Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:38 - ಕನ್ನಡ ಸತ್ಯವೇದವು J.V. (BSI)

38 ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು. ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು - ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಪಿಶಾಚಿಗಳಿಂದ ಬಿಡುಗಡೆ ಆಗಿದ್ದ ಆ ವ್ಯಕ್ತಿಯಾದರೋ, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ದೆವ್ವಗಳಿಂದ ಬಿಡುಗಡೆಯಾಗಿದ್ದವನು, “ನನ್ನನ್ನು ನಿನ್ನ ಜೊತೆಯಲ್ಲೇ ಕರೆದುಕೊಂಡು ಹೋಗು,” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ತಾನೂ ಅವರ ಜೊತೆಯಲ್ಲಿ ಬರುವೆನೆಂದು, ಯೇಸುವನ್ನು ಬೇಡಿಕೊಂಡನು, ಆದರೆ ಯೇಸು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಅಪ್ನಾತ್ನಾ ಗಿರೆ ಗೆಲ್ಲೊ ಮಾನುಸ್ ಯೆಲೊ, ಅನಿ “ಮಿಯಾಬಿ ತುಜ್ಯಾ ವಾಂಗ್ಡಾ ಯೆತಾ” ಮನುನ್ ಜೆಜುಕ್ಡೆ ಮಾಗುಲಾಲೊ. ಜೆಜುನ್ ತೆಕಾ ಪರ್ತುನ್ ಧಾಡ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:38
24 ತಿಳಿವುಗಳ ಹೋಲಿಕೆ  

ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;


ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯಹಿಡಿದದ್ದರಿಂದ ಅವರು ಯೇಸುವನ್ನು - ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಬಿದ್ದು ಮಹಾಶಬ್ದದಿಂದ - ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂತ ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.


ಯೆಹೋವನೇ, ಕರುಣಿಸು, ನಾನು ನಿನ್ನ ಕಿಂಕರನು; ನಿನ್ನ ದಾಸಿಯ ಮಗನೂ ನಿನ್ನ ಸೇವಕನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದೀ.


ಯೆಹೋವನ ಮಹೋಪಕಾರಗಳಿಗೆ ಬದಲೇನು ಮಾಡಲಿ?


ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ.


ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಆತನು - ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಿ ದೇವರು ನಿನಗೆ ಎಂಥೆಂಥ ಉಪಕಾರಗಳನ್ನು ಮಾಡಿದನೋ ಅದನ್ನೆಲ್ಲಾ ವಿವರವಾಗಿ ಹೇಳು ಎಂದು ಅವನನ್ನು ಕಳುಹಿಸಿಬಿಟ್ಟನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ಆ ಊರಲ್ಲೆಲ್ಲಾ ಸಾರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು