Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:1 - ಕನ್ನಡ ಸತ್ಯವೇದವು J.V. (BSI)

1 ಆತನು ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಅಧಿಕಾರಗಳನ್ನು ಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಹನ್ನೆರಡು ಮಂದಿ ಪ್ರೇಷಿತರನ್ನು ಒಟ್ಟಿಗೆ ಕರೆದು ಎಲ್ಲ ದೆವ್ವಗಳನ್ನು ಬಿಡಿಸಲೂ ರೋಗ ನಿವಾರಣೆಮಾಡಲೂ ಅವರಿಗೆ‍ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ಒಟ್ಟಾಗಿ ಕರೆದು ಅವರಿಗೆ ಕಾಯಿಲೆಗಳನ್ನು ವಾಸಿಮಾಡುವ ಶಕ್ತಿಯನ್ನೂ ದೆವ್ವಗಳ ಮೇಲೆ ಅಧಿಕಾರವನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ಬಾರಾ ಶಿಸಾಕ್ನಿ ಎಕಾಕ್ಡೆ ಬಲ್ವುಲ್ಯಾನ್ ಅನಿ ಗಿರೆ ಕಾಡ್ತಲೊ ಅದಿಕಾರ್ ಅನಿ ಬಳ್ ತೆಂಕಾ ದಿಲ್ಯಾನ್, ಅನಿ ರೊಗಾ ಗುನ್ ಕರ್‍ತಲೊಬಿ ಬಳ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:1
15 ತಿಳಿವುಗಳ ಹೋಲಿಕೆ  

ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವನು ನಾನು ನಡಿಸುವ ಕ್ರಿಯೆಗಳನ್ನು ತಾನೂ ನಡಿಸುವನು; ಮತ್ತು ಅವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ನಡಿಸುವನು. ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವದೂ ನಿಮಗೆ ಕೇಡುಮಾಡುವದೇ ಇಲ್ಲ.


ಪರಲೋಕರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು; ಭೂಲೋಕದಲ್ಲಿ ನೀನು ಯಾವದನ್ನು ಕಟ್ಟುತ್ತೀಯೋ, ಅದು ಪರಲೋಕದಲ್ಲಿಯೂ ಕಟ್ಟಿರುವದು; ಮತ್ತು ಭೂಲೋಕದಲ್ಲಿ ನೀನು ಯಾವದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಿರುವದು ಅಂದನು.


ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ಪೇತ್ರನು ಅವನಿಗೆ - ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು. ಕೂಡಲೆ ಅವನು ಎದ್ದನು.


ನೀವು ನೋಡುವಂಥ ನಿಮಗೆ ಗುರುತಿರುವಂಥ ಈ ಮನುಷ್ಯನು ನೆಟ್ಟಗಾದದ್ದಕ್ಕೆ ಆತನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಪೂರ್ಣಕ್ಷೇಮವನ್ನು ಕೊಟ್ಟಿತು.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ನಾನು ಸಹ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ಹೋಗು ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ಬಾ ಎಂದು ಹೇಳಿದರೆ ಬರುತ್ತಾನೆ; ನನ್ನ ಆಳಿಗೆ ಇಂಥಿಂಥದನ್ನು ಮಾಡು ಎಂದು ಹೇಳಿದರೆ ಮಾಡುತ್ತಾನೆ ಅಂದನು.


ಇದಾದ ಮೇಲೆ ಸ್ವಾವಿುಯು ಇನ್ನೂ ಎಪ್ಪತ್ತು ಮಂದಿಯನ್ನು ನೇವಿುಸಿ ಅವರನ್ನು ಇಬ್ಬಿಬ್ಬರಾಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು