Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:7 - ಕನ್ನಡ ಸತ್ಯವೇದವು J.V. (BSI)

7 ಈ ಕಾರಣದಿಂದ ನಾನು ನನ್ನನ್ನು ನಿನ್ನ ಬಳಿಗೆ ಬರುವದಕ್ಕೆ ತಕ್ಕವನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀನು ಒಂದು ಮಾತು ಹೇಳು, ನನ್ನ ಆಳಿಗೆ ಗುಣವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈ ಕಾರಣದಿಂದ ನಾನು ನಿಮ್ಮ ಬಳಿಗೆ ಬರುವುದಕ್ಕೆ ನನ್ನನ್ನೇ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನೇ ತಮ್ಮಲ್ಲಿಗೆ ಬರೋಣವೆಂದರೆ ಆ ಯೋಗ್ಯತೆಯೂ ನನಗಿಲ್ಲ. ತಾವು ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನ್ನ ಬಳಿಗೆ ಬರುವುದಕ್ಕೂ ನನಗೆ ಯೋಗ್ಯತೆ ಇಲ್ಲ. ನೀನು ಕೇವಲ ಒಂದು ಆಜ್ಞೆ ಕೊಟ್ಟರೆ ಸಾಕು, ನನ್ನ ಆಳು ಗುಣಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ನಿಮ್ಮ ಬಳಿಗೆ ಬರುವುದಕ್ಕೆ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅನಿ ಮಾಕಾ,ತುಜ್ಯಾ ಇದ್ರಾಕ್ ಯೆಯ್ ಸಾರ್ಕಿ ಕಿಮ್ಮತ್‍ಬಿ ನಾ, ತಿಯಾ ಥೈತ್ನಾಚ್ ಎಕ್ ಗೊಸ್ಟ್ ಸಾಂಗ್ಲ್ಯಾರ್ ಫಿರೆ, ತೊ ಆರಾಮ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:7
10 ತಿಳಿವುಗಳ ಹೋಲಿಕೆ  

ಆತನು [ದೂತನನ್ನೋ ಎಂಬಂತೆ] ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.


ಅದಕ್ಕೆ ಎಲ್ಲರು ಬೆರಗಾಗಿ - ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ ಬಲದಿಂದಲೂ ದೆವ್ವಗಳಿಗೆ ಅಪ್ಪಣೆ ಕೊಡುತ್ತಾನೆ, ಅವು ಬಿಟ್ಟುಹೋಗುತ್ತವೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಅದಕ್ಕೆ ಎಲ್ಲರು ಬೆರಗಾಗಿ - ಇದೇನಿರಬಹುದು? ಇದು ಹೊಸ ಉಪದೇಶ. ಈತನು ಅಧಿಕಾರದಿಂದ ದೆವ್ವಗಳಿಗೂ ಅಪ್ಪಣೆಕೊಡುತ್ತಾನೆ; ಅವು ಆತನ ಮಾತನ್ನು ಕೇಳುತ್ತವೆ ಎಂದು ತಮ್ಮ ತಮ್ಮೊಳಗೆ ವಿಚಾರಮಾಡಿಕೊಂಡರು.


ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧನಾಗು ಅಂದನು. ಕೂಡಲೆ ಅವನ ಕುಷ್ಠವು ಹೋಯಿತು.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ವಿನಾ ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸ ಶಕ್ತನು ಯಾವನೂ ಇಲ್ಲ.


ಯೆಹೋವನೇ ಸಾಯಿಸುವವನೂ ಬದುಕಿಸುವವನೂ; ಪಾತಾಳದಲ್ಲಿ ದೊಬ್ಬುವವನೂ ಮೇಲಕ್ಕೆ ಬರಮಾಡುವವನೂ ಆತನೇ.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.


ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ - ಪ್ರಭುವೇ, ತೊಂದರೆ ತೆಗೆದುಕೊಳ್ಳಬೇಡ; ನೀನು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನ್ನಲ್ಲಿಲ್ಲ.


ನಾನು ಸಹ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಬರುತ್ತಾನೆ; ನನ್ನ ಆಳಿಗೆ ಇಂಥಿಂಥದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಎಂಬದಾಗಿ ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು