Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:43 - ಕನ್ನಡ ಸತ್ಯವೇದವು J.V. (BSI)

43 ಅದನ್ನು ನೋಡಿ ಎಲ್ಲರು ದೇವರ ಮಹತ್ವಕ್ಕೆ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು. ಯೇಸುಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ದೇವರ ಮಹತ್ವವನ್ನು ಕಂಡ ಎಲ್ಲರೂ ಆಶ್ಚರ್ಯಚಕಿತರಾದರು. ಯೇಸುಸ್ವಾಮಿ ಮಾಡಿದ ಸಕಲ ಮಹತ್ಕಾರ್ಯಗಳನ್ನು ಕುರಿತು ಜನರೆಲ್ಲರೂ ಸೋಜಿಗಪಡುತ್ತಿರುವಲ್ಲಿ, ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಜನರೆಲ್ಲರೂ ದೇವರ ಮಹಾಶಕ್ತಿಯನ್ನು ಕಂಡು ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಜನರು ಇನ್ನೂ ಆಶ್ಚರ್ಯಚಕಿತರಾಗಿದ್ದರು. ಯೇಸು ತನ್ನ ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆಗ ಜನರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ, ಯೇಸು ತಮ್ಮ ಶಿಷ್ಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಥೈ ಹೊತ್ತಿ ಸಗ್ಳಿ ಲೊಕಾ ದೆವಾಚೊ ಬಳ್ ಬಗುನ್ ಅಜಾಪ್ ಹೊಲಿ. ಜೆಜುನ್ ಕರಲ್ಲ್ಯಾ ಕಾಮಾಕ್ನಿ ಬಗುನ್ ಸಗ್ಳಿ ಲೊಕಾ ಅಜಾಪ್ ಹೊವ್ಕ್ ಲಾಗಲ್ಲಿ, ತನ್ನಾ ಜೆಜುನ್ ಶಿಸಾಕ್ನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:43
14 ತಿಳಿವುಗಳ ಹೋಲಿಕೆ  

ಅವರು ಗಲಿಲಾಯದಲ್ಲಿ ಗುಂಪುಗುಂಪಾಗಿ ಕೂಡುತ್ತಿರುವಾಗ ಯೇಸು ಅವರಿಗೆ - ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಿಕೊಡಲ್ಪಡುವನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವರಾಗಿಯೇ ತಿಳಿಯಪಡಿಸಿದೆವು.


ತರುವಾಯ ಆತನು - ನಿಮ್ಮ ನಂಬಿಕೆ ಎಲ್ಲಿ? ಎಂದು ಅವರನ್ನು ಕೇಳಿದನು. ಅವರಾದರೋ ಭಯಪಟ್ಟು - ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ; ಅವು ಕೂಡ ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡು ಅತ್ಯಾಶ್ಚರ್ಯಪಟ್ಟರು.


ನೋಡಿದವರೆಲ್ಲರು ಬೆರಗಾಗಿ ದೇವರನ್ನು ಕೊಂಡಾಡಿದರು; ಮತ್ತು ಅವರು ಭಯದಿಂದ ತುಂಬಿದವರಾಗಿ - ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು ಅಂದರು.


ಅದಕ್ಕೆ ಎಲ್ಲರು ಬೆರಗಾಗಿ - ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ ಬಲದಿಂದಲೂ ದೆವ್ವಗಳಿಗೆ ಅಪ್ಪಣೆ ಕೊಡುತ್ತಾನೆ, ಅವು ಬಿಟ್ಟುಹೋಗುತ್ತವೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ? ಇದು ಸೇನಾಧೀಶ್ವರ ಯೆಹೋವನ ನುಡಿ.


ಯಾಕಂದರೆ ಅವನಿಗೂ ಅವನ ಸಂಗಡ ಇದ್ದವರೆಲ್ಲರಿಗೂ ತಾವು ಹಿಡಿದ ಮೀನುಗಳ ನಿವಿುತ್ತ ವಿಸ್ಮಯ ಹಿಡಿದಿತ್ತು;


ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬಂದ ಮೇಲೆ ಗಾಳಿ ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹಳವಾಗಿ ಬೆರಗಾದರು.


ನೀನು ನನ್ನನ್ನು ಅದ್ಭುತವಾಗಿಯೂ ವಿಚಿತ್ರವಾಗಿಯೂ ರಚಿಸಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.


ಆ ಹುಡುಗನು ಇನ್ನೂ ಬರುತ್ತಿರುವಾಗ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಯ ಕೈಗೆ ಕೊಟ್ಟನು.


ತಕ್ಷಣವೇ ಅವನಿಗೆ ಕಣ್ಣುಬಂದವು; ಅವನು ದೇವರನ್ನು ಕೊಂಡಾಡುತ್ತಾ ಆತನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು