ಲೂಕ 8:13 - ಕನ್ನಡ ಸತ್ಯವೇದವು J.V. (BSI)13 ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದುಹೋಗುತ್ತಾರೆ; ಇವರೇ ಬಂಡೆಯ ನೆಲವಾಗಿರುವವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಂಡೆಯ ಮೇಲೆ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯ ಕೇಳಿ ಸಂತೋಷದಿಂದ ಸ್ವೀಕರಿಸಿಕೊಳ್ಳುತ್ತಾರೆ. ಆದರೆ ಅವರಿಗೆ ಆಳವಾದ ಬೇರುಗಳಿರುವುದಿಲ್ಲ. ಅವರು ಸ್ವಲ್ಪಕಾಲ ಮಾತ್ರವೇ ನಂಬುತ್ತಾರೆ. ಬಳಿಕ ತೊಂದರೆಯೇನಾದರೂ ಬಂದರೆ ತಮ್ಮ ನಂಬಿಕೆಯನ್ನು ಕಳೆದುಕೊಂಡು ದೇವರಿಂದ ದೂರ ಸರಿಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಗುಂಡಾಡ್ ಜಮ್ನಿ ವರ್‍ತಿ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್, ಅನಿ ಕುಶಿನ್ ಅಪ್ನಾಚ್ಯಾ ಮನಾತ್ ಥವ್ನ್ ಘೆತ್ಯಾತ್, ಖರೆ ತ್ಯಾ ಗೊಸ್ಟಿಯಾ ತೆಂಚ್ಯಾ ಮನಾತ್ ಎಗ್ದಮ್ ಭುತ್ತುರ್ ಗೆಲ್ಲ್ಯಾ ರಾಯ್ನ್ಯಾತ್. ತೆನಿ ವಿಶ್ವಾಸ್ ಕರ್‍ತ್ಯಾತ್ ಹೊಯ್ ಖರೆ ಕಾಯ್,ತರ್ ಕಸ್ಟ್ ಯೆಲೊ ಮಟ್ಲ್ಯಾರ್ ತೆನಿ ತ್ಯಾ ದೆವಾಚ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್. ಅಧ್ಯಾಯವನ್ನು ನೋಡಿ |