಳಿಂದ ಬಿಡಿಸಿ ವಾಸಿಮಾಡಿದನು; ಮತ್ತು ಅನೇಕ ಮಂದಿ ಕುರುಡರಿಗೆ ಕಣ್ಣನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದೇ ಗಳಿಗೆಯಲ್ಲಿ ಆತನು ಅನೇಕರನ್ನು ರೋಗ, ಕಾಯಿಲೆ, ದೆವ್ವ ಇಂಥವುಗಳಿಂದ ಪೀಡಿತರಾದವರನ್ನು ವಾಸಿಮಾಡಿದನು ಮತ್ತು ಅನೇಕ ಕುರುಡರಿಗೆ ಕಣ್ಣಿನ ದೃಷ್ಟಿ ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದೇ ಸಮಯದಲ್ಲಿ ಯೇಸು ರೋಗರುಜಿನಗಳಿಂದ ನರಳುತ್ತಿದ್ದ ಹಾಗೂ ದೆವ್ವ ಹಿಡಿದಿದ್ದ ಅನೇಕರನ್ನು ಗುಣಪಡಿಸುತ್ತಿದ್ದರು ಮತ್ತು ಹಲವುಮಂದಿ ಕುರುಡರಿಗೆ ದೃಷ್ಟಿಯನ್ನು ದಯಪಾಲಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅದೇ ಸಮಯದಲ್ಲಿ, ಯೇಸು ಅನೇಕ ಜನರನ್ನು ಅವರವರ ಕಾಯಿಲೆಗಳಿಂದ, ರೋಗಗಳಿಂದ ಗುಣಪಡಿಸಿದನು. ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು. ಅನೇಕ ಕುರುಡರಿಗೆ ದೃಷ್ಟಿಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದೇ ಸಮಯದಲ್ಲಿ ರೋಗಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಯೇಸು ಗುಣಪಡಿಸುತ್ತಿದ್ದರು, ಕುರುಡರಾದ ಅನೇಕರಿಗೆ ದೃಷ್ಟಿ ನೀಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತನ್ನಾಚ್ ಜೆಜುನ್ ಸುಮಾರ್ ಲೊಕಾಂಚಿ ದುಕ್ನಿ, ರೊಗಾ ಆರಾಮ್ ಕರ್‍ಲ್ಯಾನ್, ಅನಿ ಗಿರೆ ಸೊಡ್ವುಲ್ಯಾನ್,ಅನಿ ಸುಮಾರ್ ಕುಡ್ಡ್ಯಾಕ್ನಿ ಡೊಳೆ ದಿಸಿ ಸರ್ಕೆ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |