Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:41 - ಕನ್ನಡ ಸತ್ಯವೇದವು J.V. (BSI)

41 ಅದಕ್ಕೆ ಯೇಸು - ಎಲಾ, ನಂಬಿಕೆಯಿಲ್ಲದಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ? ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಇದನ್ನಾಲಿಸಿದ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ದುಷ್ಟ ಪೀಳಿಗೆಯೇ, ಇನ್ನೆಷ್ಟುಕಾಲ ನಿಮ್ಮೊಂದಿಗಿದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆಗ ಯೇಸು, “ನಂಬಿಕೆಯಿಲ್ಲದ ದುಷ್ಟಸಂತಾನವೇ, ಇನೆಷ್ಟು ಕಾಲ ನಾನು ನಿಮ್ಮ ಸಂಗಡ ತಾಳ್ಮೆಯಿಂದ ಇರಲಿ?” ಎಂದು ಉತ್ತರಿಸಿ, ಆ ಮನುಷ್ಯನಿಗೆ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಿಮ್ಮನ್ನು ಸಹಿಸಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತನ್ನಾ ಜೆಜುನ್ “ಕವ್ಡೆ ಕಮಿ ವಿಶ್ವಾಸಾಚಿ ಲೊಕಾ ತುಮಿ? ಅನಿ ಕೌಡೆಪತರ್ ಮಿಯಾ ತುಮ್ಚ್ಯಾ ವಾಂಗ್ಡಾ ರಾವ್ಚೆ? ಅನಿ ಕವ್ಡೊ ಎಳ್ ಮಿಯಾ ತುಮ್ಕಾ ಸೊಸುನ್ ಘೆವ್ನ್ ಜಾವ್ಚೆ?” ಮಟ್ಲ್ಯಾನ್. ಮಾನಾ ತ್ಯಾ ಮಾನ್ಸಾಕ್ “ತುಜ್ಯಾ ಲೆಕಾಕ್ ಹಿಕ್ಡಿ ಘೆವ್ನ್ ಯೆ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:41
31 ತಿಳಿವುಗಳ ಹೋಲಿಕೆ  

ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.


ಆಮೇಲೆ ತೋಮನಿಗೆ - ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು; ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬದವನಾಗಿರಬೇಡ, ನಂಬುವವನಾಗು ಎಂದು ಹೇಳಿದನು.


ಯೇಸು ಅವನಿಗೆ - ಫಿಲಿಪ್ಪನೇ, ನಾನು ಇಷ್ಟು ದಿವಸ ನಿಮ್ಮ ಸಂಗಡ ಇದ್ದರೂ ನೀನು ಇನ್ನೂ ನನ್ನನ್ನು ಅರಿತುಕೊಳ್ಳಲಿಲ್ಲವೇ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ನಮಗೆ ತಂದೆಯನ್ನು ತೋರಿಸೆಂದು ನೀನು ಹೇಳುವದು ಹೇಗೆ?


ಅದಕ್ಕಾತನು - ಎಲಾ, ನಂಬಿಕೆಯಿಲ್ಲದಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಅನ್ನಲು


ಅದಕ್ಕೆ ಯೇಸು - ಎಲಾ, ನಂಬಿಕೆಯಿಲ್ಲದಂಥ ಮೂರ್ಖ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಆದದರಿಂದ ನಾವು ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸಪಡೋಣ; ನಮ್ಮಲ್ಲಿ ಒಬ್ಬರಾದರೂ ಅವರ ಅವಿಧೇಯತ್ವವನ್ನು ಅನುಸರಿಸುವವರಾಗಬಾರದು.


ಅವರಿಗೆ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಆ ಕಾಲದಲ್ಲಿ ಕೇಳಿದವರು ನಂಬದೆಹೋದ ಕಾರಣ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.


ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.


ಆತನ ಅಪಾರವಾದ ದಯಾ ಸಹನ ದೀರ್ಘಶಾಂತಿಗಳನ್ನು ಅಸಡ್ಡೆಮಾಡುತ್ತೀಯಾ? ಮನಸ್ಸನ್ನು ಬೇರೆಮಾಡಿಕೊಳ್ಳುವದಕ್ಕೆ ದೇವರ ಉಪಕಾರವು ನಿನ್ನನ್ನು ಪ್ರೇರಿಸುತ್ತದೆಂಬದು ನಿನಗೆ ಗೊತ್ತಿಲ್ಲವೇ?


ಆತನು ಸುಮಾರು ನಾಲ್ವತ್ತು ವರುಷಗಳವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿಕೊಂಡು


ಬೇರೆ ಅನೇಕವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು - ವಕ್ರಬುದ್ಧಿಯುಳ್ಳ ಈ ಸಂತತಿಯವರಿಂದ ತಪ್ಪಿಸಿಕೊಳ್ಳಿರಿ ಎಂದು ಅವರನ್ನು ಎಚ್ಚರಿಸಿದನು.


ತರುವಾಯ ಆತನು - ನಿಮ್ಮ ನಂಬಿಕೆ ಎಲ್ಲಿ? ಎಂದು ಅವರನ್ನು ಕೇಳಿದನು. ಅವರಾದರೋ ಭಯಪಟ್ಟು - ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ; ಅವು ಕೂಡ ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡು ಅತ್ಯಾಶ್ಚರ್ಯಪಟ್ಟರು.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ; ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ ಎಂದು ಉತ್ತರಕೊಟ್ಟು ಅವರನ್ನು ಬಿಟ್ಟುಹೋದನು.


ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ.


ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ನನ್ನ ಮಹತ್ಕೃತ್ಯಗಳನ್ನು ಮರೆಯದೆ ನನ್ನಲ್ಲಿಯೇ ಭರವಸವಿಟ್ಟು ನನ್ನ ಆಜ್ಞೆಗಳನ್ನು ಕೈಕೊಂಡಾರು ಎಂಬದೇ.


ಇಸ್ರಾಯೇಲ್ಯರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ - ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು; ಇಸ್ರಾಯೇಲ್ಯರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬದು ಅವನಿಗೆ ಗೊತ್ತಾಗಲಿ ಎಂದು ಹೇಳಿ ಕಳುಹಿಸಿದನು.


ಯೆಹೋವನು ಮೋಶೆಗೆ - ಈ ಜನರು ಇನ್ನು ಎಷ್ಟರ ಮಟ್ಟಿಗೆ ನನ್ನನ್ನು ಅಲಕ್ಷ್ಯಮಾಡುವರೋ; ನಾನು ನಡಿಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರೋ.


ಆಗ ಯೆಹೋವನು ಮೋಶೆಗೆ - ನೀವು ಎಲ್ಲಿಯವರೆಗೂ ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರೋ;


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಆಗ ಯೇಸು ನಿಂತು - ಅವನನ್ನು ಕರೆಯಿರಿ ಅನ್ನಲು ಅವರು ಆ ಕುರುಡನನ್ನು ಕರೆದು - ಧೈರ್ಯವಿರಲಿ, ಏಳು, ನಿನ್ನನ್ನು ಕರೆಯುತ್ತಾನೆ ಅಂದರು.


ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.


ಅದೆಲ್ಲಾ ಈ ಸಂತತಿಯವರ ಮೇಲೆ ಬರುವದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರಕೊಂಡು ಬರುವದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವದು. ಇದರಂತೆಯೇ ಈ ಕೆಟ್ಟ ಸಂತತಿಗೆ ಆಗುವದು ಅಂದನು.


ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುವೆನು.


ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರನ್ನು ಬೇಡಿಕೊಂಡೆನು. ಆದರೆ ಅವರಿಂದ ಆಗದೆಹೋಯಿತು ಎಂದು ಕೂಗಿ ಹೇಳಿದನು.


ಆ ಹುಡುಗನು ಇನ್ನೂ ಬರುತ್ತಿರುವಾಗ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಯ ಕೈಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು