ಲೂಕ 8:8 - ಕನ್ನಡ ಸತ್ಯವೇದವು J.V. (BSI)8 ಇನ್ನು ಕೆಲವು ಬೀಜ ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ನೂರರಷ್ಟು ಫಲವನ್ನು ಕೊಟ್ಟವು. ಈ ಮಾತುಗಳನ್ನು ಹೇಳಿ ಆತನು - ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಎಂದು ಕೂಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು, ಮೊಳೆತು, ನೂರರಷ್ಟು ಫಲವನ್ನು ಕೊಟ್ಟವು.” ಈ ಮಾತುಗಳನ್ನು ಹೇಳಿ ಆತನು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಬೆಳೆದು ನೂರ್ಮಡಿ ಫಸಲನ್ನು ಕೊಟ್ಟವು.” ಈ ಸಾಮತಿಯನ್ನು ಮುಗಿಸಿದ ಮೇಲೆ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದವು. ಈ ಬೀಜಗಳು ಮೊಳೆತು ಬೆಳೆದು ನೂರರಷ್ಟು ಹೆಚ್ಚು ಫಲವನ್ನು ಕೊಟ್ಟವು.” ಯೇಸು ಈ ಸಾಮ್ಯವನ್ನು ಹೇಳಿ ಮುಗಿಸಿದ ಮೇಲೆ, “ನನ್ನ ಮಾತನ್ನು ಆಲಿಸುತ್ತಿರುವ ಜನರೇ, ಕೇಳಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಉಳಿದ ಬೀಜಗಳು ಒಳ್ಳೆಯ ನೆಲದ ಮೇಲೆ ಬಿದ್ದವು. ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು.” ಇದನ್ನು ಯೇಸು ಹೇಳಿ, “ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ,” ಎಂದು ಒತ್ತಿ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅನಿ ಉಲ್ಲೆ ಭ್ಹಿಂಯ್ ಬರ್‍ಯಾ ಮಾಟಿತ್ ಪಡ್ಲೆ ಝಾಡಾ ಮೊಟಿ ಹೊಲಿ, ಅನಿ ಸೆಂಬರ್ ವಾಟ್ಯಾನಿ ಫಳ್ ದಿಲ್ಯಾನಿ” “ತುಮ್ಕಾ ಆಯ್ಕುಕ್ ಮನ್ ರ್‍ಹಾಲ್ಯಾರ್ ಆಯ್ಕಾ?” ಮನುನ್ ಸಾಂಗುನ್ ಕಾನಿ ಮುಗಸ್ಲ್ಯಾನ್. ಅಧ್ಯಾಯವನ್ನು ನೋಡಿ |