Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:18 - ಕನ್ನಡ ಸತ್ಯವೇದವು J.V. (BSI)

18 ಒಂದಾನೊಂದು ದಿವಸ ಆತನು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಆತನು - ನನ್ನನ್ನು ಸಾಮಾನ್ಯ ಜನರು ಯಾರು ಅನ್ನುತ್ತಾರೆ ಎಂದು ಅವರನ್ನು ಕೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, “ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. “ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?” ಎಂದು ಯೇಸು ಅವರನ್ನು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಮ್ಮೆ ಯೇಸು ಏಕಾಂತವಾಗಿ ಪ್ರಾರ್ಥನೆ ಮಾಡುತ್ತಿದ್ದನು. ಆತನ ಶಿಷ್ಯರು ಒಟ್ಟಾಗಿ ಅಲ್ಲಿಗೆ ಬಂದರು. ಯೇಸು ಅವರಿಗೆ, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ಏಕಾಂತವಾಗಿ ಪ್ರಾರ್ಥಿಸುತ್ತಿದ್ದಾಗ ಅವರ ಶಿಷ್ಯರು ಅವರೊಂದಿಗೆ ಇದ್ದರು, ಆಗ ಯೇಸು ಅವರಿಗೆ, “ಜನರು ನನ್ನನ್ನು ಯಾರೆನ್ನುತ್ತಾರೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಎಕ್ ದಿಸ್ ಜೆಜು ಎಕ್ಲೊಚ್ ಮಾಗ್ನಿ ಕರ್‍ತಾನಾ ಶಿಸಾ ತೆಚೆಕ್ಡೆ ಯೆಲಿ. ತೆನಿ ಶಿಸಾಕ್ನಿ “ಲೊಕಾ ಮಿಯಾ ಕೊನ್ ಮನುನ್ ಮನ್ತ್ಯಾತ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:18
11 ತಿಳಿವುಗಳ ಹೋಲಿಕೆ  

ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ - ಸ್ವಾಮೀ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆಮಾಡುವದನ್ನು ಕಲಿಸು ಎಂದು ಕೇಳಿದನು.


ಅನಂತರ ಯೇಸು ತನ್ನ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ತೋಟಕ್ಕೆ ಬಂದು ಅವರಿಗೆ - ಇಲ್ಲೇ ಕೂತುಕೊಳ್ಳಿರಿ, ನಾನು ಅತ್ತಲಾಗಿ ಹೋಗಿ ಪ್ರಾರ್ಥನೆ ಮಾಡಿ ಬರುತ್ತೇನೆ ಎಂದು ಹೇಳಿ


ಆತನು ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟ ಮೇಲೆ ಪ್ರಾರ್ಥನೆಮಾಡುವದಕ್ಕೆ ಏಕಾಂತವಾಗಿ ಬೆಟ್ಟವನ್ನು ಹತ್ತಿದನು. ಮತ್ತು ಹೊತ್ತು ಮುಳುಗಿದ ಮೇಲೆ ಒಬ್ಬನೇ ಅಲ್ಲಿ ಇದ್ದನು.


ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಲ್ಲಿ ಆಕಾಶವು ತೆರೆಯಿತು;


ಆ ದಿವಸಗಳಲ್ಲಿ ಆತನು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟಕ್ಕೆ ಹೋಗಿ ರಾತ್ರಿಯನ್ನೆಲ್ಲಾ ಪ್ರಾರ್ಥನೆಯಲ್ಲೇ ಕಳೆದನು.


ಅವರು - ನಿನ್ನನ್ನು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪೂರ್ವದ ಪ್ರವಾದಿಗಳಲ್ಲಿ ಯಾವನೋ ಒಬ್ಬನು ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.


ಯೇಸು ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿವಸಗಳಾದ ಮೇಲೆ ಪೇತ್ರ ಯೋಹಾನ ಯಾಕೋಬರನ್ನು ಕರಕೊಂಡು ಪ್ರಾರ್ಥನೆಮಾಡುವದಕ್ಕೆ ಬೆಟ್ಟವನ್ನು ಹತ್ತಿದನು.


ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬೇರೆಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು