ಲೂಕ 8:24 - ಕನ್ನಡ ಸತ್ಯವೇದವು J.V. (BSI)24 ಹೀಗಿರಲಾಗಿ ಅವರು ಆತನ ಹತ್ತಿರ ಬಂದು - ಗುರುವೇ, ಗುರುವೇ, ಸಾಯುತ್ತೇವೆ ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಉಬ್ಬುವ ನೀರನ್ನೂ ಗದರಿಸಿದನು. ಗದರಿಸಲು ಅವು ನಿಂತವು, ಶಾಂತವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಹೀಗಿರಲಾಗಿ ಅವರು ಆತನ ಹತ್ತಿರ ಬಂದು, “ಗುರುವೇ, ಗುರುವೇ, ನಾವು ಸಾಯುತ್ತಿದ್ದೇವೆ” ಎಂದು ಹೇಳಿ ಆತನನ್ನು ಎಬ್ಬಿಸಿದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರಿನ ಅಲೆಗಳನ್ನೂ ಗದರಿಸಿದನು. ಆಗ ಅವು ನಿಂತು, ಶಾಂತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಶಿಷ್ಯರು ಬಂದು ಯೇಸುವನ್ನು ಎಬ್ಬಿಸಿ, “ಸ್ವಾಮೀ, ಸ್ವಾಮೀ, ನಾವು ಸಾಯುತ್ತಿದ್ದೇವೆ,” ಎಂದರು. ಯೇಸು ಎಚ್ಚೆತ್ತು ಬಿರುಗಾಳಿಯನ್ನೂ ಭೋರ್ಗರೆಯುತ್ತಿದ್ದ ಅಲೆಗಳನ್ನೂ ಗದರಿಸಿದರು. ಅವು ಸ್ತಬ್ಧವಾದವು. ವಾತಾವರಣ ಶಾಂತವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಗ ಶಿಷ್ಯರು ಯೇಸುವಿನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಗುರುವೇ! ಗುರುವೇ! ನಾವು ಮುಳುಗಿಹೋಗುತ್ತಿದ್ದೇವೆ!” ಎಂದು ಹೇಳಿದರು. ಕೂಡಲೇ ಯೇಸು ಎದ್ದು, ಆ ಗಾಳಿಗೂ ತೆರೆಗಳಿಗೂ ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತಿತು ಮತ್ತು ಸರೋವರ ಶಾಂತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, “ಗುರುವೇ, ಗುರುವೇ, ನಾವು ಮುಳುಗುತ್ತಿದ್ದೇವೆ!” ಎಂದರು. ಆಗ ಯೇಸು ಎದ್ದು ಬಿರುಗಾಳಿಯನ್ನೂ ರಭಸವಾಗಿ ಬರುತ್ತಿದ್ದ ಅಲೆಗಳನ್ನೂ ಗದರಿಸಿದರು; ಆಗ ಬಿರುಗಾಳಿಯು ನಿಂತು ಹೋಗಿ, ಎಲ್ಲಾ ಪ್ರಶಾಂತವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತನ್ನಾ ಶಿಸಾ ಜೆಜುಕ್ ಗೆಲಿ ಅನಿ ತೆಕಾ ಉಟ್ವುನ್ “ಗುರುಜಿ, ಗುರುಜಿ, ಅಮಿ ಬುಡುನ್ ಮರ್‍ತಾಂವ್?” ಮನುಲಾಲೆ. ತನ್ನಾ ಜೆಜು ಉಟ್ಲೊ, ಅನಿ ವಾರ್ಯಾಕ್, ಅನಿ ಲ್ಹಾಟಾಕ್ನಿ ತೆನಿ ಹುಕುಮ್ ದಿಲ್ಯಾನ್. ತನ್ನಾ ವಾರೊ ಅನಿ ಲ್ಹಾಟಾ ಗಪ್ ರ್‍ಹಾಲಿ, ಅನಿ ಸಗ್ಳೆ ಎಗ್ದಮ್ ಶಾಂತ್ ಹೊಲೆ. ಅಧ್ಯಾಯವನ್ನು ನೋಡಿ |