ಲೂಕ 7:37 - ಕನ್ನಡ ಸತ್ಯವೇದವು J.V. (BSI)37 ಆಗ ಆ ಊರಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಒರಗಿದ್ದಾನೆಂದು ಗೊತ್ತುಹಿಡುಕೊಂಡು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅದೇ ಊರಿನಲ್ಲಿ ಪತಿತೆಯೊಬ್ಬಳು ಇದ್ದಳು. ಆಕೆ, ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತಿದ್ದಾರೆಂದು ಕೇಳಿ ಒಂದು ಅಮೃತಶಿಲೆಯ ಭರಣಿ ತುಂಬ ಸುಗಂಧ ತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆ ಊರಿನಲ್ಲಿ ಪಾಪಿಷ್ಠಳಾದ ಒಬ್ಬ ಸ್ತ್ರೀ ಇದ್ದಳು. ಯೇಸುವು ಫರಿಸಾಯನ ಮನೆಯಲ್ಲಿ ಊಟಮಾಡುತ್ತಿದ್ದಾನೆಂದು ಆಕೆಗೆ ತಿಳಿಯಿತು. ಆದ್ದರಿಂದ ಆಕೆ ಭರಣಿಯಲ್ಲಿ ಸ್ವಲ್ಪ ಪರಿಮಳತೈಲವನ್ನು ತೆಗೆದುಕೊಂಡು ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತುಕೊಂಡಿದ್ದಾರೆಂದು ಒಬ್ಬ ಪಾಪಿ ಸ್ತ್ರೀಯು ತಿಳಿದು, ಸುಗಂಧ ತೈಲದ ಭರಣಿಯನ್ನು ತಂದು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತ್ಯಾ ಶಾರಾತ್ ಪಾಪಾಚೆ ಜಿವನ್ ಕರ್‍ತಲಿ ಎಕ್ ಬಾಯ್ಕೊಮನುಸ್ ಹೊತ್ತಿ. ಜೆಜು ಫಾರಿಜೆವಾಚ್ಯಾ ಘರಾತ್ ಜೆವ್ನಾಕ್ ಬಸ್ಲಾ ಮನುನ್ ಆಯಿಕ್ಲಿನ್, ತಸೆ ಮನುನ್ ಎಕ್ ಭರ್‍ನಿಬರ್ ಬರಿ ವಾಸ್ ಎತಲೆ ತೆಲ್ ಘೆವ್ನ್ ಯೆಲಿ. ಅಧ್ಯಾಯವನ್ನು ನೋಡಿ |
ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು; ಅಂದರೆ ಅದು ಅಧರ್ಮಿಗಳು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ದೇವಭಕ್ತಿಯಿಲ್ಲದವರು, ಪ್ರಾಪಂಚಿಕರು, ತಂದೆತಾಯಿಗಳನ್ನು ಹೊಡೆಯುವವರು, ನರಹತ್ಯಮಾಡುವವರು, ಜಾರರು, ಪುರುಷಗಾವಿುಗಳು, ನರಚೋರರು, ಸುಳ್ಳುಗಾರರು, ಅಬದ್ಧಪ್ರಮಾಣಿಕರು, ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆಯೇ ಹೊರತು ನೀತಿವಂತರಿಗೆ ನೇಮಕವಾಗಿಲ್ಲವೆಂದು ತಿಳಿದು ಉಪಯೋಗಿಸಬೇಕು.