Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:22 - ಕನ್ನಡ ಸತ್ಯವೇದವು J.V. (BSI)

22 ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು," ಎಂದು ಅವರಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಳಿಕ ಯೇಸು, “ಮನುಷ್ಯಕುಮಾರನು ಅನೇಕ ಸಂಕಟಗಳನ್ನು ಅನುಭವಿಸಬೇಕಾಗಿದೆ. ಆತನು ಹಿರಿಯ ಯೆಹೂದ್ಯನಾಯಕರಿಂದಲೂ ಮಹಾಯಾಜಕರಿಂದಲೂ ಧರ್ಮೋಪದೇಶಕರಿಂದಲೂ ತಿರಸ್ಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅನಂತರ ಯೇಸು, “ಮನುಷ್ಯಪುತ್ರನಾದ ನಾನು ಅನೇಕ ಕಷ್ಟಗಳನ್ನು ಅನುಭವಿಸಿ ಜನನಾಯಕರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ, ಕೊಲೆಗೆ ಗುರಿಯಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಏಳುವುದು ಅಗತ್ಯವಾಗಿದೆ,” ಎಂದು ಎಚ್ಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅನಿ ತೆನಿ “ಮಾನ್ಸಾಚ್ಯಾ ಲೆಕಾನ್ ಕಸ್ಟ್ ಸೊಸುಕ್ ಪಾಜೆ, ಅನಿ ಜಾನ್ತ್ಯಾಂಚ್ಯಾ, ಮುಖ್ಯ ಯಾಜಕಾಂಚ್ಯಾ ಅನಿ ಖಾಯ್ದೆ ಶಿಕ್ವುತಲ್ಯಾನಿಕ್ನಾ ಮರ್‍ಯಾದ್ ಕಾಡುನ್ ಘೆವ್ಕ್ ಪಾಜೆ. ತೆಕಾ ಜಿವಾನಿ ಮಾರ್‍ತ್ಯಾತ್. ಖರೆ ತಿನ್ ದಿಸಾ ಹೊಲ್ಲ್ಯಾ ಮಾನಾ, ತೊ ಝಿತ್ತೊ ಹೊವ್ನ್ ಉಟುನ್ ಯೆತಾ”, ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:22
24 ತಿಳಿವುಗಳ ಹೋಲಿಕೆ  

ಯೇಸು ಮಾಡಿದ ಎಲ್ಲಾ ಕಾರ್ಯಗಳಿಗೆ ಎಲ್ಲರು ಆಶ್ಚರ್ಯಪಡುತ್ತಿರಲಾಗಿ ಆತನು ತನ್ನ ಶಿಷ್ಯರಿಗೆ - ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ; ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬದನ್ನು ಅವರು ಪರಿಶೋಧನೆ ಮಾಡಿದರು.


ಯಾಕಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ - ಮನುಷ್ಯಕುಮಾರನು ಜನರ ಕೈಗೆ ಒಪ್ಪಿಸಲ್ಪಡುತ್ತಾನೆ; ಅವರು ಅವನನ್ನು ಕೊಲ್ಲುವರು; ಕೊಂದ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು ಹೇಳಿದನು.


ಇದಲ್ಲದೆ ಆತನು - ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತವಾಗಿ ಕೊಲ್ಲಲ್ಪಟ್ಟು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವದಕ್ಕೆ ಪ್ರಾರಂಭಮಾಡಿದನು.


ಆದರೆ ನಾನು ನಿಮಗೆ ಹೇಳುವದೇನಂದರೆ, ಎಲೀಯನು ಬಂದು ಹೋದನು; ಜನರು ಅವನ ಗುರುತು ಅರಿಯದೆ ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು. ಅವನಿಗಾದಂತೆ ಮನುಷ್ಯಕುಮಾರನಿಗೆ ಸಹ ಅವರ ಕಡೆಯಿಂದ ಹಿಂಸೆಯಾಗುವದು ಎಂದು ಉತ್ತರಕೊಟ್ಟನು.


ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.


ಕ್ರಿಸ್ತನು ಇಂಥ ಶ್ರಮಗಳನ್ನು ಅನುಭವಿಸಿ ತನ್ನ ಮಹಾಪದವಿಗೆ ಸೇರುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ


ಅವರು ಗಲಿಲಾಯದಲ್ಲಿ ಗುಂಪುಗುಂಪಾಗಿ ಕೂಡುತ್ತಿರುವಾಗ ಯೇಸು ಅವರಿಗೆ - ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಿಕೊಡಲ್ಪಡುವನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು; ತುಂಬಿತುಳುಕುವ ಪ್ರಲಯವು ಪಟ್ಟಣವನ್ನು ಕೊನೆಗಾಣಿಸುವದು; ಅಂತ್ಯದವರೆಗೂ ಯುದ್ಧವಾಗುವದು, ನಿಶ್ಚಿತನಾಶನಗಳು ಸಂಭವಿಸುವವು.


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ದೊರೆಯೇ, ಆ ಮೋಸಗಾರನು ಬದುಕಿದ್ದಾಗ ತಾನು ಮೂರು ದಿನದ ಮೇಲೆ ಏಳುತ್ತೇನೆ ಅಂತ ಹೇಳಿದ್ದು ನಮ್ಮ ನೆನಪಿಗೆ ಬಂತು;


ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಜನರಿಂದ ನಿರಾಕರಿಸಲ್ಪಡಬೇಕು.


ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು