Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:40 - ಕನ್ನಡ ಸತ್ಯವೇದವು J.V. (BSI)

40 ಅದಕ್ಕೆ ಯೇಸು - ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ ಅಂದಾಗ ಅವನು - ಬೋಧಕನೇ, ಹೇಳು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅದಕ್ಕೆ ಯೇಸು, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ಮಾತದೆ” ಅಂದಾಗ ಸೀಮೋನನು, “ಬೋಧಕನೇ, ಹೇಳು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಅದಕ್ಕೆ ಯೇಸು, “ಸಿಮೋನ್, ನಾನು ನಿನಗೆ ಹೇಳಬೇಕಾದ ವಿಷಯ ಒಂದಿದೆ,” ಎಂದರು. ಸಿಮೋನನು, “ಅದೇನು ಹೇಳಿ ಗುರುವೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಅದಕ್ಕೆ ಯೇಸು ಫರಿಸಾಯನಿಗೆ, “ಸಿಮೋನನೇ, ನಾನು ನಿನಗೆ ಒಂದು ವಿಷಯವನ್ನು ಹೇಳಬೇಕಾಗಿದೆ” ಎಂದನು. ಸಿಮೋನನು, “ಗುರುವೇ, ಹೇಳು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆಗ ಯೇಸು ಅವನಿಗೆ, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ವಿಷಯವಿದೆ,” ಎಂದರು. ಸೀಮೋನನು ಯೇಸುವಿಗೆ, “ಗುರುವೇ, ಹೇಳಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಜೆಜುನ್ ತೆಕಾ “ಸಿಮಾವ್, ಮಿಯಾ ತುಕಾ ಕಾಯ್ಕಿ ಸಾಂಗುಕ್ ಪಾಜೆ” ಮಟ್ಲ್ಯಾನ್. ತನ್ನಾ ತೆನಿ “ಸಾಂಗ್ ಧನಿಯಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:40
16 ತಿಳಿವುಗಳ ಹೋಲಿಕೆ  

ನೀನು ಸಮಸ್ತವನ್ನು ತಿಳಿದವನೆಂದೂ ನಿನಗೆ ಪ್ರಶ್ನೆಮಾಡಬೇಕಾದ ಅವಶ್ಯವಿಲ್ಲವೆಂದೂ ಈಗ ತಿಳಿಯಿತು; ಇದರಿಂದ ನಿನ್ನನ್ನು ದೇವರ ಬಳಿಯಿಂದ ಬಂದವನೆಂದು ನಂಬುತ್ತೇವೆ ಅಂದದ್ದಕ್ಕೆ


ಯೇಸು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ - ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ, ಇನ್ನು ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರಾ?


ನೀವು ನನ್ನನ್ನು ಗುರುವೆಂದೂ ಕರ್ತನೆಂದೂ ಕರೆಯುತ್ತೀರಿ; ನೀವು ಕರೆಯುವದು ಸರಿ; ನಾನು ಅಂಥವನೇ ಹೌದು.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು.


ಒಬ್ಬ ಅಧಿಕಾರಿಯು ಬಂದು - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಲಾಗಿ


ಆದರೆ ಆತನು ಅವರ ಯೋಚನೆಗಳನ್ನು ತಿಳಿದು ಕೈ ಬತ್ತಿಹೋಗಿದ್ದ ಆ ಮನುಷ್ಯನಿಗೆ - ಎದ್ದು ನಡುವೆ ಬಂದು ನಿಂತುಕೋ ಎಂದು ಹೇಳಿದನು.


ಅದಕ್ಕೆ ಯೇಸು - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು;


ಆದರೆ ಅವರು ಹಾಗಂದುಕೊಳ್ಳುವದನ್ನು ಯೇಸು ತಿಳಿದುಕೊಂಡು ಅವರಿಗೆ - ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವದೇನು? ಯಾವದು ಸುಲಭ?


ಸ್ವಾಮೀ, ಸ್ವಾಮೀ, ನಿನ್ನ ಹೆಸರಿನ ಮೇಲೆ ನಾವು ಬೋಧನೆ ಹೇಳಲಿಲ್ಲವೇ? ನಿನ್ನ ಹೆಸರಿನ ಮೇಲೆ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನ ಮೇಲೆ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಆ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ಕೂಡಲೆ ಅವನು ಯೇಸುವಿನ ಬಳಿಗೆ ಹೋಗಿ - ಗುರುವೇ, ನಮಸ್ಕಾರ ಎಂದು ಹೇಳಿ ಆತನಿಗೆ ಮುದ್ದಿಟ್ಟನು.


ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಮಾನಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿತೋರಿಸುತ್ತಾನಷ್ಟೆ; ನಾನು ತಂದೆಯಾಗಿರಲು ನನಗೆ ಸಲ್ಲುವ ಮಾನವೆಲ್ಲಿ; ಧಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ ಎಂದು ಸೇನಾಧೀಶ್ವರ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು - ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ ಅನ್ನುತ್ತೀರಿ.


ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - ಇವಳು ದುರಾಚಾರಿ; ಇವನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು.


ಆಗ ಯೇಸು - ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐನೂರು ಹಣ ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಹಣ ಕೊಡಬೇಕಾಗಿತ್ತು.


ಆಮೇಲೆ ಅವನು - ನಿನಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ ಅನ್ನಲು ಆಕೆಯು - ಹೇಳು ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು