Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:6 - ಕನ್ನಡ ಸತ್ಯವೇದವು J.V. (BSI)

6 ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ - ಪ್ರಭುವೇ, ತೊಂದರೆ ತೆಗೆದುಕೊಳ್ಳಬೇಡ; ನೀನು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನ್ನಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯೇಸು ಅವರ ಸಂಗಡವೇ ಹೊರಟರು. ಮನೆಯಿಂದ ಸ್ವಲ್ಪ ದೂರವಿರುವಾಗಲೇ, ಶತಾಧಿಪತಿ ತನ್ನ ಗೆಳೆಯರ ಮುಖಾಂತರ, “ಪ್ರಭುವೇ, ಇಷ್ಟು ಶ್ರಮ ತೆಗೆದುಕೊಳ್ಳಬೇಡಿ; ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಯೇಸು ಅವರ ಜೊತೆ ಹೊರಟನು. ಯೇಸು ಮನೆಯ ಹತ್ತಿರ ಬರುತ್ತಿರುವಾಗ, ಆ ಅಧಿಕಾರಿಯು ಸ್ನೇಹಿತರನ್ನು, “ಪ್ರಭುವೇ, ನೀನು ನನ್ನ ಮನೆಗೆ ಬರುವಷ್ಟು ನಾನು ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೇಸು ಅವರೊಂದಿಗೆ ಹೋದರು. ಅವರು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗಲೇ ಶತಾಧಿಪತಿಯು ಸ್ನೇಹಿತರನ್ನು ಯೇಸುವಿನ ಬಳಿಗೆ ಕಳುಹಿಸಿ, “ಕರ್ತದೇವರೇ, ನಿಮ್ಮನ್ನು ತೊಂದರೆ ಪಡಿಸಿಕೊಳ್ಳಬೇಡಿರಿ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ಜೆಜು ತೆಂಚ್ಯಾ ವಾಂಗ್ಡಾ ಗೆಲೊ. ಜೆಜು ಘರಾಕ್ನಾ ಉಲ್ಲೆ ಧುರುಚ್ ರಾತಾನಾ, ತ್ಯಾ ಶತಪತಿನ್ ಅಪ್ನಾಚ್ಯಾ ಲೊಕಾನಿಕ್ನಾ “ಗುರುಜಿ, ತಿಯಾ ಮಾಜ್ಯಾ ಘರಾಕ್ ಯೆತಲೊ ತರಾಸ್ ಕರುನ್ ಘೆವ್‍ನಕ್ಕೊ, ತಿಯಾ ಮಾಜ್ಯಾ ಘರಾಕ್ ಯೆಯ್ ಸರ್ಕಿ ಯೊಗ್ಯತಾ ಮಾಕಾ ನಾ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:6
15 ತಿಳಿವುಗಳ ಹೋಲಿಕೆ  

ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ಆತನು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕಿಕೊಂಡು ಹಿಂದೆ ಹೋದರು.


ಆತನು ಇನ್ನೂ ಮಾತಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು - ನಿನ್ನ ಮಗಳು ಸತ್ತಳು; ಗುರುವಿಗೆ ತೊಂದರೆ ಕೊಡಬೇಡ ಅಂದನು.


ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆ ತರುವನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು - ಸ್ವಾಮೀ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವದಕ್ಕೆ ಬರಲಿಲ್ಲ, ಸೇವೆಮಾಡುವದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.


ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವದು; ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ಅವರು ಯೇಸುವಿನ ಬಳಿಗೆ ಬಂದು - ನಿನ್ನಿಂದ ಇಂಥ ಉಪಕಾರ ಹೊಂದುವದಕ್ಕೆ ಅವನು ಯೋಗ್ಯನು;


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಪಾತ್ರನಾಗಿದ್ದೇನೆ. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಪಾಳೆಯಗಳಿಗೆ ಒಡೆಯನಾಗಿದ್ದೇನೆ.


ಅವನು ನಮ್ಮ ಜನರನ್ನು ಪ್ರೀತಿಸುವವನು, ತಾನೇ ನಮ್ಮ ಸಭಾಮಂದಿರವನ್ನು ನಮಗಾಗಿ ಕಟ್ಟಿಸಿದನು ಎಂದು ಆತನನ್ನು ಬಹಳವಾಗಿ ಬೇಡಿಕೊಳ್ಳಲು


ಈ ಕಾರಣದಿಂದ ನಾನು ನನ್ನನ್ನು ನಿನ್ನ ಬಳಿಗೆ ಬರುವದಕ್ಕೆ ತಕ್ಕವನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀನು ಒಂದು ಮಾತು ಹೇಳು, ನನ್ನ ಆಳಿಗೆ ಗುಣವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು