Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:50 - ಕನ್ನಡ ಸತ್ಯವೇದವು J.V. (BSI)

50 ಆದರೆ ಆತನು ಆ ಹೆಂಗಸಿಗೆ - ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿ ಅದೆ; ಸಮಾಧಾನದಿಂದ ಹೋಗು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆದರೆ ಆತನು ಆ ಹೆಂಗಸಿಗೆ, “ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ಯೇಸು ಆಕೆಗೆ, “ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯಿಂದಲೇ ನಿನಗೆ ರಕ್ಷಣೆ ಆಯಿತು. ಸಮಾಧಾನದಿಂದ ಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

50 ಖರೆ ಜೆಜುನ್ ತ್ಯಾ ಬಾಯ್ಕೊಮಾನ್ಸಿಕ್ “ತುಜ್ಯಾ ವಿಶ್ವಾಸಾನ್ ತುಕಾ ಬಚಾವ್ ಕರ್‍ಲ್ಯಾನ್; ಸಮಾದಾನಾನ್ ಜಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:50
15 ತಿಳಿವುಗಳ ಹೋಲಿಕೆ  

ಆತನು ಆಕೆಗೆ - ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನನ್ನು ಕಾಡಿದ ರೋಗವು ಹೋಗಿ ನಿನಗೆ ಗುಣವಾಗಲಿ ಎಂದು ಹೇಳಿದನು.


ಆತನು ಆಕೆಗೆ - ಮಗಳೇ ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು ಎಂದು ಹೇಳಿದನು.


ಯೇಸು ಅವನಿಗೆ - ನಿನಗೆ ಕಣ್ಣು ಬರಲಿ; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು.


ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ - ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥವಾದಳು.


ಯೇಸು ಅವನಿಗೆ - ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿ ಅದೆ ಎಂದು ಹೇಳಿದನು; ಕೂಡಲೇ ಅವನಿಗೆ ಕಣ್ಣು ಬಂದವು; ಅವನು ಆ ದಾರಿಯಲ್ಲಿ ಆತನ ಹಿಂದೆ ಹೋದನು.


ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು.


ಆದದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ; ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವದು ಅಂದನು.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು; ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ; ದೇವರು ನಿನ್ನ ನಡತೆಗೆ ಈಗ ಮೆಚ್ಚಿದನಷ್ಟೆ.


ಆಗ ಏಲಿಯು ಆಕೆಗೆ - ಸಮಾಧಾನದಿಂದ ಹೋಗು; ಇಸ್ರಾಯೇಲ್ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ ಎನ್ನಲು ಹನ್ನಳು ಏಲಿಗೆ -


ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ಹಿಂತಿರುಗಿ ನೋಡಿ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.


ಎದ್ದು ಹೋಗು. ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು