Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:39 - ಕನ್ನಡ ಸತ್ಯವೇದವು J.V. (BSI)

39 ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - ಇವಳು ದುರಾಚಾರಿ; ಇವನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಯೇಸುವನ್ನು ತನ್ನ ಮನೆಗೆ ಊಟಕ್ಕೆ ಕರೆದಿದ್ದ ಫರಿಸಾಯನು ಇದನ್ನು ಕಂಡು ತನ್ನೊಳಗೆ, “ಯೇಸು ಪ್ರವಾದಿಯೇ ಆಗಿದ್ದರೆ, ತನ್ನನ್ನು ಮುಟ್ಟುತ್ತಿರುವ ಸ್ತ್ರೀಯು ಪಾಪಿಷ್ಠಳೆಂದು ತಿಳಿದುಕೊಳ್ಳುತ್ತಿದ್ದನು” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಗ ಯೇಸುವನ್ನು ಆಮಂತ್ರಿಸಿದ ಫರಿಸಾಯನು, ಅದನ್ನು ಕಂಡು ತನ್ನೊಳಗೆ, “ಈ ಮನುಷ್ಯ ಒಬ್ಬ ಪ್ರವಾದಿಯಾಗಿದ್ದರೆ, ತನ್ನನ್ನು ಮುಟ್ಟುತ್ತಿದ್ದವಳು ಯಾರು, ಎಂಥಾ ಹೆಂಗಸು ಎಂದು ತಿಳಿದುಕೊಳ್ಳುತ್ತಿದ್ದನು. ಅವಳು ಒಬ್ಬ ಪಾಪಿ,” ಎಂದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತ್ಯಾ ಫಾರಿಜೆವಾನ್ ಹೆ ಬಗುನ್, ಅಪ್ಲ್ಯಾ ಅಪ್ನಿಚ್ “ಹ್ಯೊ ಮಾನುಸ್ ಖರೆಚ್ ಪ್ರವಾದಿ ಹೊಲ್ಯಾರ್,ತೆಕಾ ಅಪಡಲ್ಲಿ ಬಾಯ್ಕೊಮನುಸ್ ಕೊನ್; ಅನಿ ಹಿ ಬಾಯ್ಕೊಮನುಸ್ ಕಸ್ಲೆ ಪಾಪಾಚೆ ಜಿವನ್ ಕರ್‍ತಾ ಮನುನ್, ಹೆಕಾ ಕಳ್ತಲೆ ಹೊತ್ತೆ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:39
25 ತಿಳಿವುಗಳ ಹೋಲಿಕೆ  

ಎಲ್ಲರು ಭಯಹಿಡಿದವರಾಗಿ - ಮಹಾ ಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರಿಗೆ ದರ್ಶನವನ್ನು ಅನುಗ್ರಹಿಸಿದ್ದಾನೆ ಎಂದು ದೇವರನ್ನು ಕೊಂಡಾಡುವವರಾದರು.


ಆತನ ಬಳಿಗೆ ಬರುತ್ತಾ ಇರಲು ಫರಿಸಾಯರೂ ಶಾಸ್ತ್ರಿಗಳೂ - ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ ಎಂದು ಹೇಳಿಕೊಂಡು ಗುಣುಗುಟ್ಟುತ್ತಿದ್ದರು.


ಒಳಗಿನಿಂದ ಅಂದರೆ ಮನುಷ್ಯರ ಮನಸ್ಸಿನೊಳಗಿಂದ


ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ ಎನ್ನುತ್ತಾ ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.


ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು - ನೀನು ದೇವರಿಗೆ ಮಾನಬರುವಂತೆ ಹೇಳು; ಆ ಮನುಷ್ಯನು ಭಕ್ತಿಹೀನನೆಂದು ನಾವು ಬಲ್ಲೆವು ಎಂದು ಹೇಳಲು


ಮತ್ತು ಜನರ ಗುಂಪುಗಳಲ್ಲಿ ಆತನ ವಿಷಯವಾಗಿ ಬಹಳ ಗುಜುಗುಜು ಮಾತು ನಡೆಯುತ್ತಿತ್ತು. ಕೆಲವರು - ಆತನು ಒಳ್ಳೆಯವನು ಅಂದರು; ಇನ್ನು ಕೆಲವರು - ಅಲ್ಲ, ಜನರನ್ನು ತಪ್ಪಾದ ಮಾರ್ಗಕ್ಕೆ ಎಳೆಯುತ್ತಾನೆ ಅಂದರು.


ಆ ಹೆಂಗಸು ಆತನಿಗೆ - ಅಯ್ಯಾ, ನೀನು ಪ್ರವಾದಿಯೆಂದು ನನಗೆ ಕಾಣುತ್ತದೆ.


ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು - ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯಮಾಡುವವನಲ್ಲ;


ಹೀಗಿರಲಾಗಿ ಆ ಮನೆವಾರ್ತೆಯವನು - ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಮನೆವಾರ್ತೆಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ; ಭಿಕ್ಷಾ ಬೇಡುವದಕ್ಕೆ ನನಗೆ ನಾಚಿಕೆಯಾಗುತ್ತದೆ.


ಆಗ ಆ ಊರಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಒರಗಿದ್ದಾನೆಂದು ಗೊತ್ತುಹಿಡುಕೊಂಡು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು


ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲಗಳಿಂದ ತೋರಿಸಿರಿ. ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂದು ನಿಮ್ಮೊಳಗೆ ಅಂದುಕೊಳ್ಳುವವರಾಗಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ; ಉಣ್ಣು, ಕುಡಿ, ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.


ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೇವರ ಮನುಷ್ಯನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲಿ - ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ; ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು ಅಂದುಕೊಂಡು ಹೊರಟನು.


ಆಗ ಅವನು ತನ್ನೊಳಗೆ - ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲವಲ್ಲಾ ಎಂದು ಆಲೋಚಿಸಿ - ಒಂದು ಕೆಲಸ ಮಾಡುತ್ತೇನೆ;


ಈ ಪ್ರಕಾರ ಕಡೆಯವರು ಮೊದಲಿನವರಾಗುವರು, ಮೊದಲಿನವರು ಕಡೆಯವರಾಗುವರು ಎಂದು ಹೇಳಿದನು.


ಅದಕ್ಕೆ ಆ ಜನರ ಗುಂಪಿನವರು - ಈತನು ಆ ಪ್ರವಾದಿ, ಗಲಿಲಾಯದ ನಜರೇತಿನ ಯೇಸು ಅಂದರು.


ಹಿಂದೆ ಆತನ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ತ್ಯಾವಮಾಡಿ ತನ್ನ ತಲೇಕೂದಲಿನಿಂದ ಒರಸಿ ಅವುಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.


ಅದಕ್ಕೆ ಯೇಸು - ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ ಅಂದಾಗ ಅವನು - ಬೋಧಕನೇ, ಹೇಳು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು